ಮೀಸಲಾತಿ ಕುರಿತು ಪೋಸ್ಟ್: ಬಿಜೆಪಿ ಐಟಿ ಸೆಲ್‌ ಸಂಚಾಲಕ ಪ್ರಶಾಂತ್‌ ಬಂಧನ, ಬಳಿಕ ಜಾಮೀನಿನ ಮೇಲೆ ಬಿಡುಗಡೆ

ಎಸ್‌ಸಿ ಮತ್ತು ಎಸ್‌ಟಿ ಮೀಸಲಾತಿಯನ್ನು ಮುಸ್ಲಿಮರಿಗೆ ಹಂಚುವ ಕುರಿತು ವಿಡಿಯೋ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕರ್ನಾಟಕ ಸಾಮಾಜಿಕ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಪ್ರಶಾಂತ್ ಮಾಕನೂರು ಬಂಧನ
ಪ್ರಶಾಂತ್ ಮಾಕನೂರು
ಪ್ರಶಾಂತ್ ಮಾಕನೂರು

ಬೆಂಗಳೂರು: ಎಸ್‌ಸಿ ಮತ್ತು ಎಸ್‌ಟಿ ಮೀಸಲಾತಿಯನ್ನು ಮುಸ್ಲಿಮರಿಗೆ ಹಂಚುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕರ್ನಾಟಕ ಸಾಮಾಜಿಕ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಪ್ರಶಾಂತ್ ಮಾಕನೂರು ಅವರನ್ನು ನಗರ ಪೊಲೀಸರು ಗುರುವಾರ ಬಂಧಿಸಿದ್ದು, ಬಳಿಕ ನಿರೀಕ್ಷಣಾ ಜಾಮೀನು ಪಡೆದಿದ್ದ ಅವರನ್ನು ಬಿಡುಗಡೆ ಮಾಡಲಾಗಿದೆ.

ಇದಕ್ಕೂ ಮುನ್ನ ಇದೇ ಪ್ರಕರಣ ಸಂಬಂಧ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಐಟಿ ಸೆಲ್ ರಾಷ್ಟ್ರೀಯ ಮುಖ್ಯಸ್ಥ ಅಮಿತ್ ಮಾಳವಿಯಾ ಅವರಿಗೆ ಈ ಸಂಬಂಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದರು.

ಪ್ರಶಾಂತ್ ಮಾಕನೂರು ಅವರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಶಾಂತ್ ಮಾಕನೂರು
EC ನಿರ್ದೇಶನ: ಮುಸ್ಲಿಂ ಮೀಸಲಾತಿ ಕುರಿತ ಬಿಜೆಪಿ ವಿಡಿಯೋ ತೆಗೆದುಹಾಕಿದ 'X'!

ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮೇ 5 ರಂದು ಚುನಾವಣಾ ಆಯೋಗ ಮತ್ತು ಪೊಲೀಸರಿಗೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಜನ ಪ್ರತಿನಿಧಿಗಳ ಕಾಯ್ದೆ ಹಾಗೂ ಸೆಕ್ಷನ್ 505 (2) (ವರ್ಗಗಳ ನಡುವೆ ದ್ವೇಷ ಅಥವಾ ದ್ವೇಷವನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು) ಅಡಿಯಲ್ಲಿ ಮೂವರು ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿ ಹೈ ಗ್ರೌಂಡ್ಸ್ ಪೊಲೀಸರು ನೋಟಿಸ್‌ ಜಾರಿ ಮಾಡಿ 7 ದಿನಗಳೊಳಗೆ ಉತ್ತರಿಸುವಂತೆ ಸೂಚಿಸಿದ್ದರು. ಇದರ ಬೆನ್ನಲೇ ಇಂದು ರಾಜ್ಯ ಬಿಜೆಪಿ ಐಟಿ ಸೆಲ್ ಸಂಚಾಲಕ ಪ್ರಶಾಂತ್ ಮಾಕನೂರು ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಪ್ರಶಾಂತ್ ಮಾಕನೂರು ಕೋರ್ಟ್​ನ ನಿರೀಕ್ಷಣಾ ಜಾಮೀನು ಆದೇಶ ಪ್ರತಿ ಪೊಲೀಸರ ಮುಂದೆ ಹಾಜರು ಪಡಿಸಿದ್ದಾರೆ. ಹೀಗಾಗಿ ಪ್ರಶಾಂತ್ ಮಾಕನೂರ್ ಅವರ ಹೇಳಿಕೆ ದಾಖಲಿಸಿಕೊಂಡು ಬಿಡುಗಡೆ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com