
ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಜನತಾ ದಳ (ಜಾತ್ಯತೀತ)ದ ನಡುವೆ ವಾಕ್ಸಮರ ಮುಂದುವರೆದಿದ್ದು, ಈ ನಡುವಲ್ಲೇ ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರಿಸುವಂತೆ ಜೆಡಿಎಸ್ ಮಹಿಳಾ ಘಟಕ ಆಗ್ರಹಿಸಿದೆ.
ಪ್ರಕರಣದ ತನಿಖೆಗೆ ರಚಿಸಿರುವ ಎಸ್‌ಐಟಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಲ್ಲಿ ವಿಫಲವಾಗಿದ್ದು, ತನಿಖೆಯನ್ನು ಸಿಬಿಐಗೆ ವಹಿಸಿ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಮಹಿಳಾ ಘಟಕವು ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಮಾಡಿದೆ.
ಸಂತ್ರಸ್ತರ ವೀಡಿಯೋ ಪ್ರಸಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡುವಂತೆಯೂ ಇದೇ ವಏಳೆ ಆಯೋಗವನ್ನು ಒತ್ತಾಯಿಸಿದೆ.
ಇದೇ ವೇಳೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಮುಖಂಡ ಹಾಗೂ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ಮುಂದುವರಿಸಿದ್ದು, ವಿಡಿಯೊಗಳನ್ನು ವಿವೇಚನಾರಹಿತವಾಗಿ ಪ್ರಸಾರ ಮಾಡಿದವರನ್ನು ಸರ್ಕಾರ ರಕ್ಷಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಅಪಹರಣ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಆಕೆಯ ಸಂಬಂಧಿಕರ ಮನೆಯಿಂದ ಕರೆತರಲಾಗಿತ್ತೇ ಹೊರದು ಪೊಲೀಸ್ ಅಧಿಕಾರಿಗಳು ಹೇಳಿದಂತೆ ಫಾರ್ಮ್‌ಹೌಸ್‌ನಿಂದ ರಕ್ಷಿಸಿಲ್ಲ ಪ್ರಕರಣದಲ್ಲಿ ಸಂತ್ರಸ್ತರೆಂದು ಹೇಳಲಾದ 12 ಮಹಿಳೆಯರನ್ನು ಬೆಂಗಳೂರಿನ ಕುಮಾರ ಕೃಪಾ ಅತಿಥಿ ಗೃಹದಲ್ಲಿ ಇರಿಸಲಾಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಪೆನ್ ಡ್ರೈವ್ ಕೇಸ್ ನಲ್ಲಿ ತೊಡಗಿರುವವರಿಗೆ ನೋಟಿಸ್ ಜಾರಿ ಮಾಡಿಲ್ಲ ಎಂದೂ ಪ್ರಶ್ನಿಸಿದ್ದಾರೆ.
Advertisement