SSLC results 2024: ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ, ಬಾಲಕಿಯರೇ ಮೇಲುಗೈ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ (SSLC Results 2024) ಗುರುವಾರ ಪ್ರಕಟವಾಗಿದ್ದು, ರಾಜ್ಯದಲ್ಲಿ ಒಟ್ಟಾರೆ ಶೇ 73.40 ರಷ್ಟು ಮಂದಿ ತೇರ್ಗಡೆಯಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ (SSLC Results 2024) ಗುರುವಾರ ಪ್ರಕಟವಾಗಿದ್ದು, ರಾಜ್ಯದಲ್ಲಿ ಒಟ್ಟಾರೆ ಶೇ 73.40 ರಷ್ಟು ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ವಿದ್ಯಾರ್ಥಿಯ ನೋಂದಾಯಿತ ಮೊಬೈಲ್​ ನಂಬರ್​ಗೂ ಸಹ ಫಲಿತಾಂಶದ ವಿವರದ ಎಸ್​ಎಂಎಸ್​ ಕಳುಹಿಸಲಾಗುವುದು ಎಂದು ಮಂಜುಶ್ರೀ ತಿಳಿಸಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಕೂಡ ವೀಕ್ಷಿಸಬಹುದಾಗಿದೆ. ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಒಟ್ಟು 8,59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರದ್ದೇ ಮೈಲುಗೈಯಾಗಿದೆ. ಈ ಬಾರಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.

ಅಲ್ಲದೆ, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಕರ್ನಾಟಕದ 2,750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.

ಉಡುಪಿ ಜಿಲ್ಲೆಗೆ ಮೊದಲ ಸ್ಥಾನ: ಈ ಬಾರಿ ಉಡುಪಿ ಜಿಲ್ಲೆಗೆ ಶೇಕಡಾ 94ರೊಂದಿಗೆ ಮೊದಲ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ, ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ.

ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ: ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು 625ಕ್ಕೆ 625 ಅಂಕ ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದ್ದಾರೆ. ಇವರು ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಮೆಳ್ಳಿಗೇರಿಯವರಾಗಿದ್ದಾರೆ. ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಾರೆ.

ಅಂಕಿತಾ ಬಸಪ್ಪ ಕೊನ್ನೂರು
ಅಂಕಿತಾ ಬಸಪ್ಪ ಕೊನ್ನೂರು

625ಕ್ಕೆ 624 ಅಂಕವನ್ನು 7 ವಿದ್ಯಾರ್ಥಿಗಳು, 623 ಅಂಕಗಳನ್ನು 14 ವಿದ್ಯಾರ್ಥಿಗಳು, 622 ಅಂಕವನ್ನು 21 ವಿದ್ಯಾರ್ಥಿಗಳು, 621 ಅಂಕವನ್ನು 44 ವಿದ್ಯಾರ್ಥಿಗಳು ಮತ್ತು 620 ಅಂಕವನ್ನು 64 ವಿದ್ಯಾರ್ಥಿಗಳು ಪಡೆದಿದ್ದಾರೆ.

ಅತಿ ಹೆಚ್ಚು ಅಂಕ ಪಡೆದವರು: ಅಂಕಿತಾ ಬಸಪ್ಪ ಕೊನ್ನೂರು (ಬಾಗಲಕೋಟೆ) 625/625 (ಪ್ರಥಮ)

ಮೇದಾ ಪಿ ಶೆಟ್ಟಿ (ಬೆಂಗಳೂರು) 625ಕ್ಕೆ 624 ಅಂಕ

ಹರ್ಷಿತಾ ಡಿಎಂ (ಮಧುಗಿರಿ) 625ಕ್ಕೆ 624 ಅಂಕ

ಚಿನ್ಮಯ್ (ದಕ್ಷಿಣ ಕನ್ನಡ)

ಸಿದ್ದಾಂತ್ (ಚಿಕ್ಕೊಡಿ )

ದರ್ಶನ್ (ಶಿರಸಿ)

ಚಿನ್ಮಯ್ (ಶಿರಸಿ)

ಶ್ರೀರಾಮ್ (ಶಿರಸಿ)

ದಕ್ಷಿಣ ಕನ್ನಡ ಜಿಲ್ಲೆ ಶೇ 92.12, ಶಿವಮೊಗ್ಗ ಜಿಲ್ಲೆ ಶೇ 88.67, ಕೊಡಗು ಜಿಲ್ಲೆ ಶೇ 88.67 ರ ಫಲಿತಾಂಶ ದಾಖಲಿಸಿವೆ.ಈ ಬಾರಿಯ ಫಲಿತಾಂಶ ಪ್ರಮಾಣ ಶೇ 73.40 ಆಗಿದ್ದು, ಕಳೆದ ಬಾರಿಗಿಂತ ಶೇ 10ರಷ್ಟು ಕಡಿಮೆ ಆಗಿದೆ. ಕಳೆದ ವರ್ಷ ಶೇ 83.89ರಷ್ಟು ಫಲಿತಾಂಶ ದಾಖಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com