ಲೈಂಗಿಕ ದೌರ್ಜನ್ಯ: ಮಹಿಳೆ ಅಪಹರಣ ಸಂಬಂಧ ಇನ್ನೂ ನಾಲ್ವರ ಬಂಧನ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆಗೆ ರಚಿಸಲಾಗಿದ್ದ ವಿಶೇಷ ತನಿಖಾ ತಂಡ ಮಹಿಳೆಯೊಬ್ಬರನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ನಾಲ್ವರನ್ನು ಬಂಧಿಸಿದೆ ಎಂದು ಎಸ್‌ಐಟಿ ಮೂಲಗಳು ಗುರುವಾರ ತಿಳಿಸಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆಗೆ ರಚಿಸಲಾಗಿದ್ದ ವಿಶೇಷ ತನಿಖಾ ತಂಡ ಮಹಿಳೆಯೊಬ್ಬರನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ನಾಲ್ವರನ್ನು ಬಂಧಿಸಿದೆ ಎಂದು ಎಸ್‌ಐಟಿ ಮೂಲಗಳು ಗುರುವಾರ ತಿಳಿಸಿವೆ.

ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ತಂದೆ ಹೊಳೆನರಸೀಪುರ ಶಾಸಕ ಹೆಚ್. ಡಿ. ರೇವಣ್ಣ ಅವರನ್ನು ಎಸ್ ಐಟಿ ಈಗಾಗಲೇ ಬಂಧಿಸಿದ್ದು, ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರಕರಣದಲ್ಲಿ ಅವರ ಪಾತ್ರವನ್ನು ಕಂಡುಹಿಡಿಯಲು ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಲ್ವರೂ ಮೈಸೂರಿನ ಕೆ.ಆರ್. ನಗರದವರು.

ಸಾಂದರ್ಭಿಕ ಚಿತ್ರ
ಪ್ರಜ್ವಲ್ ಪ್ರಕರಣ: ರೇವಣ್ಣ, ಬಾಬಣ್ಣ ಸೇರಿ ಮೂವರ ಬಂಧನ; 3ನೇ ಆರೋಪಿ ಬಗ್ಗೆ ಮಾಹಿತಿ ನೀಡಿದರೆ ತನಿಖೆ ಮೇಲೆ ಪರಿಣಾಮ- ಪರಮೇಶ್ವರ

ಇದೇ ಪ್ರಕರಣದಲ್ಲಿ ರೇವಣ್ಣ ಅವರ ಆಪ್ತ ಸತೀಶ್ ಬಾಬಣ್ಣ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಮೂರನೇ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಬುಧವಾರ ಹೇಳಿದ್ದರು, ಆದರೆ ತನಿಖಾ ಕಾರ್ಯವಿಧಾನಗಳನ್ನು ಉಲ್ಲೇಖಿಸಿ ಅವರ ಗುರುತನ್ನು ಬಹಿರಂಗಪಡಿಸಲು ನಿರಾಕರಿಸಿದರು.

ಮೂರು ಮಕ್ಕಳ ತಾಯಿಯಾಗಿರುವ ಮಹಿಳೆಯನ್ನು ಆಕೆಯ ಮನೆಯಿಂದ ಅಪಹರಿಸಿ ಅಕ್ರಮ ಬಂಧನದಲ್ಲಿಟ್ಟ ಆರೋಪದಲ್ಲಿ ರೇವಣ್ಣ ಮತ್ತು ಬಾಬಣ್ಣ ಅವರನ್ನು ಮೊದಲು ಬಂಧಿಸಲಾಗಿದ್ದು, ಮಹಿಳೆಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜ್ವಲ್‌ನಿಂದ ಅತ್ಯಾಚಾರ ಮತ್ತು ಕಿರುಕುಳಕ್ಕೊಳಗಾದ ಮಹಿಳೆಯರ ಬಗ್ಗೆ ಇತ್ತೀಚೆಗೆ ವೈರಲ್ ಆದ ವಿಡಿಯೋಗಳಲ್ಲಿ ತನ್ನ ತಾಯಿ ಕಾಣಿಸಿಕೊಂಡಿದ್ದಾಳೆ ಎಂದು ಆರೋಪಿಸಿ ಸಂತ್ರಸ್ತ ಮಹಿಳೆಯ 20 ವರ್ಷದ ಮಗ ಕೆ.ಆರ್. ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com