SSLC ಫಲಿತಾಂಶ ಪ್ರಕಟ; ಆನ್ ಲೈನ್ ನಲ್ಲಿ ನೋಡುವುದು ಹೇಗೆ?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results 2024) ಇಂದು ಗುರುವಾರ ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಈ ಬಗ್ಗೆ ಈಗಾಗಲೇ ಮಾಹಿತಿ ನೀಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results 2024) ಇಂದು ಗುರುವಾರ ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಈ ಬಗ್ಗೆ ಈಗಾಗಲೇ ಮಾಹಿತಿ ನೀಡಿದ್ದಾರೆ. ಈ ಬಾರಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.

ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಇಂದು ಬೆಳಗ್ಗೆ 10.30ರ ನಂತರ ವೀಕ್ಷಿಸಬಹುದಾಗಿದೆ.

ಎಸ್​ಎಸ್​ಎಲ್​​ಸಿ ಫಲಿತಾಂಶ, ಆನ್​ಲೈನ್​ನಲ್ಲಿ ನೋಡುವುದು ಹೇಗೆ?:

ಅಧಿಕೃತ ವೆಬ್​ಸೈಟ್ karresults.nic.in ಗೆ ಭೇಟಿ ನೀಡಿ

ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ

ಹೊಸ ಲಾಗಿನ್ ಪುಟವು ತೆರೆಯುತ್ತದೆ

ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ

ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್​ಲೋಡ್ ಮಾಡಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com