ಅಶ್ಲೀಲ ವಿಡಿಯೋ ಪ್ರಕರಣ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು!

ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್​. ಡಿ ರೇವಣ್ಣ ಅವರ ಪುತ್ರ, ಸಂಸದ ಪ್ರಜ್ವಲ್​​ ರೇವಣ್ಣ ಅವರ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.
Prajwal Revanna Case
ಪ್ರಜ್ವಲ್ ರೇವಣ್ಣ
Updated on

ಬೆಂಗಳೂರು: ಲೈಂಗಿಕ ದೌರ್ಜನ್ಯ, ಕಿರುಕುಳ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್​. ಡಿ ರೇವಣ್ಣ ಅವರ ಪುತ್ರ, ಸಂಸದ ಪ್ರಜ್ವಲ್​​ ರೇವಣ್ಣ ಅವರ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.

ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿಯಲ್ಲಿ ಪ್ರಜ್ವಲ್​ ರೇವಣ್ಣ ವಿರುದ್ಧ ಹೊಸದಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದು ಪ್ರಜ್ವಲ್​ ರೇವಣ್ಣ ಅವರ ವಿರುದ್ಧ ದಾಖಲಾದ ಎರಡನೇ ಪ್ರಕರಣವಾಗಿದೆ.

ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಅಧಿಕಾರಿಗಳು, ವಿಡಿಯೋದಲ್ಲಿದ್ದ ಕೆಲ ಮಹಿಳೆಯರನ್ನು ಸಂಪರ್ಕಿಸಿ ದೂರು ನೀಡುವಂತೆ ಹೇಳಿದ್ದರು. ಈ ಪೈಕಿ ಮಹಿಳೆಯೊಬ್ಬರು ಎಸ್​ಐಟಿ ಅಧಿಕಾರಿಗಳ ಬಳಿ ಹೇಳಿಕೆ ನೀಡಿದ್ದಾರೆಂದು ತಿಳಿದುಬಂದಿದೆ.

Prajwal Revanna Case
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತರಿಗೆ HDK ಬೆದರಿಕೆ, SITಗೆ ಕಾಂಗ್ರೆಸ್ ದೂರು

ಈ ಹೇಳಿಕೆ ಆಧರಿಸಿ ಅಧಿಕಾರಿಗಳು ಈಗಾಗಲೇ ಲೈಂಗಿಕ ದೌರ್ಜನ್ಯ ಆರೋಪದಡಿ ದಾಖಲಾಗಿದ್ದ ಎಫ್​ಐಆರ್​ಗೆ ಹೊಸದಾಗಿ ಐಪಿಸಿ ಸೆಕ್ಷನ್​​ 376 ಅನ್ನು ಸೇರ್ಪಡೆಗೊಳಿಸುವ ಮೂಲಕ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ವರದಿಗಳು ತಿಳಿಸಿವೆ.

ತಮ್ಮ ಮನೆಯ ಮಹಿಳಾ ಕೆಲಸದಾಳಿಗೆ ಲೈಂಗಿಕ ದೌರ್ಜನ್ಯ, ಕಿರುಕುಳ ನೀಡಿದ ಆರೋಪದ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ಸಂಸದ ಪ್ರಜ್ವಲ್​ ರೇವಣ್ಣ ಮತ್ತು ಮಾಜಿ ಸಚಿವ ಹೆಚ್​​.ಡಿ ರೇವಣ್ಣ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು.

ಈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ತಂದೆ-ಮಗನಿಗೆ ಎಸ್​ಐಟಿ ನೋಟಿಸ್​ ನೀಡಿದೆ. ಆದರೆ ಎಸ್​ಐಟಿ ವಿಚಾರಣೆಗೆ ಹಾಜರಾಗದೆ ಕಾಲಾವಕಾಶ ಕೋರಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಎರಡನೇ ದೂರು ದಾಖಲಾಗಿರುವುದು ಪ್ರಜ್ವಲ್​ ರೇವಣ್ಣಗೆ ಮತ್ತಷ್ಟು ಸಂಕಷ್ಟ ತಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com