ಸಿಬಿಐ ತನಿಖೆ ಏಕೆ? SIT ಅಧಿಕಾರಿಗಳ ಮೇಲೆ ನಂಬಿಕೆಯಿದೆ, ಯಾರ ಹಸ್ತಕ್ಷೇಪವಿಲ್ಲ: ಸಿಎಂ ಸಿದ್ದರಾಮಯ್ಯ

ಇಂದು ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಹಿಂದೆ ಸಿಬಿಐಗೆ ನೀಡಿದ್ದ ಡಿ ಕೆ ರವಿ ಕೇಸು ಏನಾಯಿತು, ಇಂದು ಸಿಬಿಐ ತನಿಖೆಗೆ ವಹಿಸಿ ಎಂದು ಒತ್ತಾಯ ಮಾಡುವವರು ಹಿಂದೆ ಟೀಕೆ ಮಾಡಿದ್ದರು. ನನಗೆ ಎಸ್ ಐಟಿ ತನಿಖೆ ಮೇಲೆ ಸಂಪೂರ್ಣ ನಂಬಿಕೆಯಿದೆ, ಅವರು ಸೂಕ್ತ ತನಿಖೆ ಮಾಡಿ ವರದಿ ಸಲ್ಲಿಸುತ್ತಾರೆ ಎಂದರು.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜ್ಯದ ಎಲ್ಲಾ ಕ್ರಿಮಿನಲ್ ಕೇಸುಗಳನ್ನು ನಮ್ಮ ಪೊಲೀಸರು ತನಿಖೆ ನಡೆಸುತ್ತಾರೆ. ಎಸ್ ಐಟಿ ಎಂದರೆ ನಮ್ಮ ಪೊಲೀಸರೇ ತನಿಖೆ ನಡೆಸುವುದು, ನಮ್ಮ ಪೊಲೀಸರ ಮೇಲೆ ನನಗೆ ನಂಬಿಕೆಯಿದೆ, ಕಾನೂನು ಪ್ರಕಾರ ಎಸ್ ಐಟಿ ರಚನೆ ಮಾಡಿದ್ದೇವೆ, ನಮ್ಮ ಪೊಲೀಸರ ಮೇಲೆ ನನಗೆ ನಂಬಿಕೆಯಿದೆ ಅವರು ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣ ತನಿಖೆ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ಮಾಡಿ ವರದಿ ನೀಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಹಿಂದೆ ಸಿಬಿಐಗೆ ನೀಡಿದ್ದ ಡಿ ಕೆ ರವಿ ಕೇಸು ಏನಾಯಿತು, ಇಂದು ಸಿಬಿಐ ತನಿಖೆಗೆ ವಹಿಸಿ ಎಂದು ಒತ್ತಾಯ ಮಾಡುವವರು ಹಿಂದೆ ಟೀಕೆ ಮಾಡಿದ್ದರು. ಬಿಜೆಪಿ ಆಡಳಿತದಲ್ಲಿ ಸಿಬಿಐಗೆ ಒಂದೇ ಒಂದು ಕೇಸು ಕೊಡಲಿಲ್ಲ. ಬಿಜೆಪಿಯವರು ಸಿಬಿಐಗೆ ಕರಪ್ಷನ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ಎನ್ನುತ್ತಿದ್ದರು.

ಚೋರ್ ಬಚಾವ್ ಸಂಸ್ಥೆ ಎಂದು ದೇವೇಗೌಡರು ಹೇಳಿದ್ದರು. ಈಗ ನೋಡಿದರೆ ಸಿಬಿಐಗೆ ಕೊಡಿ ಎನ್ನುತ್ತಿದ್ದಾರೆ. ಇದರ ಅರ್ಥ ಏನು, ಸರಿಯಾದ ದಾರಿಯಲ್ಲಿ ತನಿಖೆ ನಡೆಯುತ್ತಿದೆ ಎಂಬ ನಂಬಿಕೆ ನನಗಿದೆ. ನಾನು ಯಾವತ್ತೂ ಪೊಲೀಸರಿಗೆ ಕಾನೂನಿಗೆ ವಿರುದ್ಧವಾಗಿ ತನಿಖೆ ಮಾಡಿ ಎಂದು ಹೇಳುವುದಿಲ್ಲ. ಎಸ್ ಐಟಿ ಮೇಲೆ ನಂಬಿಕೆ ಇದೆ, ನಮ್ಮ ಪೊಲೀಸ್ ಮೇಲೆ ಅವರಿಗೆ ನಂಬಿಕೆ ಇಲ್ವಾ ಎಂದು ಪ್ರಶ್ನಿಸಿದರು.

ಈ ಹಿಂದೆ ಸಿಬಿಐಗೆ ನಾವೇ ಲಾಟರಿ ಕೇಸು, ಕೆಜೆ ಜಾರ್ಜ್ ಕೇಸು, ಡಿಕೆ ರವಿ ಕೇಸು ಕೊಟ್ಟಿದ್ದೆವು. ಆ ಪ್ರಕರಣದಲ್ಲಿ ಯಾರಿಗಾದರೂ ಶಿಕ್ಷೆಯಾಗಿದೆಯೇ, ಹಾಗಂತ ನನಗೆ ಸಿಬಿಐ ಮೇಲೆ ನಂಬಿಕೆ ಇಲ್ಲ ಎಂದರ್ಥವಲ್ಲ, ಈ ಪ್ರಕರಣದಲ್ಲಿ ನಮ್ಮ ಪೊಲೀಸರೇ ತನಿಖೆ ಮಾಡುತ್ತಾರೆ ಎಂದರು,

ಯಾರ ಹಸ್ತಕ್ಷೇಪವೂ ಇಲ್ಲ: ಪ್ರಜ್ವಲ್ ರೇವಣ್ಣ ಕೇಸಿನಲ್ಲಿ ಯಾರ ಹಸ್ತಕ್ಷೇಪ, ಒತ್ತಡವಿಲ್ಲ, ನಾನಾಗಲಿ, ಡಿ ಕೆ ಶಿವಕುಮಾರ್ ಆಗಲಿ ಮಧ್ಯೆಪ್ರವೇಶಿಸುತ್ತಿಲ್ಲ, ಪ್ರಭಾವ ಬೀರುತ್ತಿಲ್ಲ, ತನಿಖೆಯ ಹಾದಿ ತಪ್ಪಿಸುತ್ತಲೂ ಇಲ್ಲ, ಸತ್ಯಾಸತ್ಯತೆ ಹೊರಬರುತ್ತದೆ. ಪ್ರಕರಣಕ್ಕೆ ಅಂತಾರಾಷ್ಟ್ರೀಯ ಸಂಪರ್ಕ ಇದೆ ಎಂಬುದೆಲ್ಲಾ ನಿಜವಲ್ಲ. ಈ ಪ್ರಕರಣವನ್ನು ಸಿಬಿಐಗೆ ವಹಿಸಲಿ ಎನ್ನುವ ಕಾರಣಕ್ಕೆ ಈ ರೀತಿ ಹೇಳುತ್ತಿದ್ದಾರಷ್ಟೆ ಎಂದರು.

ಸಿಎಂ ಸಿದ್ದರಾಮಯ್ಯ
ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ: SIT ತನಿಖೆ ದಾರಿ ತಪ್ಪಿದೆ; ರಾಜ್ಯಪಾಲರಿಗೆ ಜೆಡಿಎಸ್ ದೂರು

ಅರ್ಜಿ ಸಲ್ಲಿಸಿದ್ದು ಏಕೆ?:

ರೇವಣ್ಣ ವಿರುದ್ಧ ಏನೂ ಕೇಸು ಇಲ್ಲ ಎಂದಾದ ಮೇಲೆ ನಿರೀಕ್ಷಣಾ ಜಾಮೀನು ಅರ್ಜಿ ಹಾಕಿದ್ದು ಏಕೆ, ಇದರಲ್ಲಿ ರಾಜಕೀಯವೇನಿದೆ, ಅಪರಾಧವಾಗಿಲ್ಲ ಎಂದಾದರೆ ಜಾಮೀನು ಅರ್ಜಿ ತಿರಸ್ಕಾರ ಏಕಾಕಿದೆ ಎಂದು ಕೇಳಿದರು.

ಮೊರಾರ್ಜಿ ದೇಸಾಯಿ ಶಾಲೆ ವಿದ್ಯಾರ್ಥಿನಿ ಸಾಧನೆ ಕೊಂಡಾಡಿದ ಸಿಎಂ:

ಮಕ್ಕಳಿಗೆ ಒಳ್ಳೆ ಶಿಕ್ಷಣ ಸಿಗಲಿ ಎಂದು ಮೊರಾರ್ಜಿ ದೇಸಾಯಿ ವಸತಿ ಶಾಲೆ ತೆರೆಯಲಾಗಿದೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು. ಪ್ರತಿ ಹೋಬಳಿಗೆ ಒಂದೊಂದು ವಸತಿ ಶಾಲೆ ತೆಗೆದಿದ್ದೇವೆ. 900ಕ್ಕೂ ಹೆಚ್ಚು ಶಾಲೆಗಳಿವೆ. ಹೆಣ್ಣು ಮಗಳು ಮೊದಲ ರ್‍ಯಾಂಕ್ ಬಂದಿದ್ದಾಳೆ, ಅವಳಿಗೆ ಅಭಿನಂದನೆಗಳು ಎಂದು ಸಿಎಂ ಸಿದ್ದರಾಮಯ್ಯ ಪ್ರಶಂಸಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com