ಸೆಕ್ಸ್ ವಿಡಿಯೋ ಹಗರಣ: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚಿಕ್ಕಮಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಮಧ್ಯೆ ಪ್ರಜ್ವಲ್ ರೇವಣ್ಣರ ವಿಡಿಯೋ ಮತ್ತು ಫೋಟೋಗಳನ್ನು ಅಪ್ಲೋಡ್ ಮಾಡಿದ್ದ ಟ್ರೋಲ್ ಪೇಜ್ ಅಡ್ಮಿನ್ ಒಬ್ಬ ನನ್ನು ಪೊಲೀಸರು ಬಂಧಿಸಿದ್ದಾರೆ.

ಕುದುರೆಮುಖ ಠಾಣೆ ಪೊಲೀಸರು ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಪ್ರಜ್ವಲ್, ಪ್ರಜ್ವಲ್​ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್​ನಲ್ಲಿ ಅಪ್ಲೋಡ್​ ಮಾಡಿದ್ದನು.

ಸಂಗ್ರಹ ಚಿತ್ರ
ಅಶ್ಲೀಲ ವಿಡಿಯೋ ಪ್ರಕರಣ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು!

ಈ ಸಂಬಂಧ ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್​ 67,67 (ಎ) ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪ್ರಜ್ವಲ್​ ಟ್ರೋಲ್ ಪೇಜ್ ಅಡ್ಮಿನ್ ಸಹ ಆಗಿದ್ದಾನೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com