
ಬೆಳಗಾವಿ: ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಕ್ರೂಸರ್ ವಾಹನ ಪಲ್ಟಿಯಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಮೂವರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ನಡೆದಿದೆ.
ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದಾಗ ಜತ್ತ ಬಳಿ ಕ್ರೂಸರ್ ಟೈರ್ ಬ್ಲಾಸ್ಟ್ ಆಗಿ ಈ ಅಪಘಾತ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತರನ್ನು ಮಹಾದೇವಿ ಚೌಗಲಾ, ಗೀತಾ ದೊಡ್ಡಮನಿ ಹಾಗೂ ಕಸ್ತೂರಿ ಎಂದು ಗುರುತಿಸಲಾಗಿದೆ.
ಬಳ್ಳಿಗೇರಿ ಗ್ರಾಮದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಕ್ಕೆ ಹಸ್ತಾಂತರ ಮಾಡಿದ್ದಾರೆ.
Advertisement