
ಬೆಂಗಳೂರು: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ವಿದೇಶಾಂಗ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ತೀವ್ರ ನಿಗಾ ಘಟಕದಲ್ಲಿದ್ದು, ತೀವ್ರ ನಿಗಾ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಖಾಸಗಿ ಆಸ್ಪತ್ರೆ ಶನಿವಾರ ತಿಳಿಸಿದೆ.
92 ವರ್ಷದ ಹಿರಿಯ ನಾಯಕ ಎಸ್ಎಂ ಕೃಷ್ಣ ಅವರನ್ನು ಏಪ್ರಿಲ್ 29 ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವಯೋಸಹಜ ಕಾಯಿಯಲೆಯಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಎಸ್ ಎಂ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.
ಎಸ್.ಎಂ.ಕೃಷ್ಣ ಅವರಿಗೆ ಡಾ.ಸತ್ಯನಾರಾಯಣ ಮೈಸೂರು ಹಾಗೂ ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡ ಚಿಕಿತ್ಸೆ ನಿಡುತ್ತಿದೆ ಎಂದು ಮಣಿಪಾಲ್ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ಎಸ್ ಎಂ ಕೃಷ್ಣ ಅವರು ಮಹಾರಾಷ್ಟ್ರ ರಾಜ್ಯಪಾಲರಾಗಿ ಮತ್ತು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.
Advertisement