
ಬೆಂಗಳೂರು: ಕೆಎಎಸ್ ಅಧಿಕಾರಿ ಪತ್ನಿಯೂ ಆಗಿರುವ ಹೈಕೋರ್ಟ್ ವಕೀಲರಾದ ಚೈತ್ರಾಗೌಡ ಅವರು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಕೆಎಎಸ್ ಅಧಿಕಾರಿ ಶಿವಕುಮಾರ್ ಅವರ ಪತ್ನಿ ಚೈತ್ರಾಗೌಡ ಅವರು ಇಂದು ಸಂಜಯ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫ್ಯಾನ್ಗೆ ನೇಣುಬಿಗಿದ ಸ್ಥಿತಿಯಲ್ಲಿ ಅವರ ಶವಪತ್ತೆ ಆಗಿದೆ
ಮನೆಯಲ್ಲಿ ಯಾವುದೇ ಡೆತ್ನೋಟ್ ಪತ್ತೆಯಾಗಿಲ್ಲ. ಹೀಗಾಗಿ ಸಾವಿಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಸದ್ಯ ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಮೃತ ದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಈ ಸಂಬಂಧ ಮೃತ ಚೈತ್ರಾ ಗೌಡ ಅವರ ಸಹೋದರ ಕೊಟ್ಟ ದೂರಿನ ಆಧಾರದ ಮೇಲೆ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Advertisement