ಮೂವರ ಖಾಸಗಿ ಅಂಗಕ್ಕೆ ವಿದ್ಯುತ್ ಶಾಕ್ ನೀಡಿ ಚಿತ್ರಹಿಂಸೆ, ಏಳು ಮಂದಿಯ ಬಂಧನ

ಸೆಕೆಂಡ್‌ ಹ್ಯಾಂಡ್‌ ಕಾರ್‌ ಡೀಲರ್‌ ಹಾಗೂ ಇನ್ನಿಬ್ಬರ ಖಾಸಗಿ ಅಂಗಗಳಿಗೆ ವಿದ್ಯುತ್‌ ಶಾಕ್‌ ನೀಡಿ ಚಿತ್ರಹಿಂಸೆ ನೀಡಿದ ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಲಬುರಗಿ: ಸೆಕೆಂಡ್‌ ಹ್ಯಾಂಡ್‌ ಕಾರ್‌ ಡೀಲರ್‌ ಹಾಗೂ ಇನ್ನಿಬ್ಬರ ಖಾಸಗಿ ಅಂಗಗಳಿಗೆ ವಿದ್ಯುತ್‌ ಶಾಕ್‌ ನೀಡಿ ಚಿತ್ರಹಿಂಸೆ ನೀಡಿದ ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಸಂತ್ರಸ್ತರ ಖಾಸಗಿ ಅಂಗಗಳಿಗೆ ಅಪಹರಣಕಾರರು ವಿದ್ಯುತ್ ಶಾಕ್ ನೀಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು: ವಿದ್ಯಾರ್ಥಿನಿಯರಿಗೆ ಖಾಸಗಿ ಅಂಗ ತೋರಿಸಿ ಕಿರುಕುಳ: ವ್ಯಕ್ತಿಯ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು, ಪೋಕ್ಸೋ ಪ್ರಕರಣ ದಾಖಲು

ಬಂಧಿತರನ್ನು ಇಮ್ರಾನ್ ಪಟೇಲ್, ಮೊಹಮ್ಮದ್ ಮತೀನ್, ಮೊಹಮ್ಮದ್ ಜಿಯಾ ಹುಲ್ ಹುಸೇನ್, ಮೊಹಮ್ಮದ್ ಅಪ್ಜಲ್ ಶೇಕ್, ಹುಸೇನ್ ಶೇಕ್, ರಮೇಶ್ ಹಾಗೂ ಸಾಗರ್ ಎಂದು ಗುರುತಿಸಲಾಗಿದೆ. ಇತರ ಹಲವರು ಈ ಗ್ಯಾಂಗ್ ನಲ್ಲಿದ್ದು, ಅವರಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ವಾಹನ ವಿತರಣೆಯಲ್ಲಿ ವಿಳಂಬ ಮಾಡಿದ ಆರೋಪದಲ್ಲಿ ಸೆಕೆಂಡ್ ಹ್ಯಾಂಡ್ ಕಾರ್ ಡೀಲರ್ ರಮೇಶ್ ಮಡಿವಾಳ, ಸಮೀರುದ್ದೀನ್ ಮತ್ತು ಅಬ್ದುಲ್ ರೆಹಮಾನ್ ಅವರಿಗೆ ಚಿತ್ರಹಿಂಸೆ ನೀಡಿದ ಆರೋಪಿಗಳು ಬಿಡುಗಡೆಗೆ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದು, ಘಟನೆಯಲ್ಲಿ ಭಾಗಿಯಾದ ಇತರರ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com