ಕೊಡಗು ಮೀಸಲು ಅರಣ್ಯದಲ್ಲಿ ಸಾವಿರಾರು ಮರಗಳ ಮಾರಣ ಹೋಮ: ಬೆಂಕಿ ಹಚ್ಚಿದ ಕಿಡಿಗೇಡಿಗಳು!

ಕೊಡಗಿನ ತಲಕಾವೇರಿ ಅಭಯಾರಣ್ಯದ ಸಮೀಪವಿರುವ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾವಿರಾರು ಮರಗಳನ್ನು ಕತ್ತರಿಸಲಾಗಿದೆ.
ಪದಿನಾಲ್ಕು ಕಾಡು ಅರಣ್ಯದಲ್ಲಿ ಮರಗಳನ್ನು ಕತ್ತರಿಸಿರುವುದು
ಪದಿನಾಲ್ಕು ಕಾಡು ಅರಣ್ಯದಲ್ಲಿ ಮರಗಳನ್ನು ಕತ್ತರಿಸಿರುವುದು
Updated on

ಮಡಿಕೇರಿ: ಕೊಡಗಿನ ತಲಕಾವೇರಿ ಅಭಯಾರಣ್ಯದ ಸಮೀಪವಿರುವ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾವಿರಾರು ಮರಗಳನ್ನು ಕತ್ತರಿಸಲಾಗಿದೆ.

ಕೊಡಗು ಏಕೀಕರಣ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ವಿಷಯ ಪ್ರಸ್ತಾಪಿಸಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯದಲ್ಲಿ ಮರಗಳ್ಳರ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ವಿರಾಜಪೇಟೆ ಶಾಸಕ ಎಎಸ್ ಪೊನ್ನಣ್ಣ ಅವರಿಗೆ ದೂರು ಸಲ್ಲಿಸಿದ್ದಾರೆ.

ತಲಕಾವೇರಿ ಅಭಯಾರಣ್ಯದ ಅಂಚಿನಲ್ಲಿರುವ ಪದಿನಾಲ್ಕುನಾಡು ಮೀಸಲು ಅರಣ್ಯ ಪ್ರದೇಶದ ಮುಂಡ್ರೋಟ್ ಅರಣ್ಯ ಶ್ರೇಣಿಯು 6,000 ಕ್ಕೂ ಹೆಚ್ಚು ಜಾತಿಯ ಮರಗಳು ಮತ್ತು ಸಸ್ಯಗಳಿಗೆ ನೆಲೆಯಾಗಿದೆ. ಆದರೆ, ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾವಿರಾರು ಮರಗಳನ್ನು ಕಡಿದು ಹಾಕಲಾಗಿದ್ದು, ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಾಕ್ಷ್ಯನಾಶ ಮಾಡುವ ನಿಟ್ಟಿನಲ್ಲಿ ಅವರು ತಲಕಾವೇರಿ ಅಭಯಾರಣ್ಯ ಪ್ರದೇಶದಾದ್ಯಂತ ಕಾಡ್ಗಿಚ್ಚು ಹರಡುವ ಅಪಾಯವನ್ನುಂಟುಮಾಡುವ ಮರಗಳನ್ನು ಸುಟ್ಟುಹಾಕಿದ್ದಾರೆ.

ಪದಿನಾಲ್ಕು ಕಾಡು ಅರಣ್ಯದಲ್ಲಿ ಮರಗಳನ್ನು ಕತ್ತರಿಸಿರುವುದು
ಕೊಡಗು: ಮೀಸಲು ಅರಣ್ಯ ಪ್ರದೇಶದಲ್ಲಿ ಸಾವಿರಾರು ಮರ ಕಡಿದು, ಬೆಂಕಿ!

ಕೊಡಗು ಏಕೀಕರಣ ರಂಗ ವೇದಿಕೆ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿದಾಗ 5 ಎಕರೆಗೂ ಹೆಚ್ಚು ಮೀಸಲು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವುದು ಕಂಡು ಬಂದಿದೆ. ಮೀಸಲು ಅರಣ್ಯ ಪ್ರದೇಶದಲ್ಲಿ ಕಡಿಯಲಾಗಿದೆಯೇ ಅಥವಾ ಮೀಸಲು ಅರಣ್ಯ ಪ್ರದೇಶಕ್ಕೆ ತಾಗಿಕೊಂಡಿರುವ ಖಾಸಗಿ ಜಮೀನಿನಲ್ಲಿ ಕತ್ತರಿಸಲಾಗಿದೆಯೇ ಎಂಬುದು ಇಲಾಖೆಯಿಂದ ತಿಳಿಸಬೇಕಾಗಿದೆ ಎಂದು ವಿರಾಜಪೇಟೆ ಡಿಸಿಎಫ್ ಜಗನಾಥ್ ಹೇಳಿದ್ದಾರೆ.

ಆದರೆ, ಮೀಸಲು ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಇಲಾಖೆ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಫ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com