
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ ರಾಸಲೀಲೆ ವಿಡಿಯೋಗಳ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪಿ ಲಿಖಿತ್ ಗೌಡ ಮತ್ತು ಚೇತನ್ ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಭಾನುವಾರ ಆದೇಶ ಹೊರಡಿಸಿದೆ.
ಇಂದು ಬೆಳಗ್ಗೆ ಮಾಜಿ ಶಾಸಕ ಪ್ರೀತಂಗೌಡ ಆಪ್ತರಾದ ಪಿ ಲಿಖಿತ್ ಗೌಡ ಮತ್ತು ಅವರ ಕಚೇರಿ ಸಿಬ್ಬಂದಿ ಚೇತನ್ ಅವರನ್ನು ಬಂಧಿಸಿದ ವಿಶೇಷ ತನಿಖಾ ಅಧಿಕಾರಿಗಳು ವಿಚಾರಣೆ, ಮಹಜರು ಬಳಿಕ ನಗರದ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಹಾಜರುಪಡಿಸಿದರು. ಕೋರ್ಟ್ ನ್ಯಾಯಾಧೀಶರು ಆರೋಪಿಗಳಿಗೆ ಮೇ 25ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಗಾಲೇ ಮಾಜಿ ಸಚಿವ ಹೆಚ್. ಡಿ. ರೇವಣ್ಣ, ವಕೀಲ ದೇವರಾಜೇಗೌಡ ಅವರನ್ನು ಬಂಧಿಸಿ ಜೈಲಿಗಟ್ಟಿರುವ ಎಸ್ ಐಟಿ, ಲಿಖಿತ್ ಗೌಡ ಮತ್ತು ಅವರ ಕಚೇರಿ ಸಿಬ್ಬಂದಿ ಚೇತನ್ನನ್ನು ಬಂಧಿಸುವಲ್ಲಿಯೂ ಯಶಸ್ವಿಯಾಗಿದೆ. ಇದೀಗ ನವೀನ್ ಗೌಡ ಮತ್ತು ಪುಟ್ಟರಾಜು ಎಂಬುವರಿಗಾಗಿ ಅಧಿಕಾರಿಗಳು ಹುಡುಕಾಟ ತೀವ್ರಗೊಳಿಸಿದ್ದಾರೆ.
Advertisement