
ಬೆಂಗಳೂರು: ಹೈಕೋರ್ಟ್ ವಕೀಲೆ ಹಾಗೂ ಬ್ಯಾಡ್ಮಿಂಟನ್ ಆಟಗಾರ್ತಿ ಚೈತ್ರಾ ಗೌಡ ಸಾವಿನ ಪ್ರಕರಣದ ತನಿಖೆಗೆ ಎಲ್ಲ ರೀತಿಯ ಕ್ರಮ ಕೈಗೊಂಡು ಸೂಕ್ತ ನ್ಯಾಯ ಒದಗಿಸಬೇಕು ಎಂದು ಬೆಂಗಳೂರು ವಕೀಲರ ಸಂಘ ಶನಿವಾರ ಆಗ್ರಹಿಸಿದೆ.
ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ಅಧ್ಯಕ್ಷ ವಿವೇಕ ಸುಬ್ಬಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಟಿ ಜಿ ರವಿ ಹಾಗೂ ಖಜಾಂಚಿ ಎಂ ಟಿ ಹರೀಶ್, ಈ ಸಾವು ಇಡೀ ವಕೀಲ ವೃಂದಕ್ಕೆ ಆಘಾತ ಉಂಟುಮಾಡಿದೆ ಎಂದು ಹೇಳಿದ್ದಾರೆ.
ಆಕೆಯ ಸ್ನೇಹಿತೆಯರಿಂದ ನಮಗೆ ತಿಳಿದು ಬಂದಿರುವಂತೆ ಚೈತ್ರಾ ಗೌಡ ಸದೃಢ ಮನಸ್ಥಿತಿ ಹೊಂದಿದವರಾಗಿದ್ದರು. ಅವರು ಆತ್ಮಹತ್ಯೆ ಮಾಡಿಕೊಳ್ಳುವಂತಹ ಮಹಿಳೆ ಆಗಿರಲಿಲ್ಲ ಎಂದು ಪತ್ರದಲ್ಲಿ ವಿವರಿಸಲಾಗಿದೆ.
ಈ ಸಾವಿನ ಬಗ್ಗೆ ಕೂಡಲೇ ತನಿಖೆ ನಡೆಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಲಾಗಿದೆ.
Advertisement