ಒಳಚರಂಡಿ, ರಾಜಕಾಲುವೆಗೆ ತ್ಯಾಜ್ಯ ನೀರು: ಅನಧಿಕೃತ 2137 ಸಂಪರ್ಕ ಪತ್ತೆ

ಬೆಂಗಳೂರು ಜಲಮಂಡಳಿಯಿಂದ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಅನಧಿಕೃತವಾಗಿ ತ್ಯಾಜ್ಯ ನೀರನ್ನು ಒಳಚರಂಡಿಗೆ ಹಾಗೂ ರಾಜಕಾಲುವಗೆ ಹರಿಸುತ್ತಿರುವವರ ಸಂಪರ್ಕ ಪತ್ತೆ ಕಾರ್ಯ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಬೆಂಗಳೂರು ಜಲಮಂಡಳಿಯಿಂದ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಅನಧಿಕೃತವಾಗಿ ತ್ಯಾಜ್ಯ ನೀರನ್ನು ಒಳಚರಂಡಿಗೆ ಹಾಗೂ ರಾಜಕಾಲುವಗೆ ಹರಿಸುತ್ತಿರುವವರ ಸಂಪರ್ಕ ಪತ್ತೆ ಕಾರ್ಯ ನಡೆದಿದೆ.

ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಈ ಕುರಿತು ಮಾತನಾಡಿ, 17,793 ಕಡೆಗಳಲ್ಲಿ ಸರ್ವೆ ನಡೆಸಲಾಗಿದ್ದು, 2137 ಅನಧಿಕೃತ ಸಂಪರ್ಕಗಳನ್ನು ಪತ್ತೆ ಹಚ್ಚಲಾಗಿದೆ. ಸಕ್ರಮಗೊಳಿಸಲು ಮುಂದಾಗದೆ ಇರುವವರ ಮೇಲೆ ದಂಡ ವಿಧಿಸುವ ನೋಟೀಸ್ ನೀಡಲಾಗುತ್ತಿದ್ದು, ಅನಧಿಕೃತ ಸಂಪರ್ಕಗಳನ್ನು ಸಕ್ರಮಗೊಳಿಸಿಕೊಳ್ಳುವ ನಿಟ್ಟಿನಲ್ಲಿ ಜನರು ಸ್ವಯಂ ಪ್ರೇರಿತರಾಗಿ ಮುಂದಾಗಬೇಕು ಎಂದು ಹೇಳಿದರು.

ಜಲಮಂಡಳಿಯಿಂದ ಅಧಿಕೃತವಾಗಿ ಸಂಪರ್ಕ ಪಡೆಯದೆ ಕೆಲವೆಡೆ ಅನಧಿಕೃತವಾಗಿ ತ್ಯಾಜ್ಯ ನೀರನ್ನು ಒಳಚರಂಡಿಗೆ ಹರಿಸಲಾಗುತ್ತಿದೆ. ಹೀಗೆ ಅನಧಿಕೃತ ಸಂಪರ್ಕದಿಂದ ಒಳಚರಂಡಿ ಮೇಲೆ ಒತ್ತಡ ಹೆಚ್ಚಾಗಿ ಹಲವಾರು ಕಡೆಗಳಲ್ಲಿ ರಸ್ತೆಗಳಲ್ಲಿ ತ್ಯಾಜ್ಯ ನೀರು ಹರಿಯುವ ಸಾಧ್ಯತೆ ಹೆಚ್ಚಾಗುತ್ತದೆ. ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಆಗುತ್ತದೆ. ಇದನ್ನು ತಡೆಯುವ ದೃಷ್ಟಿಯಿಂದ ಅನಧಿಕೃತ ಸಂಪರ್ಕಗಳನ್ನು ಸಕ್ರಮಗೊಳಿಸಿಕೊಳ್ಳಲು ಎ.24 ರಿಂದ ಅವಕಾಶ ನೀಡಲಾಗಿತ್ತು. ಅಲ್ಲದೇ, ಅಧಿಕಾರಿಗಳು ಪರಿಶೀಲನೆ ಕಾರ್ಯವನ್ನು ಚುರುಕುಗೊಳಿಸುವಂತೆಯೂ ಸೂಚನೆ ನೀಡಲಾಗಿತ್ತು ಎಂದು ತಿಳಿಸಿದರು.

ಸಂಗ್ರಹ ಚಿತ್ರ
ಮಳೆ ನೀರು ಒಳಚರಂಡಿಗೆ ಸೇರದಂತೆ ಮುಂಜಾಗ್ರತೆ ವಹಿಸಿ: ಜಲಮಂಡಳಿ ಅಧ್ಯಕ್ಷ ಡಾ ರಾಮ್‌ ಪ್ರಸಾತ್‌ ಮನೋಹರ್‌ ಸೂಚನೆ

ಈ ಹಿನ್ನೆಲೆಯಲ್ಲಿ ತಮ್ಮ ವ್ಯಾಪ್ತಿಯಲ್ಲಿ ಅಧಿಕಾರಿಗಳು ಅನಧಿಕೃತವಾಗಿ ತ್ಯಾಜ್ಯ ನೀರನ್ನು ಒಳಚರಂಡಿಗೆ ಹರಿಯಬಿಡುತ್ತಿರುವುದರ ಪರಿಶೀಲನೆ ಕಾರ್ಯವನ್ನು ಚುರುಕುಗೊಳಿಸಿದ್ದಾರೆ. ಇಂದಿನವರೆಗೂ ನಗರದಲ್ಲಿ 17,793 ಕಡೆಗಳಲ್ಲಿ ಸರ್ವೆಯನ್ನು ನಡೆಸಲಾಗಿದೆ. 587 ಅಪಾರ್ಟ್‍ಮೆಂಟ್‍ಗಳನ್ನು ಒಳಗೊಂಡಂತೆ ಅನಧಿಕೃತವಾಗಿ ಸಂಪರ್ಕ ಪಡೆದಿರುವ 2,137 ಸಂಪರ್ಕಗಳನ್ನ ಪತ್ತೆಹಚ್ಚಲಾಗಿದೆ. ಇವುಗಳಲ್ಲಿ 260 ಸಂಪರ್ಕಗಳು ಅಧಿಕೃತಗೊಳಿಸಲು ಅರ್ಜಿಯನ್ನು ಸಲ್ಲಿಸಿವೆ ಎಂದು ಅವರು ಮಾಹಿತಿ ನೀಡಿದರು.

149 ಸಂಪರ್ಕಗಳಿಗೆ ಡಿಮ್ಯಾಂಡ್ ನೋಟೀಸ್ ಜಾರಿಗೊಳಿಸಲಾಗಿದ್ದು, 60 ಸಂಪರ್ಕಗಳಿಂದ ದಂಡವನ್ನು ವಸೂಲು ಮಾಡಲಾಗಿದೆ. ಇದರ ಜೊತೆಯಲ್ಲೇ 1,390 ಸಂಪರ್ಕಗಳಿಗೆ ನೋಟೀಸ್ ಜಾರಿಗೊಳಿಸಲಾಗಿದೆ. ಮಳೆಗಾಲದಲ್ಲಿ ಅನಧಿಕೃತ ಸಂಪರ್ಕಗಳಿಂದ ಬರುವಂತಹ ತ್ಯಾಜ್ಯ ನೀರು ನಮ್ಮ ಒಳಚರಂಡಿ ವ್ಯವಸ್ಥೆಯ ಮೇಲೆ ಒತ್ತಡವನ್ನು ಹೆಚ್ಚು ಮಾಡುತ್ತದೆ.

ಅಲ್ಲದೇ ಇದನ್ನು ತಡೆಯುವುದು ಹಾಗೂ ನಗರವನ್ನು ಸ್ವಚ್ಛವಾಗಿ ಇರಿಸುವುದು ನಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ತಮ್ಮ ಅನಧಿಕೃತ ಸಂಪರ್ಕಗಳನ್ನು ಸಕ್ರಮಗೊಳಿಸಿಕೊಳ್ಳಲು ಸ್ವಯಂ ಪ್ರೇರಿತರಾಗಿ ಮುಂದಾಗಬೇಕು. ಇಲ್ಲದಿದ್ದಲ್ಲಿ ಮುಂದಿನ ವಾರದಿಂದ ಇನ್ನೂ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com