ಕುಮಾರಸ್ವಾಮಿ ಏನು ಸಾಚಾನ? ಅವರು ಕೂಡ ಜೈಲಿಗೆ ಹೋಗುವ ಕಾಲ ಹತ್ತಿರ ಬಂದಿದೆ: 'ಕೈ'ಶಾಸಕ ಕದಲೂರು ಉದಯ್

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ರಾಜಕೀಯ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ.
ಹೆಚ್ ಡಿ ಕುಮಾರಸ್ವಾಮಿ, ಶಾಸಕ ಕದಲೂರು ಉದಯ್(ಸಂಗ್ರಹ ಚಿತ್ರ)
ಹೆಚ್ ಡಿ ಕುಮಾರಸ್ವಾಮಿ, ಶಾಸಕ ಕದಲೂರು ಉದಯ್(ಸಂಗ್ರಹ ಚಿತ್ರ)
Updated on

ಮಂಡ್ಯ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ರಾಜಕೀಯ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ.

ಪ್ರಕರಣದಲ್ಲಿ ಈಗಾಗಲೇ ಮಾಜಿ ಸಚಿವ ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ಬಂಧನವಾಗಿದೆ. ಅದೇ ರೀತಿ ಮಾಜಿ ಸಿಎಂ ಜೆಡಿಎಸ್ ಅಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಕೂಡ ಬಂಧನವಾಗುವ ದಿನ ದೂರವಿಲ್ಲ ಎಂದು ಮದ್ದೂರು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಮೂಲಕ ಕುಮಾರಸ್ವಾಮಿಯವರ ವೈಯಕ್ತಿಕ ಜೀವನವನ್ನು ಕೆದಕಿದ್ದಾರೆ.

ಹೆಚ್ ಡಿ ಕುಮಾರಸ್ವಾಮಿ, ಶಾಸಕ ಕದಲೂರು ಉದಯ್(ಸಂಗ್ರಹ ಚಿತ್ರ)
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಹೈಡ್ರಾಮಾ ಬಳಿಕ ದೇವರಾಜೇಗೌಡ ಬಂಧನ

ಕುಮಾರಸ್ವಾಮಿ ಏನು ಸಾಚ ಅಲ್ಲ. ರೇವಣ್ಣನಂತೆ ಕುಮಾರಸ್ವಾಮಿ ಜೈಲಿಗೆ ಹೋಗುವ ಕಾಲ ಹತ್ತಿರ ಬಂದಿದೆ. ಕುಮಾರಸ್ವಾಮಿ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಕುಮಾರಸ್ವಾಮಿ ಲೈಂಗಿಕ ದೌರ್ಜನ್ಯ ಮಾಡಿರುವ ಬಗ್ಗೆ ಕೇಳಿದ್ದೇವೆ. ರಾಧಿಕಾ ಅವರನ್ನ ಪತ್ನಿ ರೀತಿ ಕಾಣುತ್ತಿದ್ದಾರಾ? ಪೆನ್‌ಡ್ರೈವ್ ಪ್ರಕರಣಬಳಿಕ ಕುಮಾರಸ್ವಾಮಿ ವಿರುದ್ಧವೂ ದೂರು ಕೊಡಲು ಧೈರ್ಯ ಮಾಡಲಿದ್ದಾರೆ ಎಂದರು.

ಮಂಡ್ಯದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ದಿ‌ನ ಯಾರು ಬಂದು ದೂರು ಕೊಡಲು ಧೈರ್ಯ ಮಾಡಿರಲಿಲ್ಲ. ಕುಮಾರಸ್ವಾಮಿ ಲೈಂಗಿಕ ದೌರ್ಜನ್ಯ ಮಾಡಿರುವ ಬಗ್ಗೆ ಕೇಳಿದ್ದೇವೆ. ರಾಧಿಕಾ ಅವರನ್ನ ಪತ್ನಿ ರೀತಿ ಕಾಣುತ್ತಿದ್ದಾರಾ? ಈ ರೀತಿ ಬಹಳಷ್ಟು ನಡೆದಿರಬಹುದು. ಅವರ ಆಪ್ತರೆ ಹಲವಾರು ಬಾರಿ ಹೇಳಿದ್ದಾರೆ. ಕುಮಾರಸ್ವಾಮಿ ಏನು ಸಾಚಾ ಅಲ್ಲ. ಪೆನ್‌ಡ್ರೈವ್ ಪ್ರಕರಣ ಬಳಿಕ ಕುಮಾರಸ್ವಾಮಿ ವಿರುದ್ಧವೂ ದೂರು ಕೊಡಲು ಧೈರ್ಯ ಮಾಡಲಿದ್ದಾರೆ. ಯಾರಾದರೂ ದೂರು ಕೊಟ್ಟರೆ ಸರ್ಕಾರ ತನಿಖೆ ಮಾಡಲಿದೆ ಎಂದಿದ್ದಾರೆ.

ಕುಮಾರಸ್ವಾಮಿ ಏನ್ ಸಾಚಾನ? ಮಗಳ ವಯಸ್ಸಿನವರನ್ನ ಪುಸಲಾಯಿಸಿ ಮಗಳು ಹುಟ್ಟಿಸಿ ರೋಡ್‌ನಲ್ಲಿ ಬಿಟ್ಟಿದ್ದಾರೆ. ಕುಮಾರಸ್ವಾಮಿ ನೀಚ ಕೆಲಸ ಮಾಡಿದ್ದಾರೆ. ಸಿಎಂ ಆಗಿದ್ದವರು ಇಂತಹ ನೀಚ ಕೆಲಸ ಮಾಡುತ್ತಾರ? ಜೀವನದುದ್ದಕ್ಲೂ ಬ್ಲಾಕ್ ಮೇಲ್, ಅಪಪ್ರಚಾರ ಮಾಡುತ್ತಾ ಬಂದಿದ್ದಾರೆ‌. ಬೇರೆಯವರನ್ನು ಮುಳುಗಿಸಿದ್ದೆ ಕುಮಾರಸ್ವಾಮಿ ಸಾಧನೆ. ಇವರ ಮನೆ ಹೆಣ್ಣು ಮಕ್ಕಳು ಮರ್ಯಾದೆ ರೋಡ್‌ನಲ್ಲಿ ಹರಾಜಾಗಿದ್ದರೆ ಪ್ರತಿಭಟನೆ ಮಾಡ್ತಿದ್ರಾ? ಸ್ವಂತಕ್ಕೆ ಬೇಕಾಗಿರೋದನ್ನ ಮಾತ್ರ ಕುಮಾರಸ್ವಾಮಿ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com