
ಬೆಂಗಳೂರು: ನಗರದ ಆರು ಖಾಸಗಿ ಆಸ್ಪತ್ರೆಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಅದು ಸುಳ್ಳು ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.
ಬೆದರಿಕೆ ಬಂದ ಆಸ್ಪತ್ರೆಗಳಲ್ಲಿ ಶ್ವಾನ ಮತ್ತು ಬಾಂಬ್ ನಿಷ್ಕ್ರಿಯ ತಂಡಗಳೊಂದಿಗೆ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದರು. ಆದಾಗ್ಯೂ, ಈ ಆಸ್ಪತ್ರೆಗಳ ಆವರಣದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ"ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಅವರು ಹೇಳಿದರು. ಭಾನುವಾರದಂದು ಆಸ್ಪತ್ರೆಗಳಿಗೆ ಇಮೇಲ್ ಬಂದಿದ್ದು, ಅದರಲ್ಲಿ ನಾನು ನಿಮ್ಮ ಕಟ್ಟಡದಲ್ಲಿ ಸ್ಫೋಟಕ ಸಾಧನಗಳನ್ನು ಇರಿಸಿದ್ದೇನೆ. ಮುಂದಿನ ಕೆಲವೇ ಗಂಟೆಗಳಲ್ಲಿ ಅವು ಸ್ಫೋಟಗೊಳ್ಳುತ್ತವೆ.
ಇದು ಕೇವಲ ಹೆದರಿಕೆಯಲ್ಲ ಬಾಂಬ್ ಅನ್ನು ನಿಷ್ಕ್ರಿಯಗೊಳಿಸಲು ನಿಮಗೆ ಕೆಲವು ಗಂಟೆಗಳ ಕಾಲಾವಕಾಶವಿದೆ, ಅಷ್ಟರಲ್ಲಿ ನಿಷ್ಕ್ರಿಯಗೊಳಿಸಿ ಇಲ್ಲದಿದ್ದರೆ ಕಟ್ಟಡದೊಳಗಿನ ಅಮಾಯಕರ ರಕ್ತವು ನಿಮ್ಮ ಕೈಯಲ್ಲಿರುತ್ತದೆ ಎಂದು ಇ ಮೇಲ್ ಬಂದಿತ್ತು ಎನ್ನಲಾಗಿದೆ.
Advertisement