SSLC ಪರೀಕ್ಷೆ ಟಾಪರ್ ಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಸನ್ಮಾನ, ನಗದು ಬಹುಮಾನ ವಿತರಣೆ

SSLC ಪರೀಕ್ಷೆಯ ಫಲಿತಾಂಶದಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಡಿಸಿಎಂ ಡಿಕೆ ಶಿವಕುಮಾರ್ ಇಂದು ಸನ್ಮಾನಿಸಿ ಪ್ರೋತ್ಸಾಹ ಧನ ನೀಡಿದರು.
Deputy CM DK Shivakumar felicitates students
SSLC ಪರೀಕ್ಷೆಯ ಟಾಪರ್ ಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಸನ್ಮಾನ
Updated on

ಬೆಂಗಳೂರು: SSLC ಪರೀಕ್ಷೆಯ ಫಲಿತಾಂಶದಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಡಿಸಿಎಂ ಡಿಕೆ ಶಿವಕುಮಾರ್ ಇಂದು ಸನ್ಮಾನಿಸಿ ಪ್ರೋತ್ಸಾಹ ಧನ ನೀಡಿದರು.

ಹೌದು.. ಇತ್ತೀಚೆಗೆ ಪ್ರಕಟಗೊಂಡ SSLC ಪರೀಕ್ಷೆಯ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೇ ಪ್ರಥಮ ರ್ಯಾಂಕ್ ಗಳಿಸಿದ ಬಾಗಲಕೋಟೆಯ ವಿದ್ಯಾರ್ಥಿನಿ ಅಂಕಿತಾ ಅವರನ್ನು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸನ್ಮಾನಿಸಿದರು.

ಅಲ್ಲದೆ ವಿದ್ಯಾರ್ಥಿನಿಗೆ ಪ್ರೋತ್ಸಾಹ ಧನವಾಗಿ 5 ಲಕ್ಷರೂ ಬಹುಮಾನ ನೀಡಿದರು. ಅಂಕಿತಾ ಮಾತ್ರವಲ್ಲದೇ ಮಂಡ್ಯದ ವಿದ್ಯಾರ್ಥಿ ನವನೀತ್ ಅವರನ್ನೂ ಸನ್ಮಾನಿಸಿದ ಡಿಕೆಶಿ ಅವರಿಗೆ 2 ಲಕ್ಷ ರೂ ಹಣವನ್ನು ಬಹುಮಾನವಾಗಿ ನೀಡಿದರು.

Deputy CM DK Shivakumar felicitates students
SSLC results 2024: ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ, ಬಾಲಕಿಯರೇ ಮೇಲುಗೈ

ಈ ಹಿಂದೆ SSLC ಪರೀಕ್ಷಾ ಫಲಿತಾಂಶ ಪ್ರಕಟವಾದಾಗ ರಾಜ್ಯಕ್ಕೇ ಟಾಪರ್ ಆಗಿರುವ ಬಾಗಲಕೋಟೆಯ ವಿದ್ಯಾರ್ಥಿನಿ ಅಂಕಿತಾ ಕುಟುಂಬಸ್ಥರಿಗೆ ಕರೆ ಮಾಡಿದ್ದ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದರು. ಈ ವೇಳೆ “ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಮೊದಲ ಸ್ಥಾನ ಪಡೆದಿರುವುದು ನನಗೆ ಬಹಳ ಸಂತೋಷ ತಂದಿದೆ. ನಿನಗೆ ಶುಭವಾಗಲಿ. ಬೆಂಗಳೂರಿಗೆ ಬಂದಾಗ ತಮ್ಮ ಮನೆಗೆ ಬಾ” ಎಂದು ಡಿಸಿಎಂ ಅಂಕಿತಾರನ್ನು ಆಹ್ವಾನಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com