
ಹಾಸನ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ ಐಟಿ) ಹಾಸನ ಜಿಲ್ಲೆಯ ವಿವಿಧೆಡೆ ಮಂಗಳವಾರ ದಾಳಿ ನಡೆಸಿದೆ. ಬಿಜೆಪಿ ನಾಯಕರ ಆಪ್ತರ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ ವೀಡಿಯೊಗಳ ಸೋರಿಕೆಯ ಮೂಲವನ್ನು ಪತ್ತೆಹಚ್ಚಲು ಹುಡುಕಾಟ ನಡೆಸಲಾಗಿದೆ ಎಂದು ಅವರು ಹೇಳಿದರು. ಹಾಸನ ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಮರು ಆಯ್ಕೆ ಬಯಸಿರುವ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದು, ಇಂಟರ್‌ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ.
Advertisement