
ಬೆಂಗಳೂರು: ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಮೃತಪಟ್ಟಿರುವಂತಹ ಘಟನೆ ಬಾಗಲಗುಂಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ಬಿಹಾರ ಮೂಲದ ಅಮಿತ್ ಕುಮಾರ್(28) ಮೃತ ದುರ್ದೈವಿ.
ಅಮಿತ್ ಕುಮಾರ್ ಜಿಮ್ ಟ್ರೈನರ್ (Gym trainer) ಆಗಿದ್ದು, 10 ವರ್ಷದ ಹಿಂದೆ ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬಂದಿದ್ದ. ಒಂದು ವರ್ಷದ ಹಿಂದೆ ಜಿಮ್ ಸಮೀಪವೇ ಓರ್ವ ಯುವತಿಯನ್ನು ಪ್ರೀತಿಸಿದ್ದ. ಪೋಷಕರ ವಿರೋಧದ ನಡುವೆ ವಿವಾಹವಾಗಿದ್ದರು.
ಪೋಷಕರ ವಿರೋಧದ ನಡುವೆಯೂ ಅಮಿತ್ ಕುಮಾರ್ ವಿವಾಹ ನಡೆದಿತ್ತು. ಪತ್ನಿ ನರ್ಸಿಂಗ್ ಕೋರ್ಸ್ಗೆ ಸೇರಿದ ಬಳಿಕ ಪತಿಗೆ ಸಮಯ ನೀಡ್ತಿರಲಿಲ್ಲ. ಫ್ರೆಂಡ್ಸ್ ಅಂತೇಳಿ ಪದೇ ಪದೆ ಪೋನ್ ಕಾಲ್ ನಲ್ಲಿರ್ತಿದ್ದಳಂತೆ. ಇದೇ ವಿಚಾರಕ್ಕೆ ಆಗಾಗ ಪತಿ-ಪತ್ನಿ ನಡುವೆ ಗಲಾಟೆ ಆಗುತ್ತಿತ್ತು. ವೈಮನಸ್ಸು ಜೋರಾದ ಹಿನ್ನೆಲೆಯಲ್ಲಿ ಪತಿಯನ್ನು ತೊರೆದು ಪತ್ನಿ ಬೇರೆಡೆ ವಾಸವಿದ್ದಳು. ಆಗ ಮನೆಗೆ ವಾಪಸ್ ಬರುವಂತೆ ಪದೇ ಪದೇ ಕರೆ ಮಾಡಿ ಅಮಿತ್ ಮನವಿ ಮಾಡಿಕೊಂಡಿದ್ದರಂತೆ.
ಅಂತೆಯೇ ನಿನ್ನೆಯ ದಿನ ಬಾಗಲಗುಂಟೆಯಲ್ಲಿನ ನಿವಾಸದಲ್ಲಿದ್ದ ಅಮಿತ್ ಆಕೆಗೆ ಮತ್ತೊಮ್ಮೆ ಫೋನ್ ಮಾಡಿದ್ದಾರೆ. ನೀನು ಬರದಿದ್ದರೆ ನೇಣು ಬಿಗಿದುಕೊಂಡು ಸಾಯುತ್ತೇನೆ ಎಂದು ಹೆದರಿಸಿದ್ದಾರೆ. ಖುರ್ಚಿ ಮೇಲೆ ನಿಂತು ನೇಣು ಬಿಗಿದುಕೊಂಡು ಪತ್ನಿಗೆ ವಿಡಿಯೋ ಕಾಲ್ ಮಾಡಿದ್ದರು. ಈ ವೇಳೆ ಮೊಬೈಲ್ ಕೈಯಿಂದ ತಪ್ಪಿ ನೆಲಕ್ಕೆ ಬಿದ್ದಿದೆ. ಆಗ ಮೊಬೈಲ್ ಹಿಡಿದುಕೊಳ್ಳಲು ಪ್ರಯತ್ನಿಸುತ್ತಿರುವಾಗ ಖುರ್ಚಿಯಿಂದ ಕಾಲು ಜಾರಿ ನೇಣು ಬಿಗಿದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸದ್ಯ ಮರಣೋತ್ತರ ಪರೀಕ್ಷೆಗೆ ಅಮಿತ್ ಕುಮಾರ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಇಂದು ವಿಕ್ಟೋರಿಯಾದಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ. ಬಳಿಕ ಸಂಬಂಧಿಕರಿಗೆ ಮೃತದೇಹ ಹಸ್ತಾಂತರಿಸಲಾಗುತ್ತದೆ.
Advertisement