ಸಾವನ್ನಪ್ಪಿದ ಯುವತಿ
ಸಾವನ್ನಪ್ಪಿದ ಯುವತಿ

ಬೆಂಗಳೂರು: ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ, ಸಾವಿನಲ್ಲಿ ನಿಗೂಢತೆ!

ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದ್ದ ಯುವತಿಯ ಸಾವಿನಲ್ಲಿ ನಿಗೂಢತೆ ಆವರಿಸಿದೆ. ದ್ವಿತೀಯ ಪಿಯುಸಿ ಓದುತ್ತಿದ್ದ ಪ್ರಭುಧ್ಯಾ (21) ತನ್ನ ತಾಯಿ ಮತ್ತು ಸಹೋದರನೊಂದಿಗೆ ವಾಸವಾಗಿದ್ದಳು.

ಬೆಂಗಳೂರು: ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದ್ದ ಯುವತಿಯ ಸಾವಿನಲ್ಲಿ ನಿಗೂಢತೆ ಆವರಿಸಿದೆ. ದ್ವಿತೀಯ ಪಿಯುಸಿ ಓದುತ್ತಿದ್ದ ಪ್ರಭುಧ್ಯಾ (21) ತನ್ನ ತಾಯಿ ಮತ್ತು ಸಹೋದರನೊಂದಿಗೆ ವಾಸವಾಗಿದ್ದಳು.

ಬುಧವಾರ ಸಂಜೆ ಸುಬ್ರಹ್ಮಣ್ಯಪುರದ ತನ್ನ ಮನೆಯ ಸ್ನಾನಗೃಹದಲ್ಲಿ ಕತ್ತು ಮತ್ತು ಮಣಿಕಟ್ಟು ಸೀಳಿದ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾವನ್ನಪ್ಪಿದ ಯುವತಿ
ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದ ಬಿಜೆಪಿ

ಬುಧವಾರ ಸಂಜೆ 7 ಗಂಟೆ ಸುಮಾರಿಗೆ ಘಟನೆ ಬೆಳಕಿಗೆ ಬಂದಿದೆ. ಪಿಯುಸಿ ವಿದ್ಯಾರ್ಥಿನಿ ಅತಿಯಾದ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಈ ಕುರಿತು ಮಾಹಿತಿ ನೀಡಿದ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ ಜಗಲಾಸರ್ ಘಟನೆಯ ಎಲ್ಲಾ ಆಯಾಮಗಳನ್ನು ಒಳಗೊಂಡ ತನಿಖೆ ಮುಂದುವರೆದಿದೆ ಎಂದು ತಿಳಿಸಿದರು.

Related Stories

No stories found.

Advertisement

X
Kannada Prabha
www.kannadaprabha.com