ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಪ್ರಕರಣ: ಕರ್ತವ್ಯ ಲೋಪ ಆರೋಪದ ಮೇಲೆ ಇಬ್ಬರು ಪೊಲೀಸರ ಅಮಾನತು

ಹುಬ್ಬಳ್ಳಿಯಲ್ಲಿ ಚಾಕುವಿನಿಂದ ಇರಿದು ಯುವತಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇಲೆ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಮಹಿಳಾ ಹೆಡ್ ಕಾನ್‌ಸ್ಟೆಬಲ್ ಅವರನ್ನು ಅಮಾನತುಗೊಳಿಸಲಾಗಿದೆ.
ಅಂಜಲಿ - ವಿಶ್ವ
ಅಂಜಲಿ - ವಿಶ್ವ
Updated on

ಹುಬ್ಬಳ್ಳಿ: ಮದುವೆ ಪ್ರಸ್ತಾಪ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಚಾಕುವಿನಿಂದ ಇರಿದು ಯುವತಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇಲೆ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಮಹಿಳಾ ಹೆಡ್ ಕಾನ್‌ಸ್ಟೆಬಲ್ ಅವರನ್ನು ಅಮಾನತುಗೊಳಿಸಲಾಗಿದೆ.

ಕರ್ತವ್ಯಲೋಪ ಆರೋಪದ ಮೇಲೆ ಬೆಂಡಿಗೇರಿ ಪೊಲೀಸ್ ಇನ್ಸ್‌ಪೆಕ್ಟರ್‌ ಚಂದ್ರಶೇಖರ ಚಿಕ್ಕೋಡಿ ಹಾಗೂ ಠಾಣೆಯ ಮುಖ್ಯಪೇದೆ ರೇಖಾ ಅವರನ್ನು ಅಮಾನತುಗೊಳಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್‌ ಅವರು ಆದೇಶ ಹೊರಡಿಸಿದ್ದಾರೆ.

20 ವರ್ಷದ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿ 22 ವರ್ಷದ ವಿಶ್ವನಿಂದ ಜೀವ ಬೆದರಿಕೆ ಇರುವುದಾಗಿ ಅಂಜಲಿ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರಿಂದ ಹತ್ಯೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಂಜಲಿ ಕುಟುಂಬಸ್ಥರು ಠಾಣೆಗೆ ಬಂದು ಹೋಗಿರುವುದಕ್ಕೆ ಠಾಣೆಯ ಸಿಸಿಟಿವಿ ದೃಶ್ಯಗಳು ಸಾಕ್ಷಿಯಾಗಿವೆ. ಹೀಗಾಗಿಯೇ ಇಬ್ಬರನ್ನೂ ಅಮಾನತು ಮಾಡಲಾಗಿದೆ ಎನ್ನಲಾಗಿದೆ.

ಅಂಜಲಿ - ವಿಶ್ವ
ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಯುವತಿಯನ್ನು ಮಲಗಿದ್ದಲ್ಲೇ ಬರ್ಬರವಾಗಿ ಹತ್ಯೆಗೈದ ಯುವಕ!

ಈ ಕುರಿತು ಡಿಸಿಪಿ ಶ್ರೇಣಿಯ ಅಧಿಕಾರಿಯೊಬ್ಬರು ನಡೆಸಿದ ಆಂತರಿಕ ವಿಚಾರಣೆ ಮತ್ತು ವರದಿ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಏಪ್ರಿಲ್ 18 ರಂದು 23 ವರ್ಷದ ನೇಹಾ ಹಿರೇಮಠ ಅವರನ್ನು ಕಾಲೇಜು ಆವರಣದಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ನೇಹಾ ಹಿರೇಮಠ ಸ್ಥಿತಿಯೇ ನಿಮಗೂ ಬರಲಿದೆ ಎಂದು ಆರೋಪಿ ಬೆದರಿಕೆ ಹಾಕಿದ್ದಾರೆ ಎಂದು ಅಂಜಲಿ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು.

ಪೊಲೀಸರು ದೂರನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com