ರಾಜ್ಯದಲ್ಲಿ ಯುವತಿಯರ ಮೇಲೆ ಪುನರಾವರ್ತಿತ ದಾಳಿ: ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಸೂಚನೆ; ಪರಮೇಶ್ವರ್

ಹುಬ್ಬಳ್ಳಿ - ಧಾರವಾಡ ನಗರದಲ್ಲಿ ಪದೇಪದೇ ಸಂಭವಿಸುತ್ತಿರುವ ಕೊಲೆ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್‌ ತಿಳಿಸಿದರು.
ರಾಜ್ಯ ಗೃಹ ಸಚಿವ ಪರಮೇಶ್ವರ್
ರಾಜ್ಯ ಗೃಹ ಸಚಿವ ಪರಮೇಶ್ವರ್PTI

ಬೆಂಗಳೂರು: ಹುಬ್ಬಳ್ಳಿ - ಧಾರವಾಡ ನಗರದಲ್ಲಿ ಪದೇಪದೇ ಸಂಭವಿಸುತ್ತಿರುವ ಕೊಲೆ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್‌ ತಿಳಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಕರ್ನಾಟಕದ ಕಾಂಗ್ರೆಸ್ ಸರಕಾರವನ್ನು ಪ್ರತಿಪಕ್ಷ ಬಿಜೆಪಿ ಗುರಿಯಾಗಿಸಿಕೊಂಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ ಪೊಲೀಸರ ಲೋಪವನ್ನು ಪರಿಶೀಲಿಸುವುದಾಗಿ ಹೇಳಿದ್ದಾರೆ. ಇಂತಹ ಘಟನೆಗಳು ಪುನರಾವರ್ತಿತವಾಗುತ್ತಿರುವುದಕ್ಕೆ ಕಾರಣವಾದ ಇತರ ಅಂಶಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಸೂಚಿಸಲಾಗಿದೆ ಎಂದಿದ್ದಾರೆ.

ಹುಬ್ಬಳ್ಳಿ ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಗೈದ ಬೆನ್ನಲ್ಲೇ 22 ವರ್ಷದ ಗಿರೀಶ್ ಸಾವಂತ್ ಎಂಬಾತ ತನ್ನ ಮದುವೆ ಪ್ರಸ್ತಾವನೆಯನ್ನು ತಿರಸ್ಕರಿಸಿದ ಕಾರಣಕ್ಕೆ 20 ವರ್ಷದ ಅಂಜಲಿ ಎಂಬ ಯುವತಿಯ ಹತ್ಯೆ ನಡೆಸಿದ್ದ. ಈ ಪ್ರಕರಣದಲ್ಲಿ ಅಧಿಕಾರಿಗಳ ಲೋಪದೋಷವಿದೆಯೇ ಅಥವಾ ಇನ್ನಾವುದೇ ಕಾರಣಗಳಿವೆಯೇ ಎಂಬುದನ್ನು ಪರಿಶೀಲಿಸಲು ನಾನು ಸೂಚಿಸಿದ್ದೇನೆ, ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿದ್ದು, ಇದಕ್ಕೆ ಕಾರಣವೇನು ಎಂಬುದನ್ನು ನಾವು ಕಂಡುಹಿಡಿಯಬೇಕು ಎಂದು ಪರಮೇಶ್ವರ ತಿಳಿಸಿದರು.

ರಾಜ್ಯ ಗೃಹ ಸಚಿವ ಪರಮೇಶ್ವರ್
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಪ್ರಕರಣ: ಆರೋಪಿ ವಿಶ್ವನಾಥ್ ದಾವಣಗೆರೆಯಲ್ಲಿ ಬಂಧನ

ಘಟನೆಯ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನು (ಎಡಿಜಿಪಿ) ಹುಬ್ಬಳ್ಳಿಗೆ ಕಳುಹಿಸುತ್ತಿದ್ದೇವೆ ಮತ್ತು ಸಾಧ್ಯವಾದರೆ ಅವರು ಅಲ್ಲಿಗೂ ಭೇಟಿ ನೀಡಲಿದ್ದಾರೆ ಎಂದು ಹೇಳಿದ್ದಾರೆ. ಅಂಜಲಿ ಹತ್ಯೆಗೆ ಸಂಬಂಧಿಸಿದಂತೆ ಬಿಜೆಪಿ ಗುರುವಾರ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಮತ್ತು ಆಡಳಿತದ ಮೇಲಿನ ಹಿಡಿತವನ್ನು ಕಳೆದುಕೊಂಡಿದೆ ಎಂದು ಕಿಡಿ ಕಾರಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಭಾಯಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿ ಪರಮೇಶ್ವರ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ವಿರೋಧ ಪಕ್ಷ ಒತ್ತಾಯಿಸಿದೆ.

ರಾಜ್ಯ ಗೃಹ ಸಚಿವ ಪರಮೇಶ್ವರ್
ಕರ್ನಾಟಕಕ್ಕೆ ಯೋಗಿ ಆದಿತ್ಯನಾಥ್ ಅವರಂತಹ ಸಿಎಂ ಬೇಕಿದೆ: ನೇಹಾ ಹಿರೇಮಠ್ ತಂದೆ ಹೇಳಿಕೆ

ಏತನ್ಮಧ್ಯೆ, ಆರೋಪಿ ಗಿರೀಶ್ ಸಾವಂತ್ ನನ್ನು ಪೊಲೀಸರು ಬಂಧಿಸಿದ್ದು, ಕಾನೂನಿನ ಪ್ರಕಾರ ಕಠಿಣ ಶಿಕ್ಷೆಯನ್ನು ವಿಧಿಸಲಾಗುವುದು ಎಂದು ಪರಮೇಶ್ವರ ಹೇಳಿದರು. ಇಂತಹ ಕೊಲೆ ಪ್ರಕರಣಗಳಲ್ಲಿ ಯಾವುದೇ ಕರುಣೆ ತೋರವುದಿಲ್ಲ, ಪೊಲೀಸರಿಂದ ಲೋಪವೆಸಗಿರುವ ಬಗ್ಗೆ ವರದಿಯಾದ ನಂತರ ಇನ್ಸ್‌ಪೆಕ್ಟರ್ ಅನ್ನು ಅಮಾನತುಗೊಳಿಸಲಾಗಿದೆ. ತಕ್ಷಣ ಪೊಲೀಸರು ಕ್ರಮ ಕೈಗೊಳ್ಳಬೇಕಾಗಿತ್ತು, ಹೀಗಾಗಿ ಮುಂದಿನ ಕಾನೂನು ಕ್ರಮಗಳನ್ನು ಅನುಸರಿಸಲಾಗುವುದು ಎಂದು ಅವರು ಹೇಳಿದರು. ಎಂದರು. ನೇಹಾ ಹಿರೇಮಠ ರೀತಿಯೇ ಕೊಲೆ ಮಾಡುವುದಾಗಿ ಅಂಜಲಿಗೆ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬದವರು ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾರೆ ಎನ್ನಲಾಗಿದೆ, ಆದರೆ ಮಾಹಿತಿಯ ಪ್ರಕಾರ ಅಂಜಲಿ ಪೋಷಕರಿಂದ ಯಾವುದೇ ಲಿಖಿತ ದೂರು ದಾಖಲಾಗಿಲ್ಲ ಎಂದು ಪರಮೇಶ್ವರ ಹೇಳಿದರು, ಆದರೆ ಬೆದರಿಕೆಯ ಬಗ್ಗೆ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಹೀಗಾಗಿ ಇನ್ಸ್‌ಪೆಕ್ಟರ್ ಅವರನ್ನು ಅಮಾನತು ಮಾಡಿದ್ದು, ಈ ಬಗ್ಗೆ ತನಿಖೆ ನಡೆಸಲಾಗುವುದು ಮತ್ತು ಪೊಲೀಸರಿಂದ ಲೋಪ ಕಂಡುಬಂದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com