ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುಳ್ಳು ಬಾಂಬ್ ಬೆದರಿಕೆ: ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪ್ರಯಾಣಿಕನ ಬಂಧನ

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಪ್ರಯಾಣಿಕರೊಬ್ಬರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಭದ್ರತಾ ತಪಾಸಣೆಯ ವೇಳೆ ತಮ್ಮ ಬ್ಯಾಗ್‌ನಲ್ಲಿ ಬಾಂಬ್ ಇರುವುದಾಗಿ ಸುಳ್ಳು ಬೆದರಿಕೆಯನ್ನು ನೀಡಿ ಭೀತಿ ಸೃಷ್ಟಿಸಿದ್ದಕ್ಕಾಗಿ ಬಂಧಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಪ್ರಯಾಣಿಕರೊಬ್ಬರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಭದ್ರತಾ ತಪಾಸಣೆಯ ವೇಳೆ ತಮ್ಮ ಬ್ಯಾಗ್‌ನಲ್ಲಿ ಬಾಂಬ್ ಇರುವುದಾಗಿ ಸುಳ್ಳು ಬೆದರಿಕೆಯನ್ನು ನೀಡಿ ಭೀತಿ ಸೃಷ್ಟಿಸಿದ್ದಕ್ಕಾಗಿ ಬಂಧಿಸಲಾಗಿದೆ.

ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಯಾನ ಸಂಸ್ಥೆಯು ವಿಮಾನ ನಿಲ್ದಾಣದ ಆವರಣದಲ್ಲಿರುವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ರಾಜೇಶ್‌ಕುಮಾರ್ ಬೇನಿವಾಲ್ ವಿರುದ್ಧ ನಾನ್ ಕಾಗ್ನೈಸಬಲ್ ವರದಿ (ಎನ್‌ಸಿಆರ್) ದಾಖಲಿಸಲಾಗಿದೆ.

ಎನ್‌ಸಿಆರ್ ಎಂದರೆ ನ್ಯಾಯಾಲಯವು ನೀಡಿದ ವಾರಂಟ್ ಇಲ್ಲದೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂಬ ದಾಖಲೆಯನ್ನು ಸೂಚಿಸುತ್ತದೆ. ವಿಮಾನ ನಿಲ್ದಾಣದ ಮೂಲಗಳ ಪ್ರಕಾರ, ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಟರ್ಮಿನಲ್ 2 ರಲ್ಲಿ ಕೌಂಟರ್ ಸಂಖ್ಯೆ E9 ಎದುರು ಈ ಘಟನೆ ಸಂಭವಿಸಿದೆ. ಹರಿಯಾಣದ ಹಿಸ್ಸಾರ್ ಜಿಲ್ಲೆಯ ನಿವಾಸಿಯಾದ ಬೇನಿವಾಲ್ ಅವರು ವಿಮಾನ ಸಂಖ್ಯೆ 15 821 ರಲ್ಲಿ ಪ್ರಯಾಣಿಸಲು ನಿರ್ಧರಿಸಿದ್ದು, ರಾತ್ರಿ 11.05 ರ ನಿರ್ಗಮನ ಸಮಯವಾಗಿತ್ತು.

ಸಂಗ್ರಹ ಚಿತ್ರ
ಮುಂದುವರೆದ ಹುಚ್ಚಾಟ: ನಗರದಲ್ಲಿ ಪ್ರತಿಷ್ಟಿತ ಶಾಲೆಗಳಿಗೆ ಬಾಂಬ್ ಬೆದರಿಕೆ; ಪೊಲೀಸರಿಂದ ಪರಿಶೀಲನೆ

ಬ್ಯಾಗ್‌ಗಳನ್ನು ಪ್ರಯಾಣಿಕರು ಏರ್‌ಲೈನ್‌ನ ಚೆಕ್-ಇನ್ ಕೌಂಟರ್‌ನಲ್ಲಿ ತಪಾಸಣೆಗಾಗಿ ಹಸ್ತಾಂತರಿಸುತ್ತಿದ್ದಾಗ ಪ್ರಯಾಣಿಕ ಬೇನಿವಾಲ್ ತನ್ನ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ಗಟ್ಟಿಯಾಗಿ ಹೇಳಿದ್ದಾನೆ. ವಿಮಾನಯಾನ ಸಿಬ್ಬಂದಿ ತಕ್ಷಣವೇ ವಿಮಾನ ನಿಲ್ದಾಣದ ಭದ್ರತಾ ಏಜೆನ್ಸಿಗಳಿಗೆ ಎಚ್ಚರಿಕೆ ನೀಡಿದರು ಎಂದು ಮೂಲಗಳು ತಿಳಿಸಿವೆ.

ಬೇನಿವಾಲ್ ನನ್ನು ಅಲ್ಲಿಂದ ಪ್ರತ್ಯೇಕಿಸಿ ಆತನ ಬ್ಯಾಗ್‌ಗಳನ್ನು ತೀವ್ರ ಪರಿಶೀಲನೆಗೆ ಒಳಪಡಿಸಲಾಯಿತು ಮತ್ತು ಆತನ ಹೇಳಿಕೆ ಸುಳ್ಳು ಎಂದು ಕಂಡುಬಂದಿದೆ. ಹೀಗಾಗಿ ಆತನನ್ನು ಬಂಧಿಸಿ ವಿಮಾನ ಹತ್ತಲು ಬಿಡಲಿಲ್ಲ. ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಏವಿಯೇಷನ್ ಸೆಕ್ಯುರಿಟಿ ಸಹಾಯಕ ವ್ಯವಸ್ಥಾಪಕ ಗಣೇಶ್ ಉಮಾಪತಿ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. IPC ಸೆಕ್ಷನ್ 505 (1) (B) ಅಡಿಯಲ್ಲಿ ಬೇನಿವಾಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ, ಇದು ಸಾರ್ವಜನಿಕರಿಗೆ ಭಯ ಅಥವಾ ಎಚ್ಚರಿಕೆಯನ್ನು ಉಂಟುಮಾಡುವ ಉದ್ದೇಶದಿಂದ ಅಥವಾ ಸಾರ್ವಜನಿಕ ನೆಮ್ಮದಿಯ ಹಿತಾಸಕ್ತಿಗೆ ವಿರುದ್ಧವಾದ ಘಟನೆಯಾಗಿದೆ.

ಮೇ 16 ರಂದು ನಮ್ಮೊಂದಿಗೆ ಪ್ರಯಾಣಿಸಲು ನಿಗದಿಯಾಗಿದ್ದ ಬೇನಿವಾಲ್ ಚೆಕ್-ಇನ್ ಸಮಯದಲ್ಲಿ ತನ್ನ ಬ್ಯಾಗ್‌ನಲ್ಲಿ ಸ್ಫೋಟಕ ಸಾಧನವಿದೆ ಎಂದು ಹೇಳಿಕೊಂಡಿದ್ದಾನೆ. ಪ್ರಮಾಣಿತ ಪ್ರೋಟೋಕಾಲ್‌ಗಳಿಗೆ ಅನುಗುಣವಾಗಿ, ಅವರನ್ನು ವಿಮಾನ ನಿಲ್ದಾಣ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ ನಮ್ಮ ಸಿಬ್ಬಂದಿ ಅಥವಾ ಅತಿಥಿಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಬೆದರಿಕೆಗಳಿಗೆ ಶೂನ್ಯ-ಸಹಿಷ್ಣು ವಿಧಾನವನ್ನು ನಿರ್ವಹಿಸುತ್ತದೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ. ಟರ್ಮಿನಲ್ 1 ಮತ್ತು ಹಲವು ವಿಮಾನಗಳಲ್ಲಿ ಬಾಂಬ್ ಸ್ಫೋಟಗೊಳ್ಳುವ ಬಗ್ಗೆ ಇ-ಮೇಲ್ ಕಳುಹಿಸಿದ ಅನಾಮಧೇಯ ವ್ಯಕ್ತಿಯ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಹದಿನೈದು ದಿನಗಳೊಳಗೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡನೇ ಹುಸಿ ಬಾಂಬ್ ಬೆದರಿಕೆ ದೂರು ಇದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com