ಲೋಕಾಯುಕ್ತ
ರಾಜ್ಯ
ಲಂಚ ಸ್ವೀಕರಿಸುವಾಗ ಶಿಕ್ಷಣ ಇಲಾಖೆ ನೌಕರ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ
ನಿವೃತ್ತ ಶಿಕ್ಷಕರ ಪಿಂಚಣಿ ಇತ್ಯರ್ಥಕ್ಕೆ 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಶಿಕ್ಷಣ ಇಲಾಖೆಯ ನೌಕರರೊಬ್ಬರು ಶನಿವಾರ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.
ಕಲಬುರಗಿ: ನಿವೃತ್ತ ಶಿಕ್ಷಕರ ಪಿಂಚಣಿ ಇತ್ಯರ್ಥಕ್ಕೆ 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಶಿಕ್ಷಣ ಇಲಾಖೆಯ ನೌಕರರೊಬ್ಬರು ಶನಿವಾರ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.
ಕಲಬುರಗಿ ಜಿಲ್ಲೆಯ ಆಳಂದದಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತ ರಾಠೋಡ್ ಅವರ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ 50 ಸಾವಿರ ರೂ. ಲಂಚ ಪಡೆಯುತ್ತಿದ್ದ ಶಿಕ್ಷಣ ಇಲಾಖೆ ನೌಕರ ರಾಧಾಕೃಷ್ಣ ಅವರು ಬಲೆಗೆ ಬಿದ್ದಿದ್ದಾರೆ.
ಪಿಂಚಣಿ ಇತ್ಯರ್ಥಕ್ಕಾಗಿ ನಿವೃತ್ತ ಶಿಕ್ಷಕಿ ಹಾಗೂ ದೂರುದಾರರ ಪತಿ ಯಶವಂತರಾಯ ಜಮಾದಾರ್ ಅವರಿಂದ ಹಣ ಪಡೆಯುತ್ತಿದ್ದ ಶಿಕ್ಷಣ ಇಲಾಖೆ ನೌಕರ ರಾಧಾಕೃಷ್ಣ ಎಂಬಾತನನ್ನು ವಶಕ್ಕೆ ಪಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿಯನ್ನು ಬಂಧಿಸಲಾಗಿದೆ.
ಘಟನೆ ಬಗ್ಗೆ ತಿಳಿದ ನಂತರ ಕ್ಷೇತ್ರ ಶಿಕ್ಷಣಾಧಿಕಾರಿ ಪರಾರಿಯಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ