IPL 2024: ಪ್ಲೇಆಫ್‌ಗೆ RCB ಲಗ್ಗೆ; “ಅದೃಷ್ಟ ತಂದ ಹೆಣ್ಣು”.. ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟೋ ವೈರಲ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿ ಅವರನ್ನು ಹೀಯಾಳಿಸಿದ್ದ ಕಿಡಿಗೇಡಿಗಳಿಗೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ತಿರುಗೇಟು ನೀಡುವ ಪೋಸ್ಟ್ ಗಳು ವೈರಲ್ ಆಗುತ್ತಿವೆ.
ವೈರಲ್ ಪೋಸ್ಟ್
ವೈರಲ್ ಪೋಸ್ಟ್
Updated on

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿ ಅವರನ್ನು ಹೀಯಾಳಿಸಿದ್ದ ಕಿಡಿಗೇಡಿಗಳಿಗೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ತಿರುಗೇಟು ನೀಡುವ ಪೋಸ್ಟ್ ಗಳು ವೈರಲ್ ಆಗುತ್ತಿವೆ.

ಸತತ 6 ಗೆಲುವುಗಳೊಂದಿಗೆ ಪ್ಲೇ ಆಫ್​ಗೆ ಆರ್​ಸಿಬಿ ಗ್ರ್ಯಾಂಡ್ ಎಂಟ್ರಿ ಕೊಡುತ್ತಿದ್ದಂತೆ ಅಶ್ವಿನಿ ಪುನೀತ್ ರಾಜ್​ಕುಮಾರ್​ ಅವರನ್ನು ಸೋಶಿಯಲ್​ ಮೀಡಿಯಾದಲ್ಲಿ ಹಾಡಿ ಹೊಗಳಲಾಗುತ್ತಿದೆ.

ಚೆನ್ನೈ ವಿರುದ್ಧ ಬೆಂಗಳೂರು ತಂಡ ಗೆಲುವು ಸಾಧಿಸುತ್ತಿದ್ದಂತೆ ಇತ್ತ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರ ಫೋಟೋಗಳು ಸಖತ್ ವೈರಲ್ ಆಗುತ್ತಿವೆ.

ವೈರಲ್ ಪೋಸ್ಟ್
ಅಶ್ವಿನಿ ಪುನೀತ್ ರಾಜ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಫೋಸ್ಟ್: ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ- ಸಿಎಂ ಸಿದ್ದರಾಮಯ್ಯ

ನಮ್ಮ ಆರ್​ಸಿಬಿ ಪ್ಲೇ ಆಫ್​ಗೆ ಹೋಗೋಕೆ ಕಾರಣನೇ ನಮ್ಮ ದೊಡ್ಮನೆಯ ಅದೃಷ್ಟ ದೇವತೆ ಅಶ್ವಿನಿ ಅಕ್ಕ ಎಂದು ಪೋಸ್ಟ್ ಮಾಡಲಾಗುತ್ತಿದ್ದು, ಈ ಪೋಸ್ಟ್ ಗಳು ವೈರಲ್ ಆಗುತ್ತಿವೆ.

ಸತತವಾಗಿ ಸೋತಾಗ ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟೋ ಹಾಕಿ ಕಿಡಿಗೇಡಿಗಳಿಂದ ನಿಂದನೆ ಮಾಡಲಾಗಿತ್ತು. ಇದೀಗ ಸತತವಾಗಿ 6 ಮ್ಯಾಚ್ ಗೆದ್ದು ಪ್ಲೇ ಆಫ್ ಗೆ ಎಂಟ್ರಿ ಕೊಟ್ಟಿದ್ದು, ನಿಂದನೆ ಮಾಡಿದವರು ಈಗ ಎಲ್ಲಿದ್ದಾರೆಂದು ಪ್ರಶ್ನೆ ಮಾಡುತ್ತಿದ್ದಾರೆ.

ಐಪಿಎಲ್​ ಆರಂಭದ ವೇಳೆ ಆರ್​ಸಿಬಿಯ ಅನ್​ಬಾಕ್ಸ್​ ಇವೆಂಟ್​ನಲ್ಲಿ ಭಾಗವಹಿಸಿದ್ದ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಆರ್​ಸಿಬಿ ಜೆರ್ಸಿ ಅನಾವರಣಗೊಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com