
ರಾಯಚೂರು: ಐಪಿಎಲ್ ಬೆಟ್ಟಿಂಗ್‌ದಂಧೆಯಲ್ಲಿ ಲಕ್ಷ ಲಕ್ಷ ಕಳೆದುಕೊಂಡ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ನಡೆದಿದೆ.
ಮಸ್ಕಿ ತಾಲೂಕಿನ ಉದ್ಬಾಳ ಗ್ರಾಮದ ಮುದಿಬಸವ (29) ಆತ್ಮಹತ್ಯೆಗೆ ಶರಣಾದ ಯುವಕ. ಈತ ಐಪಿಎಲ್ ಬೆಟ್ಟಿಂಗ್‌ಗಾಗಿ ಸಾಕಷ್ಟು ಸಾಲವನ್ನು ಮಾಡಿಕೊಂಡಿದ್ದ. ಆದರೆ ಬೆಟ್ಟಿಂಗ್ ಕಟ್ಟಿದ ಎಲ್ಲ ಮ್ಯಾಚ್‌ಗಳು ಸೋತಿದ್ದವು. ಸಾಲದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ. ಸಾಲಗಾರರ ಕಾಟಕ್ಕೆ ಬೇಸತ್ತ ಮುದಿಬಸವ ಲಾಡ್ಜ್ ರೂಮಿನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರೂಮಿನ ಬಾಗಿಲು ತೆರೆಯದೆ ಇದ್ದಾಗ ಅನುಮಾನಗೊಂಡು ಲಾಡ್ಜ್ ಸಿಬ್ಬಂದಿ ಒಳಹೊಕ್ಕಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಸಿಂಧನೂರು ನಗರ ಪೊಲೀಸರು, ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
Advertisement