ನಗರದಲ್ಲಿ ಮಳೆ ಅನಾಹುತ ತಡೆಗೆ ಪಾಲಿಕೆ ಸಜ್ಜು: ತುಷಾರ್ ಗಿರಿನಾಥ್

ನಗರದಲ್ಲಿ ಮಳೆ ಅನಾಹುತ ತಡೆಗೆ ಪಾಲಿಕೆ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಚರಂಡಿ, ರಸ್ತೆಬದಿ ಡ್ರೈನ್ ಹಾಗೂ ರಾಜಕಾಲುವೆಗಳಲ್ಲಿ ಹೂಳೆತ್ತಿ ಸ್ವಚ್ಚಗೊಳಿಸು ಕಾರ್ಯ ಪ್ರಗತಿಯಲ್ಲಿರುವುದರಿಂದ ಮಳೆಹಾನಿ ಆಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶನಿವಾರ ಹೇಳಿದರು.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
Updated on

ಬೆಂಗಳೂರು: ನಗರದಲ್ಲಿ ಮಳೆ ಅನಾಹುತ ತಡೆಗೆ ಪಾಲಿಕೆ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಚರಂಡಿ, ರಸ್ತೆಬದಿ ಡ್ರೈನ್ ಹಾಗೂ ರಾಜಕಾಲುವೆಗಳಲ್ಲಿ ಹೂಳೆತ್ತಿ ಸ್ವಚ್ಚಗೊಳಿಸು ಕಾರ್ಯ ಪ್ರಗತಿಯಲ್ಲಿರುವುದರಿಂದ ಮಳೆಹಾನಿ ಆಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶನಿವಾರ ಹೇಳಿದರು.

ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಪೂರ್ವ ಮುಂಗಾರು ವೇಳೆ ನಗರದಲ್ಲಿ 40-60 ಮಿ.ಮೀ. ವರೆಗೆ ಮಳೆಯಾಗಿದ್ದರೂ, ಯಾವುದೇ ಹಾನಿ ಆಗಿಲ್ಲ. ಇನ್ನೂ ಹೆಚ್ಚಿನ ಪ್ರಮಾಣದ ವರ್ಷಧಾರೆಯಾದರೂ ಅನಾಹುತ ತಡೆಗೆ ಪಾಲಿಕೆ ಸಜ್ಜಾಗಿದೆ. ಇದಕ್ಕಾಗಿ 63 ತಂಡಗಳನ್ನು ರಚಿಸಿದ್ದು, ಅಗತ್ಯ ಸಲಕರಣೆ ಹಾಗೂ ಸಿಬ್ಬಂದಿಯನ್ನೂ ಒದಗಿಸಲಾಗಿದೆ. ಹೆಚ್ಚು ಮಳೆನೀರು ಸಂಗ್ರಹಗೊಳ್ಳುವ ಸ್ಥಳಗಳಲ್ಲಿ ಪಂಪ್‌ಸೆಟ್ ಹಾಗೂ ಮೋಟಾರನ್ನು ಬಳಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಹಾಗೂ ಸಮಸ್ಯಾತ್ಮಕ ಪ್ರದೇಶಗಳಲ್ಲಿ ಹಾನಿ ತಪ್ಪಿಸಲು ಮೇ 15ರಿಂದ 30ರ ವರೆಗೆ ಚರಂಡಿಗಳ ಸ್ವಚ್ಚತೆ ಹಾಗೂ ಕಾಲುವೆಗಳಲ್ಲಿ ಪ್ಲಾಸ್ಟಿಕ್ ಹೊರತೆಗೆಯುವ ಕೆಲಸವನ್ನು ಆರಂಭಿಸಲಾಗಿದೆ. ಅಪಾಯಕಾರಿ ಮರ ಹಾಗೂ ಟೊಂಗೆಗಳನ್ನು ತೆರವು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಕಚೇರಿ ಸೇರಿ ಎಲ್ಲಾ 8 ವಲಯಗಳಲ್ಲಿ ಕಂಟ್ರೋಲ್ ರೂಂ ಆರಂಭಿಸಿದ್ದು, ನಾಗರಿಕರ ದೂರುಗಳಿಗೆ ತುರ್ತಾಗಿ ಸ್ಪಂದಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಪ್ರಚೋದನೆಗೆ ಒಳಗಾಗದೆ, ಸ್ವಇಚ್ಛೆಯಿಂದ ಮತ ಚಲಾಯಿಸಿ: ತುಷಾರ್ ಗಿರಿನಾಥ್

ಈಗಾಗಲೇ 300ಕ್ಕೂ ಅಧಿಕ ಮರಗಳನ್ನು, 800ಕ್ಕೂ ಅಧಿಕ ರೆಂಬೆಕೊಂಬೆಗಳನ್ನು ತೆರವುಗೊಳಿಸಲಾಗಿದೆ. ಎಲ್ಲಿಯಾದರೂ ಅಪಾಯಕಾರಿ ಸ್ಥಿತಿಯಲ್ಲಿ ಮರ ಇರುವ ಬಗ್ಗೆ ಸಾರ್ವಜನಿಕರು ಸಹಾಯವಾಣಿಗೆ ಮಾಹಿತಿ ನೀಡಿದರೆ ತಕ್ಷಣ ತೆರವುಗೊಳಿಸಲಾಗುವುದು ಎಂದು ಹೇಳಿದರು.

ಜಲಮಂಡಳಿ, ಬೆಸ್ಕಾಂ ಜೊತೆಗೆ ಸಮನ್ವಯ ಸಾಧಿಸಿ ತಂಡ ರಚಿಸಲಾಗಿದೆ. ನೀರು ನಿಲ್ಲುವ, ಮನೆಗಳಿಗೆ ನೀರು ನುಗ್ಗುವ ಪ್ರದೇಶಗಳಲ್ಲಿ ಶಾಶ್ವತವಾಗಿ ಪರಿಹಾರ ಕೈಗೊಳ್ಳಲು ಸಾಧ್ಯವಾಗದ ಕಡೆಗಳಲ್ಲಿ ಮೋಟರ್ ಪಂಪ್‌ ಅಳವಡಿಸಿ, ಪೈಪ್‌ ಮೂಲಕ ನೀರು ಹೊರ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಜನರು ಯಾವುದೇ ರೀತಿಯಲ್ಲಿ ಭಯಪಡುವ ಅಗತ್ಯವಿಲ್ಲ’ ಎಂದು ವಿವರಿಸಿದರು.

‘ಪ್ರತಿ ವರ್ಷ ಏಪ್ರಿಲ್‌ ಒಳಗೆ ಬಡ್ಡಿರಹಿತವಾಗಿ ತೆರಿಗೆ ಪಾವತಿಸಬಹುದಿತ್ತು. ಒಂದು ತಿಂಗಳು ಹೆಚ್ಚುವರಿಯಾಗಿ ಅವಕಾಶ ನೀಡಲಾಗುತ್ತಿತ್ತು. ಆದರೆ ಈ ವರ್ಷ ಜುಲೈ ಅಂತ್ಯದವರೆಗೆ ಬಡ್ಡಿರಹಿತವಾಗಿ ತೆರಿಗೆ ಪಾವತಿಗೆ ಅವಕಾಶ ನೀಡಿರುವುದರಿಂದ ಜನರು ನಿಧಾನಗತಿಯಲ್ಲಿ ಪಾವತಿಸುತ್ತಿದ್ದಾರೆ. ಜುಲೈ ಅಂತ್ಯದವರೆಗೆ ಕಾಯದೇ ಮೊದಲೇ ಪಾವತಿಸಬೇಕು ಎಂದು ಇದೇ ಮನವಿ ಮಾಡಿದರು.

ತೆರಿಗೆ ನೀತಿಗೆ ಸರ್ಕಾರವು ತಿದ್ದುಪಡಿ ಮಾಡಿರುವುದರಿಂದ ತೆರಿಗೆ ವಸೂಲಿಗೆ ಕಠಿಣ ಕ್ರಮ ವಹಿಸಲು ನಮಗೆ ಅವಕಾಶ ಸಿಕ್ಕಿದೆ. ಹಲವು ವರ್ಷಗಳಿಂದ ಕಂದಾಯ ಕಟ್ಟದವರಿಂದ ವಸೂಲಿ ಮಾಡಲಾಗುತ್ತಿದೆ. ಈ ಬಾರಿ ತೆರಿಗೆ ಸಂಗ್ರಹ ಹೆಚ್ಚಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com