ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ- CM, ಕೈಮುಗಿದು ಮನವಿ ಮಾಡ್ತೇನೆ ಶರಣಾಗು-ಪ್ರಜ್ವಲ್ ಗೆ HDK; ರೇವಣ್ಣಗೆ ಜಾಮೀನು ಮಂಜೂರು- ಈ ದಿನದ ಪ್ರಮುಖ ಸುದ್ದಿಗಳು-20-05-2024

ಈ ದಿನದ ಪ್ರಮುಖ ಸುದ್ದಿಗಳು (ಸಾಂಕೇತಿಕ ಚಿತ್ರ)
ಈ ದಿನದ ಪ್ರಮುಖ ಸುದ್ದಿಗಳು (ಸಾಂಕೇತಿಕ ಚಿತ್ರ)online desk

1. ಲೋಕಸಭಾ ಚುನಾವೆಣೆ ಫಲಿತಾಂಶದ ಬಳಿಕವೂ ಗ್ಯಾರೆಂಟಿ ಯೋಜನೆ ಇರಲಿದೆ-ಸಿಎಂ

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು 1 ವರ್ಷ ಪೂರ್ಣಗೊಂಡಿದ್ದು, ಮಧ್ಯವರ್ತಿಗಳ ಹಾವಳಿಯಿಲ್ಲದೆ ಫಲಾನುಭವಿಗಳಿಗೆ 5 ಗ್ಯಾರಂಟಿ ತಲುಪಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ಕಾರದ ಸಾಧನೆಗಳ ಬಗ್ಗೆ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ನಾವು ಕೊಟ್ಟ ಮಾತನ್ನು ಈಡೇರಿಸಿದ್ದೇವೆ 5 ಗ್ಯಾರಂಟಿಗಳನ್ನು ನೀಡಲು 36 ಸಾವಿರ ಕೋಟಿ ಖರ್ಚು ಮಾಡಿದ್ದೇವೆ, ಲೋಕಸಭಾ ಚುನಾವಣೆ ಬಳಿಕವೂ ಈ ಗ್ಯಾರೆಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಸ್ಪಷ್ಟಪಡಿಸಿರುವ ಅವರು, ಕಾನೂನು ಪ್ರಕಾರ ತೆರಿಗೆ ಮತ್ತು ಸಾಲವನ್ನು ಹೆಚ್ಚಿಸಿ ಭ್ರಷ್ಟಾಚಾರವನ್ನು ಕಡಿಮೆ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆಗಳಿಗೆ ಅಗತ್ಯವಿರುವ ಹಣಕಾಸು ನಿರ್ವಹಣೆಗೆ ಸಮರ್ಥವಾಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಸಚಿವ ಸಂಪುಟ ಪುನಾರಚನೆ ಮಾಡುವ ಯೋಚನೆ ಇಲ್ಲ ಎಂದು ಸಿಎಂ ತಿಳಿಸಿದ್ದು, ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ 28 ಲೋಕಸಭಾ ಸ್ಥಾನಗಳ ಪೈಕಿ 15 ರಿಂದ 20 ಸ್ಥಾನಗಳನ್ನು ಪಡೆಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸರ್ಕಾರವನ್ನು ಟೀಕಿಸಿರುವ ವಿಪಕ್ಷ ಬಿಜೆಪಿಯ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಒಂದು ವರ್ಷದ ಸರ್ಕಾರದ ಸಾಧನೆ ಶೂನ್ಯ, ಯಾವುದೇ ಅಭಿವೃದ್ಧಿ ಕೆಲಸ ಈ ಅವಧಿಯಲ್ಲಿ ಆಗಿಲ್ಲ. ಹೊಸ ಯೋಜನೆಗಳಿಗೆ ಚಾಲನೆ ನೀಡಿಲ್ಲ. ಗ್ಯಾರೆಂಟಿ ಯೋಜನೆಗಳೇ ರಾಜ್ಯದ ಅಭುವೃದ್ಧಿ ಎಂದು ಬಿಂಬಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದ್ದಾರೆ.

2. ನಗರದಲ್ಲಿ ರೇವ್ ಪಾರ್ಟಿ; 5 ಮಂದಿ ಸಿಸಿಬಿ ವಶಕ್ಕೆ

ನಗರದ ಎಕ್ಟ್ರಾನಿಕ್ ಸಿಟಿ ಬಳಿಯ ಜಿ ಆರ್.ಫಾರ್ಮ್​​​ಹೌಸ್​​ನಲ್ಲಿ ವಾರಾಂತ್ಯ ನಡೆದ ರೇವ್ ಪಾರ್ಟಿ ಮೇಲೆ ಅಪರಾಧ ದಳ ವಿಭಾಗ ಪೊಲೀಸರು ದಾಳಿ ನಡೆಸಿದ್ದು, ಸ್ಥಳದಲ್ಲಿ ಡ್ರಗ್ಸ್ ಪತ್ತೆಯಾಗಿದೆ. ಪಾರ್ಟಿಯಲ್ಲಿ ಕೆಲ ಮಾಡೆಲ್ ಗಳು, ಟೆಕ್ಕಿಗಳು, ತೆಲುಗು ನಟಿಯರು ಭಾಗಿಯಾಗಿದ್ದರು. ದಾಳಿ ವೇಳೆ 17 ಎಂಡಿಎಂಎ ಮಾತ್ರೆ, ಕೊಕೇನ್ ಪತ್ತೆಯಾಗಿದೆ. ಆಂಧ್ರ, ಬೆಂಗಳೂರು ಮೂಲದ 100ಕ್ಕೂ ಹೆಚ್ಚು ಜನ ಮತ್ತು 25ಕ್ಕೂ ಹೆಚ್ಚು ಯುವತಿಯರು ಪಾರ್ಟಿಯಲ್ಲಿ ಭಾಗಿಯಾಗಿದ್ದು. ಪ್ರಕರಣದಲ್ಲಿ 5 ಮಂದಿಯನ್ನು ಬಂಧಿಸಲಾಗಿದೆ. ಎಲೆಕ್ಟ್ರಾನಿಕ್​​ಸಿಟಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿಸಿದ್ದಾರೆ.

3. ರೇವಣ್ಣಗೆ ಜಾಮೀನು ಮಂಜೂರು

ಹೊಳೆ ನರಸೀಪುರದಲ್ಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣಗೆ ಜಾಮೀನು ಮಂಜೂರಾಗಿದೆ. ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಜಾಮೀನು ಮಂಜೂರು ಮಾಡಿರುವ 42ನೇ ಎಸಿಎಂಎಂ ಕೋರ್ಟ್, ರೂ. 5 ಲಕ್ಷ ಮೊತ್ತದ ಬಾಂಡ್ ಹಾಗೂ ಇಷ್ಟೇ ಮೊತ್ತರ ಒಬ್ಬರ ಶ್ಯೂರಿಟಿ ಒದಗಿಸುವಂತೆ ಸೂಚಿಸಿದೆ.

4. ಕೈಮುಗಿದು ಮನವಿ ಮಾಡುತ್ತೇನೆ ಶರಣಾಗು- ರೇವಣ್ಣಗೆ HDK ಮನವಿ 

ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಎಲ್ಲರೂ ಅಸಹ್ಯ ಪಡುವ ಪ್ರಕರಣ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕುಮಾರಸ್ವಾಮಿ, ನನ್ನ ಹಾಗೂ ಹೆಚ್​ಡಿ ದೇವೇಗೌಡರ ಮೇಲೆ ಗೌರವ ಇದ್ದರೆ ನಾನು ಕೈಮುಗಿದು ಮನವಿ ಮಾಡ್ತೇನೆ 24-48 ಗಂಟೆಯಲ್ಲಿ ಶರಣಾಗು ಎಂದು ಪ್ರಜ್ವಲ್​ ರೇವಣ್ಣಗೆ ಮನವಿ ಮಾಡಿದ್ದಾರೆ. ಇದೇ ವೇಳೆ ನಾನು ಸೇರಿದಂತೆ ನಮ್ಮ ಸುತ್ತಲೂ ಇರುವ ಸುಮಾರು 30 ಜನರಿಗೆ ಪೋನ್ ಟ್ಯಾಪ್ ಆಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

5. ಲಿಕ್ವಿಡ್ ನೈಟ್ರೋಜನ್ ಪಾನ್ ಪರಿಣಾಮ ಹೊಟ್ಟೆಯಲ್ಲಿ ರಂಧ್ರ- ಬಾಲಕಿಗೆ ಶಸ್ತ್ರಚಿಕಿತ್ಸೆ

ಬಾಯಲ್ಲಿ ಪಾನ್ ಹಾಕಿಕೊಂಡ ಕೂಡಲೇ ಹೊಗೆ ಬರುವ ಲಿಕ್ವಿಡ್ ನೈಟ್ರೋಜನ್ ಪಾನ್ ಇತ್ತೀಚೆಗೆ ಟ್ರೆಂಡ್ ಆಗಿದೆ. ಆದರೆ, ಇದನ್ನು ಸೇವಿಸಿದ 12 ವರ್ಷದ ಬಾಲಕಿಯೊಬ್ಬಳ ಹೊಟ್ಟೆಯಲ್ಲಿ ರಂಧ್ರವಾಗಿದ್ದು, ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು, ಹೊಟ್ಟೆಯ ಒಂದು ಭಾಗವನ್ನು ತೆಗೆದುಹಾಕಿದ್ದಾರೆ. ದೇಶದ ವಿವಿಧ ಭಾಗಗಳಿಂದ ಇಂತಹ ಹಲವಾರು ಪ್ರಕರಣಗಳು ವರದಿಯಾಗಿವೆಯ ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸುವುದು ಬಹಳ ಮುಖ್ಯ ಎಂದು ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿಯ ಆಪರೇಟಿಂಗ್ ಸರ್ಜನ್ ಡಾ.ವಿಜಯ್ ಹೇಳಿದ್ದಾರೆ.

6. ಹರೀಶ್ ಪೂಂಜಾ ವಿರುದ್ಧ FIR

ಪೊಲೀಸರಿಗೆ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲಾಗಿದೆ. ಅಕ್ರಮ ಕಲ್ಲು ಕ್ವಾರಿ ಹಾಗೂ ಸ್ಪೋಟ ಚಟುವಟಿಕೆ ಕೇಸ್ ನಲ್ಲಿ ರೌಡಿ ಶೀಟರ್ ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನಕ್ಕೊಳಗಾದ ಹಿನ್ನೆಲೆಯಲ್ಲಿ ಠಾಣೆಗೆ ಬಂದ ಶಾಸಕ ಅಧಿಕಾರಿಗಳ ಮೇಲೆ ಒತ್ತಡ ಹಾಕಿದ್ದಾರೆ. ಅವಾಚ್ಯವಾಗಿ ಬೈದು ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com