
ರಾಮನಗರ: ಜಿಪ್ ಲೈನ್ ಆಡಲು ಹೋಗಿ ಮಹಿಳೆ ಸಾವನ್ನಪ್ಪಿ, ವ್ಯಕ್ತಿಯೊಬ್ಬ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಬೆಟ್ಟಹಳ್ಳಿ ಬಳಿಯ Jungle Trailz Resort ನಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆ ನಿವಾಸಿ ರಂಜಿನಿ (35) ಮೃತರು. ಗಾಯಾಳು ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ರಂಜಿನಿ ಅವರು ಜೆಪಿ ನಗರದ ಮಿಲನ ನರ್ಸಿಂಗ್ ಹೋಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಸ್ನೇಹಿತರ ಜತೆ ರಂಜಿನಿ ಒಂದು ರಜಾ ದಿನ ಕಳೆಯಲು ಹಾರೋಹಳ್ಳಿ ಬಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್‌ಗೆ ಬಂದಿದ್ದರು. ಈ ವೇಳೆ ಜಿಪ್‌ಲೈನ್ ಆಡುತ್ತಿದ್ದಾಗ ಅದು ಕಟ್ ಆಗಿ ಕೆಳಗೆ ಬಿದ್ದಳು. ತಕ್ಷಣ ಸ್ನೇಹಿತರು ಚಿಕಿತ್ಸೆಗಾಗಿ ದಯಾನಂದ ಸಾಗರ್ ಆಸ್ಪತ್ರೆಗೆ ದಾಖಲಿಸಿದರು. ಚಿಕಿತ್ಸೆ ಫಲಕಾರಿಯಾಗದೆ ಯುವತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಜೊತೆಯಲ್ಲಿದ್ದ ವ್ಯಕ್ತಿ ಗಾಯಗೊಂಡಿದ್ದಾನೆ.
ಅವರು ಪತಿ ನರೇಂದ್ರ ಮತ್ತು ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ.
ರೆಸಾರ್ಟ್ ಸಿಬ್ಬಂದಿಯ ನಿರ್ಲಕ್ಷ್ಯದಿಂದಲೇ ಅವಘಡ ಸಂಭವಿಸಿದೆ ಎಂದು ರಂಜಿನಿ ಸಂಬಂಧಿಕರು ಆರೋಪಿಸಿದ್ದಾರೆ. ಮೃತದೇಹ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾರೋಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ರೆಸಾರ್ಟ್ ಮಾಲೀಕರ ಅಜಾಗರೂಕತೆ, ನಿರ್ಲಕ್ಷ್ಯ ಮತ್ತು ಕ್ರೀಡಾ ಸುರಕ್ಷತಾ ನಿಯಮ ಪಾಲಿಸದ ಕಾರಣ ಈ ಘಟನೆ ನಡೆದಿದೆ ಎಂದು ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಾರೋಹಳ್ಳಿ ಪೊಲೀಸ್ ಠಾಣೆಗೆ ನಿರ್ಮಲ ಎಂಬುವರು ದೂರು ನೀಡಿದ್ದಾರೆ. ಹಾರೋಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಶವದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ.
Advertisement