ರೇವ್ ಪಾರ್ಟಿ ಮೇಲಿನ ಸಿಸಿಬಿ ದಾಳಿಯಲ್ಲಿ ಗಾಂಜಾ, ಡ್ರಗ್ಸ್ ಹಾಗೂ ಸಿಂಥೆಟಿಕ್ ಡ್ರಗ್ಸ್ ಸಿಕ್ಕಿದೆ: ಡಾ ಜಿ ಪರಮೇಶ್ವರ್

ಸೋಮವಾರ ಬೆಂಗಳೂರಿನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದ ಮಾಹಿತಿ ಸಿಕ್ಕಿ ಸಿಸಿಬಿಯವರು ದಾಳಿ ಮಾಡಿದ್ದಾರೆ. ಯಾರ‍್ಯಾರು ಬಂದಿದ್ದರು ಎಂದು ಪೊಲೀಸರು ಮಾಹಿತಿ ತೆಗೆದುಕೊಂಡಿದ್ದಾರೆ. ದಾಳಿ ವೇಳೆ ಡ್ರಗ್ಸ್, ಸಿಂಥೆಟಿಕ್ ಡ್ರಗ್ಸ್ ಪತ್ತೆ ಆಗಿದೆ. ಕಾನೂನು ಪ್ರಕಾರ ಕ್ರಮ ಆಗಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ನಿನ್ನೆ ಸೋಮವಾರ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಬಳಿಯ ಜಿ ಆರ್ ಫಾರಂ ಹೌಸ್ ನಡೆದ ರೇವ್ ಪಾರ್ಟಿ ಮೇಲಿನ ಸಿಸಿಬಿ ದಾಳಿಯಲ್ಲಿ ಗಾಂಜಾ, ಡ್ರಗ್ಸ್ ಹಾಗೂ ಸಿಂಥೆಟಿಕ್ ಡ್ರಗ್ಸ್ ಸಿಕ್ಕಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಬೆಂಗಳೂರಿನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದ ಮಾಹಿತಿ ಸಿಕ್ಕಿ ಸಿಸಿಬಿಯವರು ದಾಳಿ ಮಾಡಿದ್ದಾರೆ. ಯಾರ‍್ಯಾರು ಬಂದಿದ್ದರು ಎಂದು ಪೊಲೀಸರು ಮಾಹಿತಿ ತೆಗೆದುಕೊಂಡಿದ್ದಾರೆ. ದಾಳಿ ವೇಳೆ ಡ್ರಗ್ಸ್, ಸಿಂಥೆಟಿಕ್ ಡ್ರಗ್ಸ್ ಪತ್ತೆ ಆಗಿದೆ. ಕಾನೂನು ಪ್ರಕಾರ ಕ್ರಮ ಆಗಲಿದೆ.

ಕರ್ನಾಟಕವನ್ನು ಡ್ರಗ್ಸ್ ಫ್ರೀ ರಾಜ್ಯ ಮಾಡಬೇಕು ಎಂಬ ಪ್ರಯತ್ನದಲ್ಲಿ ನಾವಿದ್ದೇವೆ. ಸಾವಿರಾರು ಕೋಟಿ ಡ್ರಗ್ಸ್ ದಂಧೆ ಹಿಡಿದಿದ್ದೇವೆ. ಡ್ರಗ್ಸ್ ಪೂರೈಕೆ, ಸಾಗಣೆ ಹತ್ತಿಕ್ಕುವ ಕೆಲಸ ಆಗುತ್ತಿದೆ. ಗಾಂಜಾ ಎಲ್ಲಿಂದ ಬರುತ್ತೆ ಎಂದು ಮಾಹಿತಿ ಮೇಲೆ ಹಿಡಿಯುತ್ತೇವೆ. ಪೆಡ್ಲರ್ಸ್ ಯಾರಿದ್ದಾರೆ ಅವರನ್ನು ಹಿಡಿಯವುದು ಬಹಳ ಮುಖ್ಯ. ಸ್ಟೂಡೆಂಟ್ಸ್ ಎಂದು ಹೇಳಿಕೊಂಡು ಇಲ್ಲಿ ಬಂದು ಕೃತ್ಯ ಮಾಡುತ್ತಾರೆ. ಅವರ ಮೇಲೆ ನಿಗಾ ಇಟ್ಟಿದ್ದೇವೆ, ಯುವಜನತೆ ದಾರಿ ತಪ್ಪದಂತೆ ನೋಡಿಕೊಳ್ಳಬೇಕು ಎಂದರು.

ಸಾಂದರ್ಭಿಕ ಚಿತ್ರ
ಬೆಂಗಳೂರು: ರೇವ್ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಇದ್ದದ್ದು ನಿಜ; ದಾಳಿಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ನಗರ ಪೊಲೀಸ್ ಆಯುಕ್ತರು

ವಿದೇಶಾಂಗ ಇಲಾಖೆ ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿದರೆ, ಪ್ರಜ್ವಲ್ ವಿದೇಶದಲ್ಲಿ ಇರಲು ಆಗಲ್ಲ. ವಾಪಸ್ ಬರಲೇಬೇಕಾಗುತ್ತದೆ. ಪ್ರಜ್ವಲ್ ಅರೆಸ್ಟ್ ವಾರಂಟ್ ಆಧಾರದಲ್ಲಿ ಡಿಪ್ಲೋಮ್ಯಾಟಿಕ್ ಪಾಸ್‌ಪೋರ್ಟ್ ರದ್ದತಿಗೆ ಎಸ್‌ಐಟಿ ಪತ್ರ ಬರೆದಿದೆ. ಈಗಾಗಲೇ ಪ್ರಧಾನಿಯವರಿಗೆ ಸಿಎಂ ಸಹ ಪತ್ರ ಬರೆದಿದ್ದರು. ಇದರಲ್ಲಿ ವಿದೇಶಾಂಗ ಇಲಾಖೆಯ ಸಹಕಾರ ಅಗತ್ಯವಿದೆ. ಎಲ್ ಆರ್ ಶಿವರಾಮೇಗೌಡ ಮತ್ತು ವಕೀಲ ದೇವರಾಜೇಗೌಡ ಆಡಿಯೋ ಕುರಿತ ತನಿಖೆಯನ್ನು ಎಸ್ ಐಟಿ ನಿರ್ಧಾರ ಮಾಡಲಿದೆ ಎಂದರು.

ಕುಮಾರಸ್ವಾಮಿ ಪ್ರಜ್ವಲ್ ವಾಪಸ್ ಬರಲಿ ಎಂದು ಕರೆದಿದ್ದು ಅವರ ಕುಟುಂಬದ ವಿಚಾರ. ಪ್ರಜ್ವಲ್ ವಾಪಸ್ ಬಂದು ಕೇಸ್ ಎದುರಿಸಲಿ. ಸರ್ಕಾರ ಯಾರ ಫೋನ್ ಟ್ಯಾಪ್ ಮಾಡಿಲ್ಲ, ಟ್ಯಾಪಿಂಗ್ ಬಗ್ಗೆ ಹೆಚ್‌ಡಿಕೆ ಬಳಿ ನಿಖರ ಮಾಹಿತಿ ಇದ್ದರೆ ಕೊಡಲಿ, ತನಿಖೆ ಮಾಡುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com