
ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಕೆ.ಆರ್. ನಗರ ಸಂತ್ರಸ್ತೆಯ ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ತಾಯಿ ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್ಐಟಿ ಸಮನ್ಸ್ ಜಾರಿಯಾಗಿದೆ.
ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಅಜಿತ್‌ಗೆ ಎರಡು ಬಾರಿ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ ವಿಚಾರಣೆಗೆ ಹಾಜರಾಗದ ಕಾರಣ ಅಜಿತ್ ಗೆ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಸದ್ಯ ಅಜಿತ್ ತಲೆಮರೆಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ ಹೊಳೆನರಸೀಪುರದಲ್ಲಿರುವ ಅಜಿತ್ ನಿವಾಸಕ್ಕೆ ತೆರಳಿ ಎಸ್ಐಟಿ ಪೊಲೀಸರು ಸಮನ್ಸ್ ನೀಡಿದ್ದಾರೆ.
ಅಜಿತ್ ಸಂತ್ರಸ್ತ ಮಹಿಳೆಯನ್ನು ಕಾರಿನಲ್ಲಿ ಕರೆದೊಯ್ದಿದ್ದ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅಜಿತ್‌ಗೆ ಸಮನ್ಸ್ ಜಾರಿ ಮಾಡಲಾಗಿದೆ.
Advertisement