ಕ್ಯಾಂಪಸ್ ಆತ್ಮಹತ್ಯೆ ಪ್ರಕರಣಗಳ ಹೆಚ್ಚಳ: ಕಾಲೇಜು, ವಿಶ್ವವಿದ್ಯಾಲಯಗಳಿಗೆ ಬೆಂಗಳೂರು ಪೊಲೀಸರ ಸೂಚನೆ

ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲು ಮಾನಸಿಕ ಆರೋಗ್ಯ ವೃತ್ತಿಪರರನ್ನು ಒದಗಿಸುವ ಮತ್ತು ಅಧ್ಯಾಪಕರಿಗೆ ತರಬೇತಿ ನೀಡುವ ಮೂಲಕ ಕ್ಯಾಂಪಸ್‌ಗಳನ್ನು ವಿದ್ಯಾರ್ಥಿ ಸ್ನೇಹಿಯಾಗಿಸುವ ಕ್ರಮಗಳನ್ನು ಕೈಗೊಳ್ಳಬೇಕು. ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳ ನೆರವಿಗೆ ಸಹಾಯವಾಣಿಯನ್ನು ತೆರೆಯಬೇಕು ಎಂದು ಸೂಚಿಸಲಾಗಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಕಾಲೇಜು ಮತ್ತು ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಗ್ನೇಯ ವಿಭಾಗದ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ನಗರದ ಪೊಲೀಸರು ಸೂಚನೆಯನ್ನು ಕಳುಹಿಸಿದ್ದಾರೆ.

ಕಾಲೇಜುಗಳಲ್ಲಿ ಸುರಕ್ಷತಾ ಕ್ರಮಗಳ ಅನುಷ್ಠಾನ ಮತ್ತು ಬೆಂಬಲ ವ್ಯವಸ್ಥೆಗಳನ್ನು ಸ್ಥಾಪಿಸುವ ಅಗತ್ಯವನ್ನು ಒತ್ತಿಹೇಳುತ್ತಾ, ಆಗ್ನೇಯ ವಿಭಾಗದ ಪೊಲೀಸ್ ಉಪ ಆಯುಕ್ತ ಸಿಕೆ ಬಾಬಾ, ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲು ಮಾನಸಿಕ ಆರೋಗ್ಯ ವೃತ್ತಿಪರರನ್ನು ಒದಗಿಸುವ ಮತ್ತು ಅಧ್ಯಾಪಕರಿಗೆ ತರಬೇತಿ ನೀಡುವ ಮೂಲಕ ಕ್ಯಾಂಪಸ್‌ಗಳನ್ನು ವಿದ್ಯಾರ್ಥಿ ಸ್ನೇಹಿಯಾಗಿಸುವ ಕ್ರಮಗಳನ್ನು ಕೈಗೊಳ್ಳಬೇಕು. ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳ ನೆರವಿಗೆ ಸಹಾಯವಾಣಿಯನ್ನು ತೆರೆಯಬೇಕು ಎಂದು ಸೂಚಿಸಲಾಗಿದೆ.

ವಿದ್ಯಾರ್ಥಿ-ಸಮಾಲೋಚಕರ ಅನುಪಾತ 5:1 ರಷ್ಟಿರಬೇಕು. ನಿಯಮಿತ ಮಾನಸಿಕ ಆರೋಗ್ಯ ತಪಾಸಣೆ ಮತ್ತು ತೊಂದರೆಯಲ್ಲಿರುವ ವಿದ್ಯಾರ್ಥಿಗಳಿಗೆ ತಕ್ಷಣದ ಸಹಾಯ ಸಿಗುವಂತಾಗಬೇಕು. 24/7 ಸಹಾಯವಾಣಿ ಮತ್ತು ಮಾನಸಿಕ ಆರೋಗ್ಯದ ಕಾರ್ಯಕ್ರಮಗಳ ಹೊರತಾಗಿ ಬಿಕ್ಕಟ್ಟು ಮಧ್ಯಸ್ಥಿಕೆ ಸೇವೆಗಳ ಸ್ಥಾಪನೆ ಅಗತ್ಯವಿದ್ದು, ಇದು ವಿದ್ಯಾರ್ಥಿಗಳಲ್ಲಿ ಯಾತನೆ ಅಥವಾ ಆತ್ಮಹತ್ಯೆಯಂತ ಪ್ರವೃತ್ತಿಯನ್ನು ಗುರುತಿಸುತ್ತದೆ ಎಂದಿದೆ.

ತರಬೇತಿ ಪಡೆದ ವಿದ್ಯಾರ್ಥಿ ಸ್ವಯಂಸೇವಕರು ತಮ್ಮ ಸಹ ವಿದ್ಯಾರ್ಥಿಗಳಿಗೆ ಸಹಾಯ ಮತ್ತು ಮಾರ್ಗದರ್ಶನವನ್ನು ಒದಗಿಸುವ ನೆಟ್‌ವರ್ಕ್‌ಗಳನ್ನು ರಚಿಸುವುದು ಸೂಕ್ತವಾಗಿರುತ್ತದೆ. ಶೈಕ್ಷಣಿಕ ಸಂಸ್ಥೆಗಳು ಒತ್ತಡ ನಿರ್ವಹಣೆ ಮತ್ತು ಸಮಯ ನಿರ್ವಹಣೆ, ಅಧ್ಯಯನ ಕೌಶಲ್ಯಗಳು ಮತ್ತು ಆರೋಗ್ಯಕರ ಜೀವನಶೈಲಿಯ ಕುರಿತು ಕಾರ್ಯಾಗಾರಗಳಂತಹ ಸಮಗ್ರ ಉಪಕ್ರಮಗಳ ಮೂಲಕ ವಿದ್ಯಾರ್ಥಿಗಳ ಯೋಗಕ್ಷೇಮಕ್ಕೆ ಆದ್ಯತೆ ನೀಡಬೇಕು. ಅಂತರ್ಗತ ಮತ್ತು ಸಾಂಸ್ಕೃತಿಕವಾಗಿ ಸೂಕ್ಷ್ಮ ಸಮಾಲೋಚನೆ ಸೇವೆಗಳನ್ನು ಬಹು ಭಾಷೆಗಳಲ್ಲಿ ನೀಡಬೇಕು. ಇದರೊಂದಿಗೆ ಅಲ್ಪಸಂಖ್ಯಾತ ಮತ್ತು ಅಂತರರಾಷ್ಟ್ರೀಯ ವಿದ್ಯಾರ್ಥಿಗಳಿಗೆ ಅನುಗುಣವಾಗಿ ಅಗತ್ಯ ಸಹಾಯ ಮಾಡಬೇಕು ಎಂದು ಹೇಳಲಾಗಿದೆ.

ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಪಿಇಎಸ್ ವಿವಿ ಕ್ಯಾಂಪಸ್ ಕಟ್ಟಡದಿಂದ ಜಿಗಿದು ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆ

ಸಂಸ್ಥೆಗಳು ತಮ್ಮ ಕ್ಯಾಂಪಸ್‌ಗಳಲ್ಲಿ ನಿಯಮಿತವಾಗಿ ಮಾನಸಿಕ ಆರೋಗ್ಯ ಜಾಗೃತಿ ಅಭಿಯಾನಗಳನ್ನು ಆಯೋಜಿಸಬೇಕು. ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳನ್ನು ತಲುಪಲು ಪೋಸ್ಟರ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳನ್ನು ಬಳಸಬೇಕು. ವಿದ್ಯಾರ್ಥಿಗಳ ಪೋಷಕರು ಮತ್ತು ಸಮುದಾಯಗಳನ್ನು ಸಹ ಒಳಗೊಳ್ಳಬೇಕು. ಕ್ಯಾಂಪಸ್‌ಗಳಲ್ಲಿ ಯೋಗ, ವ್ಯಾಯಾಮ, ಹೊರಾಂಗಣ ಆಟಗಳು ಮತ್ತು ಪಠ್ಯೇತರ ಚಟುವಟಿಕೆಗಳಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಅಗತ್ಯವಿದೆ ಎಂದು ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com