ನಡು ರಸ್ತೆಯಲ್ಲಿ ಗ್ಯಾಂಗ್ ವಾರ್: ಇದು ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ಕರ್ನಾಟಕ ಮಾಡೆಲ್! ಬಿಜೆಪಿ ಕಿಡಿ
ಗ್ಯಾಂಗ್ ವಾರ್

ನಡು ರಸ್ತೆಯಲ್ಲಿ ಗ್ಯಾಂಗ್ ವಾರ್: ಇದು ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ಕರ್ನಾಟಕ ಮಾಡೆಲ್! ಬಿಜೆಪಿ ಕಿಡಿ

ಎರಡು ಗುಂಪಿನ ನಡುವೆ ಭಯಾನಕ ಗ್ಯಾಂಗ್ ವಾರ್ ನಡೆದಿರುವ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
Published on

ಉಡುಪಿ: ಎರಡು ಗುಂಪಿನ ನಡುವೆ ಭಯಾನಕ ಗ್ಯಾಂಗ್ ವಾರ್ ನಡೆದಿರುವ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಾಪು ಮೂಲದ ಎರಡು ಬಣದ ಯುವಕರು ಉಡುಪಿ- ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು ಜಗಳ ಮಾಡಿಕೊಂಡು ಕಾರುಗಳನ್ನು ಗುದ್ದಿಸಿ ಹೊಡೆದಾಟ ಮಾಡಿಕೊಂಡಿದ್ದಾರೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅವರನ್ನು ಜೂನ್ 1ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.

ನಡು ರಸ್ತೆಯಲ್ಲಿ ಗ್ಯಾಂಗ್ ವಾರ್: ಇದು ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ಕರ್ನಾಟಕ ಮಾಡೆಲ್! ಬಿಜೆಪಿ ಕಿಡಿ
ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದ ಬಿಜೆಪಿ

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಗ್ಯಾಂಗ್ ವಾರ್ ವಿಡಿಯೋ ಹಂಚಿಕೊಂಡಿರುವ ಬಿಜೆಪಿ, ಗ್ಯಾಂಗ್ ವಾರ್‌ಗಳು, ಯುವತಿಯರ ಮೇಲೆ ಅತ್ಯಾಚಾರ, ಹಲ್ಲೆ, ಹತ್ಯೆ, ಬಾಂಬ್ ಬ್ಲಾಸ್ಟ್‌ಗಳು, ಗಾಂಜಾ, ಅಫೀಮು, ರೇವ್ ಪಾರ್ಟಿಗಳು, ಪಾಕೈಸ್ತಾನ್ ಜಿಂದಾಬಾದ್ ಘೋಷಣೆಗಳು ಸೇರಿ ಇತ್ಯಾದಿಗಳು ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾಮನ್ ಆಗಿದೆ.

ಉಗ್ರರು, ಮತಾಂಧರು, ಪುಂಡರು, ಕಿಡಿಗೇಡಿಗಳು ರೌಡಿಗಳಿಗೆ ಸಿದ್ದರಾಮಯ್ಯ ಸರ್ಕಾರ ಫ್ರೀ ಹ್ಯಾಂಡ್ ಕೊಟ್ಟು ಪೊಲೀಸರನ್ನು ಕೈಗೊಂಬೆ ಮಾಡಿಕೊಂಡಿರುವ ಪರಿಣಾಮವೇ ಇಂದು ಅರಾಜಕತೆ ಸೃಷ್ಟಿಯಾಗಿದೆ. ಇದು ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ಕರ್ನಾಟಕ ಮಾಡೆಲ್ ಎಂದು ಕಿಡಿಕಾರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com