ಮೈಸೂರಿಗೆ ಬಂದಿದ್ದ ಪ್ರಧಾನಿ ಮೋದಿ ಆತಿಥ್ಯದ ವೆಚ್ಚವನ್ನು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ನೀಡಿಲ್ಲ: ಈಶ್ವರ ಖಂಡ್ರೆ

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ(ಎನ್​​ಟಿಸಿಎ) ಕಳೆದ ವರ್ಷ ಏಪ್ರಿಲ್​​ನಲ್ಲಿ ಆಯೋಜಿಸಿದ್ದ ಹುಲಿ ಯೋಜನೆ - 50 ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಮೈಸೂರಿಗೆ ಆಗಮಿಸಿದ್ದರು.
ಸಚಿವ ಈಶ್ವರ ಖಂಡ್ರೆ
ಸಚಿವ ಈಶ್ವರ ಖಂಡ್ರೆ
Updated on: 

ಬೆಂಗಳೂರು: ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ(ಎನ್​​ಟಿಸಿಎ) ಕಳೆದ ವರ್ಷ ಏಪ್ರಿಲ್​​ನಲ್ಲಿ ಆಯೋಜಿಸಿದ್ದ ಹುಲಿ ಯೋಜನೆ - 50 ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ವೆಚ್ಚ 80 ಲಕ್ಷ ರೂ. ಸೇರಿದಂತೆ 3.33 ಕೋಟಿ ರೂ. ಬಾಕಿ ಬಿಲ್ ​ಅನ್ನು ಎನ್​​ಟಿಸಿಎ ಪಾವತಿಸಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಶನಿವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 2023ರ ಏಪ್ರಿಲ್​ನಲ್ಲಿ ಈ ಕಾರ್ಯಕ್ರಮ ನಡೆದಾಗ ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿತ್ತು. ಹೀಗಾಗಿ ರಾಜ್ಯ ಸರ್ಕಾರ ಭಾಗಿ ಆಗಿರಲಿಲ್ಲ. ರಾಜ್ಯ ಲಾಂಛನದ ಬಳಕೆಯೂ ಆಗಿರಲಿಲ್ಲ. ಇದು ಸಂಪೂರ್ಣ ಎನ್​​ಟಿಸಿಎ ಕಾರ್ಯಕ್ರಮವಾಗಿತ್ತು ಎಂದಿದ್ದಾರೆ.

ದೇಶದ ಪ್ರಧಾನಿಯವರು ರಾಜ್ಯಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಆತಿಥ್ಯ ನಿರ್ವಹಣೆಗಾಗಿ ಸ್ಥಳೀಯವಾಗಿ ರಚಿಸಲಾಗಿದ್ದ ಸಮಿತಿಯಲ್ಲಿ ನಮ್ಮ ಅರಣ್ಯ ಇಲಾಖೆಯ ಅಧಿಕಾರಿಗಳು ಇದ್ದರು. ವಾಸ್ತವವಾಗಿ ಈ ಕಾರ್ಯಕ್ರಮಕ್ಕೆ ಆಗುವ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಎನ್​​ಟಿಸಿಎ ಹೇಳಿತ್ತು ಎಂದು ಖಂಡ್ರೆ ವಿವರಿಸಿದರು.

ಸಚಿವ ಈಶ್ವರ ಖಂಡ್ರೆ
ಮಹಾರಾಷ್ಟ್ರ, ಗೋವಾ ಅರಣ್ಯಾಧಿಕಾರಿಗಳೊಂದಿಗೆ ರಾಜ್ಯದ ಅಧಿಕಾರಿಗಳ ಸಭೆ; ಹುಲಿ ಸೇರಿ ಇತರ ಜೀವಿಗಳ ಸಂರಕ್ಷಣೆ ಕುರಿತು ಚರ್ಚೆ

ಮೂರು ದಿನಗಳ ಈ ಕಾರ್ಯಕ್ರಮಕ್ಕೆ ಒಟ್ಟು 6 ಕೋಟಿ 33 ಲಕ್ಷ ರೂ. ವೆಚ್ಚವಾಗಿದ್ದು, ಈ ಪೈಕಿ 3 ಕೋಟಿ ರೂಪಾಯಿ ಬಂದಿದ್ದು, ಇನ್ನೂ 3 ಕೋಟಿ 33 ಲಕ್ಷ ರೂ. ಬಾಕಿ ಬರಬೇಕಿದೆ. ಇದರಲ್ಲಿ ರಾಡಿಸನ್ ಬ್ಲೂ ಆತಿಥ್ಯ ವೆಚ್ಚ ಸುಮಾರು 80 ಲಕ್ಷ ರೂ. ಸೇರಿದೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ನಮ್ಮ ಇಲಾಖೆಯ ಅಧಿಕಾರಿಗಳು ಹಲವು ಬಾರಿ ಪತ್ರ ಬರೆದಿದ್ದರೂ, ಫೋನ್ ಮಾಡಿದ್ದರೂ ಎನ್​​ಟಿಸಿಎ ಈ ಬಾಕಿ ಹಣ ನೀಡಿಲ್ಲ. ಈಗ ವಿಷಯ ತಮ್ಮ ಗಮನಕ್ಕೆ ಬಂದಿದ್ದು, ಸೌಹಾರ್ದಯುತವಾಗಿ ಪರಿಹರಿಸಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com