ಚನ್ನಗಿರಿ ಲಾಕಪ್​ ಡೆತ್: ಪೊಲೀಸ್ ಠಾಣೆ ಧ್ವಂಸ ಪ್ರಕರಣದ ತನಿಖೆ ಸಿಐಡಿಗೆ!

ದಾವಣಗೆರೆಯ ಚನ್ನಗಿರಿ ಠಾಣೆಯಲ್ಲಿ ಲಾಕಪ್​ ಡೆತ್, ಠಾಣೆ ಬಳಿ ದಾಂಧಲೆ ಪ್ರಕರಣದ ತನಿಖೆಯನ್ನು ಇದೀಗ ಸಿಐಡಿಗೆ ವಹಿಸಲಾಗಿದೆ.
ಚನ್ನಗಿರಿ ಪೊಲೀಸ್ ಠಾಣೆ
ಚನ್ನಗಿರಿ ಪೊಲೀಸ್ ಠಾಣೆ
Updated on

ದಾವಣಗೆರೆ: ದಾವಣಗೆರೆಯ ಚನ್ನಗಿರಿ ಠಾಣೆಯಲ್ಲಿ ಲಾಕಪ್​ ಡೆತ್, ಠಾಣೆ ಬಳಿ ದಾಂಧಲೆ ಪ್ರಕರಣದ ತನಿಖೆಯನ್ನು ಇದೀಗ ಸಿಐಡಿಗೆ ವಹಿಸಲಾಗಿದೆ.

ಮಟ್ಕಾ ನಡೆಸುತ್ತಿದ್ದ ಆರೋಪದಲ್ಲಿ ಚನ್ನಗಿರಿ ಪೊಲೀಸರು ಅದಿಲ್ ಎಂಬಾತನನ್ನ ವಶಕ್ಕೆ ಪಡೆದಿದ್ದರು. ಠಾಣೆಯಲ್ಲಿ ಅದಿಲ್ ಕುಸಿದು ಬಿದ್ದಿದ್ದು ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದನು. ಈ ವಿಷಯ ತಿಳಿಯುತ್ತಿದ್ದಂತೆ ಉದ್ವಿಗ್ನಗೊಂಡ ಮೃತನ ಸಂಬಂಧಿಕರು ಮತ್ತು ನೂರಾರು ಜನ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದ್ದು ಅಲ್ಲೆ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು.

ಈ ಪ್ರಕರಣದ ತನಿಖೆಯನ್ನು ಇದೀಗ ಸಿಐಡಿ ಹೆಗಲಿಗೆ ನೀಡಲಾಗಿದ್ದು ಶೀಘ್ರವೇ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಆರಂಭಿಸಲಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದ್ದಂತೆ 25 ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತಾಗಿ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ‌ಪ್ರಶಾಂತ್​ ಮಾತನಾಡಿದ್ದು, ಪ್ರಕರಣದ ತನಿಖೆ ಸಿಐಡಿಗೆ ವಹಿಸಲಾಗಿದೆ ಎಂದರು.

ಚನ್ನಗಿರಿ ಪೊಲೀಸ್ ಠಾಣೆ
ಚನ್ನಗಿರಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು: ರೊಚ್ಚಿಗೆದ್ದ ಸಂಬಂಧಿಕರಿಂದ ಠಾಣೆ ಧ್ವಂಸ, 11 ಪೊಲೀಸರಿಗೆ ಗಾಯ

ಪೊಲೀಸ್ ಠಾಣೆಗೆ ನುಗ್ಗಿ ಠಾಣೆಯಲ್ಲಿದ್ದ ವಸ್ತುಗಳನ್ನು ಉದ್ರಿಕ್ತರು ಧ್ವಂಸ ಮಾಡಿದ್ದಾರೆ. ನಂತರ ಚನ್ನಗಿರಿ ಪೊಲೀಸ್ ಠಾಣೆಯ ಆವರಣದಲ್ಲಿ ಜಮಾಯಿಸಿದ್ದ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದ ಕಲ್ಲು ತೂರಾಟದಲ್ಲಿ 7 ಪೊಲೀಸ್ ವಾಹನ ಹಾಗೂ 11 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com