ರಸ್ತೆ ಅಪಘಾತ: ಕರ್ನಾಟಕದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಒಂದೇ ದಿನ 51 ಮಂದಿ ಸಾವು!

ರಸ್ತೆ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕರ್ನಾಟಕದಲ್ಲಿ 24 ಗಂಟೆಗಳ ಅವಧಿಯಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ 51 ಮಂದಿ ಸಾವನ್ನಪ್ಪಿದ್ದಾರೆ.
Accident
ರಸ್ತೆ ಅಪಘಾತ (ಸಂಗ್ರಹ ಚಿತ್ರ)online desk

ಬೆಂಗಳೂರು: ರಸ್ತೆ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕರ್ನಾಟಕದಲ್ಲಿ 24 ಗಂಟೆಗಳ ಅವಧಿಯಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ 51 ಮಂದಿ ಸಾವನ್ನಪ್ಪಿದ್ದಾರೆ.

ಭಾನುವಾರ ಬೆಳಿಗ್ಗೆ ನಸುಕಿನ ಜಾವದಲ್ಲಿ ಹಾಸನದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದರು.

ರಸ್ತೆ ಅಪಘಾತಗಳ ಕುರಿತು ಟ್ವೀಟ್ ಮಾಡಿರುವ ಟ್ರಾಫಿಕ್ ಹಾಗೂ ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್, ಈ ಮಾಹಿತಿ ಹಂಚಿಕೊಂಡಿದ್ದಾರೆ.

Accident
ಹಾಸನ: ಭೀಕರ ರಸ್ತೆ ಅಪಘಾತ, ಮಗು ಸೇರಿ 6 ಮಂದಿ ಸ್ಥಳದಲ್ಲೇ ಸಾವು

"24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 51 ಮಂದಿ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಪೈಕಿ ಹಲವು ಪ್ರಕರಣಗಳು ಅತಿ ವೇಗ ಹಾಗೂ ಅಜಾಗರೂಕ ಚಾಲನೆಯಿಂದ ಸಂಭವಿಸಿದೆ. ರಸ್ತೆ ಸುರಕ್ಷತೆಗೆ ಎಲ್ಲಾ ಪಾಲುದಾರರಿಂದ ಜವಾಬ್ದಾರಿಯುತ ನಡವಳಿಕೆಯ ಅಗತ್ಯವಿದೆ" ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com