ಚಾಮರಾಜನಗರ: ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಮಹಿಳೆಯನ್ನು ರೇಪ್ ಮಾಡಿದ ಗ್ರಾ.ಪಂ ಅಧ್ಯಕ್ಷೆ ಪುತ್ರ!

ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನೀಲಾಂಬಿಕೆಯ ಪುತ್ರ ವೈದೇಶ್ ವಿರುದ್ಧ ಸಂತ್ರಸ್ಥ ಮಹಿಳೆ ದೂರು ನೀಡಿದ್ದಾರೆ.
ಆರೋಪಿ ವೈದೇಶ್
ಆರೋಪಿ ವೈದೇಶ್
Updated on

ಚಾಮರಾಜನಗರ: ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುತ್ರ ವೈದೇಶ್​ ಎಂಬಾತ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನೀಲಾಂಬಿಕೆಯ ಪುತ್ರ ವೈದೇಶ್ ವಿರುದ್ಧ ಸಂತ್ರಸ್ಥ ಮಹಿಳೆ ದೂರು ನೀಡಿದ್ದಾರೆ. ಆಶ್ರಯ ಮನೆ ಬೇಕೆಂದರೆ ತನ್ನ ಜೊತೆ ಮಲಗುವಂತೆ ಒತ್ತಾಯಿಸುತ್ತಿದ್ದನು. ಅಲ್ಲದೆ ನಗ್ನ ಫೋಟೋಗಳನ್ನು ಚಿತ್ರೀಸಿಕೊಂಡು ತನ್ನ ಜೊತೆ ಮಲಗದಿದ್ದರೆ ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ ನಿರಂತರವಾಗಿ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.

ಇದೀಗ ತನ್ನ ಖಾಸಗಿ ವಿಡಿಯೋವನ್ನು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಮಾಡಲಾಗಿದ್ದು. ಇದರಿಂದ ಮನನೊಂದ ಮಹಿಳೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಆರೋಪಿ ವೈದೇಶ್
ಮಂಗಳೂರಿನಲ್ಲಿ ರಸ್ತೆ ಮಧ್ಯೆ ನಮಾಜ್: ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲು

ಈ ದೂರಿನ ಹಿನ್ನೆಲೆಯಲ್ಲಿ ವೈದೇಶ್ ಹಾಗೂ ವೀಡಿಯೋ ವೈರಲ್ ಮಾಡಿದ ಬಸಮಣಿ, ಶಿವಮ್ಮ ಎಂಬುವರ ವಿರುದ್ದ ಐಪಿಸಿ ಸೆಕ್ಷನ್ 376, 384, 417, 509 ಮತ್ತು ಐಟಿ ಕಾಯ್ದೆ 66(ಇ), 67, 67(ಎ) ಅನ್ವಯ ಪ್ರಕರಣ ದಾಖಲು ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com