Arjuna ಆನೆ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ: ನಟ Darshan ಅಭಿಮಾನಿ ವಿರುದ್ಧ ಅರಣ್ಯ ಇಲಾಖೆ FIR

ಇತ್ತೀಚೆಗೆ ಕಾಡಾನೆ ಸೆರೆ ವೇಳೆ ದುರಂತ ಸಾವಿಗೀಡಾಗಿದ್ದ ದಸರಾ ಆನೆ ಅರ್ಜುನನ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅಭಿಮಾನಿ ವಿರುದ್ಧ ಪ್ರಕರಣ ದಾಖಲಿಸಿದೆ.
trespassing burial of Arjuna
ಅರ್ಜುನ ಆನೆ ಸಮಾಧಿ
Updated on

ಹಾಸನ: ಇತ್ತೀಚೆಗೆ ಕಾಡಾನೆ ಸೆರೆ ವೇಳೆ ದುರಂತ ಸಾವಿಗೀಡಾಗಿದ್ದ ದಸರಾ ಆನೆ ಅರ್ಜುನನ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅಭಿಮಾನಿ ವಿರುದ್ಧ ಪ್ರಕರಣ ದಾಖಲಿಸಿದೆ.

ಅರಣ್ಯ ಕಾಯಿದೆ 1963 ಮತ್ತು 1969 ರ ಅಡಿಯಲ್ಲಿ ನಟ ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ಹೆಚ್.ಡಿ.ಕೋಟೆ ನಿವಾಸಿ ನವೀನ್ ವಿರುದ್ಧ ಯಸಳೂರು ವಲಯ ಅರಣ್ಯಾಧಿಕಾರಿಗಳು ಮಂಗಳವಾರ ಎಫ್ಐಆರ್ ದಾಖಲಿಸಿದ್ದಾರೆ. ಸಕಲೇಶಪುರ ತಾಲೂಕಿನ ದಬ್ಬೆಕಟ್ಟೆ ಮೀಸಲು ಅರಣ್ಯದಲ್ಲಿ ಇತ್ತೀಚೆಗೆ ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡಿದ್ದ ನವೀನ್ ಮತ್ತು ಆತನ ನೇತೃತ್ವದಲ್ಲಿ ಹಲವರು ಅತಿಕ್ರಮ ಪ್ರವೇಶ ಮಾಡಿದ್ದರು.

ಅಲ್ಲದೆ ಅರ್ಜುನ ಆನೆ ಸಮಾಧಿ ಭೂಮಿಯನ್ನು ಅಗೆದು ಕಲ್ಲಿನ ಸ್ಲಾಬ್‌ಗಳಿಂದ ಬೇಲಿ ಹಾಕಿ ಸಮಾಧಿಯನ್ನು ವಿರೂಪಗೊಳಿಸಿದ್ದರು ಎಂದು ಆರೋಪಿಸಲಾಗಿದೆ. ಈ ನಿಟ್ಟಿನಲ್ಲಿ ಸಮಾಧಿ ಸುತ್ತ ಬೇಲಿ ಹಾಕಲು ಅರಣ್ಯ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದ್ದು, ಸ್ಥಳೀಯರು ನೀಡಿದ್ದ ದೂರಿನ ಆಧಾರದ ಮೇಲೆ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

trespassing burial of Arjuna
ಅರ್ಜುನ ಆನೆ ಸ್ಮಾರಕ ನಿರ್ಮಾಣಕ್ಕೆ ನಟ Darshan Thoogudeepa ನೆರವು, ಸ್ಲ್ಯಾಬ್ ಕಲ್ಲುಗಳ ಪೂರೈಕೆ; Video

ಏನಿದು ಪ್ರಕರಣ?

ಈ ಹಿಂದೆ ಹಾಸನದ ಯಸಳೂರಿನಲ್ಲಿ ಕಾಡಾನೆ ಸೆರೆ ವೇಳೆ ದಸರಾ ಆನೆ ಅರ್ಜುನ ಮೃತಪಟ್ಟಿತ್ತು. ಆನೆಯನ್ನು ಅಲ್ಲಿಯೇ ದಬ್ಬೆಕಟ್ಟೆ ಮೀಸಲು ಅರಣ್ಯದಲ್ಲಿ ಸಮಾಧಿ ಮಾಡಲಾಗಿತ್ತು. ಹಲವು ದಿನಗಳ ಬಳಿಕ ಈ ಸಮಾಧಿ ಸ್ಥಳಕ್ಕೆ ನಟ ದರ್ಶನ್ ಭೇಟಿ ನೀಡಿದ್ದರು. ಬಳಿಕ ಸಾಮಾಜಿಕ ಜಾಲತಾಣದಲ್ಲಿ ಅರ್ಜುನ ಆನೆ ಸಮಾಧಿ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಕುರಿತು ಟ್ವೀಟ್ ಮಾಡಿ, ಸ್ಮಾರಕ ನಿರ್ಮಿಸುವಂತೆ ಸರ್ಕಾರಕ್ಕೆ ಮತ್ತು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.

ಬಳಿಕ ಸಮಾಧಿ ಸ್ಥಳಕ್ಕೆ ಕಲ್ಲಿನ ಸ್ಲಾಬ್ ಗಳನ್ನು ಕೂಡ ನೀಡಿದ್ದರು. ಈ ವಿಚಾರ ಸುದ್ದಿಯಾಗುತ್ತಲೇ ಅರಣ್ಯ ಇಲಾಖೆ ದರ್ಶನ್ ನೆರವನ್ನು ತಿರಸ್ಕರಿಸಿತ್ತು. ಆದರೆ ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡ ಹೆಚ್.ಡಿ.ಕೋಟೆ ನಿವಾಸಿ ನವೀನ್ ಮತ್ತು ಆತನ ತಂಡ ಅರ್ಜುನ ಆನೆ ಸಮಾಧಿ ಸ್ಥಳಕ್ಕೆ ತೆರಳಿ ಅಲ್ಲಿ ಸಮಾಧಿ ನಿರ್ಮಿಸಲು ಮುಂದಾಗಿ ಅರಣ್ಯ ಇಲಾಖೆ ಅನುಮತಿ ಇಲ್ಲದೇ ಭೂಮಿಯನ್ನು ಅಗೆದು ವಿರೂಪಗೊಳಿಸಿದ್ದಾರೆ ಎಂದು ಹೇಳಲಾಗಿದೆ.

ಈ ಸಂಬಂಧ ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ ಅರಣ್ಯ ಇಲಾಖೆ ನವೀನ್ ಮತ್ತು ಆತನ ಸಂಗಡಿಗರ ವಿರುದ್ಧ ಪ್ರಕರಣ ದಾಖಲಿಸಿದೆ.

ಆದಷ್ಟು ಬೇಗ ಸ್ಮಾರಕಕ ನಿರ್ಮಿಸಿ: ಸಾರ್ವಜನಿಕರ ಆಗ್ರಹ

ಇನ್ನು ಸರ್ಕಾರದಿಂದ ನಿರ್ಲಕ್ಷ್ಯಕ್ಕೆ ತುತ್ತಾಗಿರುವ ಅರ್ಜುನ ಆನೆ ಸ್ಮಾರಕ ನಿರ್ಮಾಣ ಕಾರ್ಯವನ್ನು ಅರಣ್ಯ ಇಲಾಖೆ ಮತ್ತು ರಾಜ್ಯ ಸರ್ಕಾರ ಆದಷ್ಟು ಬೇಗ ಪೂರ್ಣಗೊಳಿಸಬೇಕು. ಆ ಮೂಲಕ ದಶಕಗಳ ಕಾಲ ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತ ಅರ್ಜುನ ಆನೆಗೆ ಗೌರವ ನೀಡಬೇಕು ಎಂದು ಪರಿಸರವಾದಿಗಳು, ಪ್ರಾಣಿಪ್ರಿಯರು, ಸ್ಥಳೀಯರು ಮತ್ತು ಅರ್ಜುನ ಆನೆ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.

ಈ ಹಿಂದೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಸಚಿವ ಈಶ್ವರ ಖಂಡ್ರೆ ಕೂಡ ಅರ್ಜುನ ಸ್ಮಾರಕ ನಿರ್ಮಿಸುವ ಭರವಸೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com