ಪ್ರಜ್ವಲ್ ರೇವಣ್ಣ ಎಸ್‌ಐಟಿ ಮುಂದೆ ಹಾಜರಾಗಿ, ತನಿಖೆ ಎದುರಿಸಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ರಾಜ್ಯದ ತನಿಖಾ ತಂಡದ (ಎಸ್‌ಐಟಿ) ಮುಂದೆ ಹಾಜರಾಗಿ ತನಿಖೆ ಎದುರಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೋಮವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರು ಈ ಪ್ರಕರಣದಲ್ಲಿ ಸ್ಪಷ್ಟ ಹೇಳಿಕೆ ನೀಡಬೇಕು. ಅವರು ಎಸ್‌ಐಟಿ ತನಿಖೆ ಎದುರಿಸಬೇಕು. ಇದು ನಮ್ಮ ಬೇಡಿಕೆಯೂ ಹೌದು ಎಂದು ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಒಂದು ವರ್ಷ ಪೂರೈಸಿದ್ದು, ಅದರ ಸಾಧನೆ ದೊಡ್ಡ ಶೂನ್ಯವಾಗಿದೆ. ಯಾವುದೇ ಅಭಿವೃದ್ಧಿಯಾಗಿಲ್ಲ.ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಇಲ್ಲಿ ಯಾವುದಾದರೂ ಸರ್ಕಾರ ಇದೆಯೋ ಇಲ್ಲವೋ ಎಂಬ ಪ್ರಶ್ನೆಯನ್ನು ಜನತೆ ಕೇಳುತ್ತಿದ್ದಾರೆ. ಸಿಎಂ ಮತ್ತು ಗೃಹ ಸಚಿವರು ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ದೂರಿದರು.
ಮಂಗಳವಾರ ಗೃಹ ಸಚಿವ ಜಿ. ಪರಮೇಶ್ವರ ಮಾತನಾಡಿ, ಪ್ರಜ್ವಲ್ ಅವರು ಎಸ್‌ಐಟಿ ಮುಂದೆ ಹಾಜರಾಗಲು ಒಪ್ಪಿಗೆ ನೀಡಿರುವುದರಿಂದ ಈಗ ಸತ್ಯವನ್ನು ಕಂಡುಹಿಡಿಯಬೇಕಾಗಿದೆ. ನಾನು ವಿಡಿಯೋ ನೋಡಿದ್ದೇನೆ. ಕಾನೂನು ಪ್ರಕ್ರಿಯೆ ಮುಂದುವರಿಯುತ್ತದೆ. ಅವರಿಗೆ ಎಲ್ಲ ನೋಟಿಸ್‌ಗಳನ್ನು ನೀಡಲಾಗಿದೆ ಮತ್ತು ಈಗ ನಾವು ಸತ್ಯವನ್ನು ಕಂಡುಹಿಡಿಯಬೇಕಿದೆ ಎಂದು ಅವರು ಹೇಳಿದರು.
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಯಾವುದೇ ವಿಳಂಬ ಮಾಡುವುದಿಲ್ಲ. ಆದರೆ, ಪ್ರಕ್ರಿಯೆಯು ಸಮಯ ತೆಗೆದುಕೊಳ್ಳುತ್ತದೆ. ನಾವು ಅವರನ್ನು ಬಂಧಿಸಲು ಮತ್ತು ಇಲ್ಲಿಗೆ ಕರೆತರಲು ಸಾಧ್ಯವಿಲ್ಲ. ಅದಕ್ಕಾಗಿಯೇ ಒಂದು ಕಾರ್ಯವಿಧಾನವಿದೆ ಎಂದು ಪರಮೇಶ್ವರ್ ಹೇಳಿದರು.
ಪ್ರಜ್ವಲ್ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ದೂರಿನ ಮೇರೆಗೆ ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ಕರ್ನಾಟಕ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಕರಣದ ತನಿಖೆ ನಡೆಸುತ್ತಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ