ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ವಿಶೇಷ ನ್ಯಾಯಾಲಯಕ್ಕೆ ಮೊರೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿನ ಸಂತ್ರಸ್ತ ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ಭವಾನಿ ರೇವಣ್ಣ
ಭವಾನಿ ರೇವಣ್ಣ
Updated on

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿನ ಸಂತ್ರಸ್ತ ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ನಿರೀಕ್ಷಣಾ ಮತ್ತು ಸಾಮಾನ್ಯ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲದಯ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಸೋಮವಾರ ನಡೆಸಿದರು.

ಮಧ್ಯಂತರ ಮತ್ತು ಸಾಮಾನ್ಯ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ತನಿಖಾ ದಳದ ವಿಶೇಷ ಸರ್ಕಾರಿ ಅಭಿಯೋಜಕರಿಗೆ ನೋಟಿಸ್‌ ಜಾರಿ ಮಾಡಲಾಗಿದೆ” ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದೆ.

ಭವಾನಿ ರೇವಣ್ಣ
ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಕಾರು ಚಾಲಕನಿಗೆ‌ SIT ಸಮನ್ಸ್

ಅರ್ಜಿದಾರೆ ಪರ ವಕೀಲರು “ವಿದ್ಯುನ್ಮಾನ ಮಾಧ್ಯಮಗಳಲ್ಲಿ ಬಿಂಬಿಸಿರುವಂತೆ ಎಸ್‌ಐಟಿ ಜಾರಿ ಮಾಡಿರುವ ನೋಟಿಸ್‌ನಲ್ಲಿ ಯಾವುದೇ ಕಾನೂನಿನ ನಿಬಂಧನೆ ಉಲ್ಲೇಖಿಸಲಾಗಿಲ್ಲ. ಹೀಗಾಗಿ, ಅರ್ಜಿದಾರರಿಗೆ ಬಂಧನ ಭೀತಿ ಇದೆ” ಎಂದು ಆತಂಕ ವ್ಯಕ್ತಪಡಿಸಿದರು.

ಪ್ರಜ್ವಲ್‌ ಮತ್ತು ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ಅವರಿಗೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಮಾಧ್ಯಮಗಳು ಬಿಂಬಿಸಿವೆ. ಎಸ್‌ಐಟಿಯು ಮಾಧ್ಯಮಗಳು ಬಿಂಬಿಸಿದಂತೆ ಯಾವುದೇ ತೆರನಾದ ನೋಟಿಸ್‌ ಜಾರಿ ಮಾಡಿಲ್ಲ. ಮಾಧ್ಯಮಗಳ ವರದಿಯಿಂದ ತನಿಖಾ ಸಂಸ್ಥೆಯು ಬಂಧಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರುತ್ತಿರುವುದಾಗಿ ತಿಳಿಸಿದ್ದಾರೆ.

ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ ಆರ್‌ ನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 364ಎ, 365 ಮತ್ತು 34ರ ಅಡಿ ಎಫ್‌ಐಆರ್‌ ದಾಖಲಿಸಲಾಗಿದೆ. ಇದರಲ್ಲಿ ಭವಾನಿ ಪತಿ ಎಚ್‌ ಡಿ ರೇವಣ್ಣ ಮೊದಲ ಆರೋಪಿಯಾಗಿದ್ದು, ಸತೀಶ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ. ಇದೇ ಪ್ರಕರಣದಲ್ಲಿ ಭವಾನಿ ಅವರು ಜಾಮೀನು ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com