'ಲವ್ ಜಿಹಾದ್' ಪ್ರಕರಣಗಳನ್ನು ನಿಭಾಯಿಸಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

ಲವ್ ಜಿಹಾದ್‌ದಿಂದ ಹಿಂದೂ ಯುವತಿಯರ ರಕ್ಷಣೆ ಮಾಡಲು ಶ್ರೀರಾಮ ಸೇನೆ ಇದೀಗ ಸಹಾಯವಾಣಿ ಆರಂಭಿಸಿದೆ. ಸಹಾಯವಾಣಿ ಬುಧವಾರದಿಂದಲೇ ಕಾರ್ಯಾರಂಭ ಮಾಡಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್ ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಮಂಗಳೂರು: ಲವ್ ಜಿಹಾದ್‌ದಿಂದ ಹಿಂದೂ ಯುವತಿಯರ ರಕ್ಷಣೆ ಮಾಡಲು ಶ್ರೀರಾಮ ಸೇನೆ ಇದೀಗ ಸಹಾಯವಾಣಿ ಆರಂಭಿಸಿದೆ. ಸಹಾಯವಾಣಿ ಬುಧವಾರದಿಂದಲೇ ಕಾರ್ಯಾರಂಭ ಮಾಡಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್ ತಿಳಿಸಿದ್ದಾರೆ.

ಬೆಂಗಳೂರು, ಕಲಬುರಗಿ, ಬಾಗಲಕೋಟೆ, ದಾವಣಗೆರೆ ಮತ್ತು ಹುಬ್ಬಳ್ಳಿ-ಧಾರವಾಡದ ಆರು ಸ್ಥಳಗಳಿಂದ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ಈ ಸಹಾಯವಾಣಿ ಹುಬ್ಬಳ್ಳಿಯಲ್ಲಿ ಕೇಂದ್ರ ಕಚೇರಿಯಾಗಿ ಕಾರ್ಯನಿರ್ವಹಿಸಲಿದೆ. ಹಿಂದೂ ಯುವತಿಯರು ಮತ್ತು ಮಹಿಳೆಯರು ಸಹಾಯವಾಣಿ ಸಂಖ್ಯೆ 9090443444ಗೆ ದಿನದ 24 ಗಂಟೆಯೂ ಕರೆ ಮಾಡಬಹುದಾಗಿದೆ.

ಮುಸ್ಲಿಂ ಪುರುಷರು ಹಿಂದೂ ಮಹಿಳೆಯರಿಗೆ ಆಮಿಷವೊಡ್ಡಿ ಪ್ರೀತಿ-ಪ್ರೇಮದಲ್ಲಿ ಬೀಳಿಸಿಕೊಳ್ಳುತ್ತಾರೆ ಮತ್ತು ಅವರನ್ನು ಇಸ್ಲಾಂ ಧರ್ಮಕ್ಕೆ ಪರಿವರ್ತಿಸುತ್ತಾರೆ. ದೇಶ ಮತ್ತು ಕರ್ನಾಟಕದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿವೆ ಎಂದು ಶೆಟ್ಟಿ ಹೇಳಿದ್ದಾರೆ.

ಯುವತಿಯರು ಲವ್ ಜಿಹಾದ್‌ಗೆ ಬಲಿಯಾಗಿ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಕೆಲವು ಮಹಿಳೆಯರನ್ನು ಮಾದಕ ದ್ರವ್ಯ ಮಾರಾಟ, ಭಯೋತ್ಪಾದನೆಯಂತಹ ಕಾನೂನುಬಾಹಿರ ಚಟುವಟಿಕೆಗಳಿಗೆ ತಳ್ಳಲ್ಪಟ್ಟಿದ್ದಾರೆ. ಅನೇಕ ಸಂದರ್ಭಗಳಲ್ಲಿ, ಮಹಿಳೆಯರು ಮತ್ತು ಯುವತಿಯರು ತಮ್ಮ ಕುಟುಂಬ ಸದಸ್ಯರೊಂದಿಗೆ ತಮ್ಮ ದುಃಖವನ್ನು ಹಂಚಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಸಹಾಯವಾಣಿಯು ಅವರ ಸಂಕಷ್ಟಗಳನ್ನು ಬಹಿರಂಗಪಡಿಸಲು ಮತ್ತು ಮಾರ್ಗದರ್ಶನ ಪಡೆಯಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

ಪ್ರಾತಿನಿಧಿಕ ಚಿತ್ರ
ಮಂಗಳೂರು: ಲವ್ ಜಿಹಾದ್ ತಡೆಗೆ ಸಹಾಯವಾಣಿ ಆರಂಭಿಸಿದ ಭಜರಂಗದಳ, ವಿಶ್ವಹಿಂದೂ ಪರಿಷತ್

ಇಸ್ಲಾಂನ ಕುತಂತ್ರದಿಂದ ಪ್ರೀತಿ-ಪ್ರೇಮದ ಹೆಸರಿನಲ್ಲಿ ಅತ್ಯಾಚಾರ ಹೆಚ್ಚಾಗುತ್ತಿವೆ. ಸಹಾಯವಾಣಿಗೆ ಕರೆ ಮಾಡಿದ ಮಹಿಳೆಯರು, ಯುವತಿಯರಿಗೆ ಆಪ್ತ ಸಮಾಲೋಚನೆ ಮೂಲಕ ಧೈರ್ಯ ತುಂಬಲಾಗುವುದು. ಹಿಂದೂ ಮಹಿಳೆಯರು ಯಾವುದೇ ಕಾರಣಕ್ಕೂ ಆತ್ಮಹತ್ಯೆಗೆ ಶರಣಾಗಬಾರದು ಎಂದು ಸಹಾಯವಾಣಿಗೆ ಚಾಲನೆ ನೀಡಿದ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com