Sex Scandal: Prajwal Revanna ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್; ಹಾಸನ ಸಂಸದಗೆ ಬಂಧನ ಭೀತಿ!

ಸೆಕ್ಸ್ ಹಗರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಬಂಧನ ಭೀತಿ ಎದುರಾಗಿದ್ದು, ಪ್ರಜ್ವಲ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ಬುಧವಾರ ತಿರಸ್ಕರಿಸಿದೆ.
Prajwal Revanna
ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರತಿಭಟನೆ
Updated on

ಬೆಂಗಳೂರು: ಸೆಕ್ಸ್ ಹಗರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಬಂಧನ ಭೀತಿ ಎದುರಾಗಿದ್ದು, ಪ್ರಜ್ವಲ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ಬುಧವಾರ ತಿರಸ್ಕರಿಸಿದೆ.

ಅತ್ಯಾಚಾರ ಸೇರಿದಂತೆ ಹಲವು ಪ್ರಕರಣದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಬುಧವಾರ ತಿರಸ್ಕರಿಸಿದೆ. ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರಜ್ವಲ್ ಪರ ವಕೀಲ ಅರುಣ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

Prajwal Revanna
ಪ್ರಜ್ವಲ್ ರೇವಣ್ಣನನ್ನು ವಿಮಾನ ನಿಲ್ದಾಣದಲ್ಲಿಯೇ ಬಂಧಿಸಲಾಗುವುದು: ಗೃಹ ಸಚಿವ ಪರಮೇಶ್ವರ

ಅಧಿಕೃತ ಮೂಲಗಳ ಪ್ರಕಾರ, ಪ್ರಜ್ವಲ್ ಅವರು ಮೇ 30 ರಂದು ಮ್ಯೂನಿಚ್‌ನಿಂದ ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಎಂದು ಹೇಳಲಾಗಿದ್ದು, ಈಗಾಗಲೇ ಪ್ರಜ್ವಲ್ ವಿಮಾನ ಟಿಕೆಟ್ ಕೂಡ ಬುಕ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಮೇ 31 ರಂದು ಅವರು ನಗರಕ್ಕೆ ಬಂದಿಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಹೀಗಾಗಿ ಇದೀಗ ಎಲ್ಲರ ಚಿತ್ತ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದತ್ತ ನೆಟ್ಟಿದ್ದು, ಪ್ರಜ್ವಲ್ ರೇವಣ್ಣರನ್ನು ವಿಮಾನ ನಿಲ್ದಾಣದಲ್ಲೇ ಬಂಧಿಸಲು ಎಸ್ ಐಟಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆದ ಏಪ್ರಿಲ್ 27ರಂದೇ ಪ್ರಜ್ವಲ್ ಮತದಾನ ಮಾಡಿ ವಿದೇಶಕ್ಕೆ ಹಾರಿದ್ದರು. ಬಳಿಕ ಅವರದ್ದು ಎಂದು ಹೇಳಲಾದ ಸೆಕ್ಸ್ ಹಗರಣದ ವಿಡಿಯೋಗಳು ಭಾರಿ ಸದ್ದು ಮಾಡಿದ್ದವು. ಇದೇ ಪ್ರಕರಣದಲ್ಲಿ ಪ್ರಜ್ವಲ್ ತಂದೆ ಎಚ್ ಡಿ ರೇವಣ್ಣ ಕೂಡ ಬಂಧನಕ್ಕೀಡಾಗಿ ಬಳಿಕ ಜಾಮೀನಿನ ಮೇಲೆ ಹೊರಬಂದಿದ್ದಾರೆ.

Prajwal Revanna
ಹಾಸನ: ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ವಶಕ್ಕೆ ಪಡೆದ SIT!

ಅಪಹರಣ ಪ್ರಕರಣದಲ್ಲಿ ಅವರ ಧರ್ಮಪತ್ನಿ ಭವಾನಿ ರೇವಣ್ಣಗೂ ಬಂಧನ ಭೀತಿ ಇದ್ದು 31ರಂದು ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಅಂದೇ ಪ್ರಜ್ವಲ್ ಕೂಡ ನಗರಕ್ಕೆ ಆಗಮಿಸುವ ಸಾಧ್ಯತೆ ಇದೆ. ಮೇ 18 ರಂದು, ಎಸ್‌ಐಟಿ ಸಲ್ಲಿಸಿದ ಅರ್ಜಿಯ ಮೇರೆಗೆ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರಜ್ವಲ್ ರೇವಣ್ಣ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು. ಜೆಡಿಎಸ್ ಪಕ್ಷದಿಂದಲೂ ಅವರನ್ನು ಅಮಾನತು ಮಾಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com