Sex Scandal: 'ಹಾಸನ ಚಲೋ' ಪ್ರತಿಭಟನೆ, ವಿಮಾನ ನಿಲ್ದಾಣದಲ್ಲೇ ಸಂಸದ Prajwal Revanna ಬಂಧನಕ್ಕೆ ಆಗ್ರಹ!

‘ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣರನ್ನು ವಿಮಾನ ನಿಲ್ದಾಣದಲ್ಲೇ ಬಂಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಜನಪರ ಚಳವಳಿಗಳ ಒಕ್ಕೂಟ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದೆ.
'Hassan Chalo' march
ಹಾಸನ ಚಲೋ ಪ್ರತಿಭಟನೆ
Updated on

ಹಾಸನ: ‘ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣರನ್ನು ವಿಮಾನ ನಿಲ್ದಾಣದಲ್ಲೇ ಬಂಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಜನಪರ ಚಳವಳಿಗಳ ಒಕ್ಕೂಟ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದೆ.

ಹಾಸನದಲ್ಲಿ ಹಾಸನ ಚಲೋ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದ್ದು, ರಾಜ್ಯದ ಹಲವೆಡೆಗಳಿಂದ 113 ಸಂಘಟನೆಗಳ ಸುಮಾರು 10 ಸಾವಿರ ಪ್ರತಿನಿಧಿಗಳು ಭಾಗವಹಿದ್ದಾರೆ. ಹಾಸನದ ಹೇಮಾವತಿ ಪ್ರತಿಮೆಯ ಬಳಿಯಿಂದ ಮೆರವಣಿಗೆ ಆರಂಭವಾಗಿದ್ದು, ಜಿಲ್ಲಾಧಿಕಾರಿ ಕಚೇರಿ ಬಳಿಯ ಹೊಸ ಬಸ್‌ನಿಲ್ದಾಣ ರಸ್ತೆಯಲ್ಲಿ ಬಹಿರಂಗ ಸಭೆ ನಡೆಸಿದ್ದಾರೆ. ಸಿಪಿಎಂ ನಾಯಕಿ ಸುಭಾಷಿಣಿ ಅಲಿ, ಜನವಾದಿ ಮಹಿಳಾ ಸಂಘಟನೆ ಅಧ್ಯಕ್ಷೆ ಮೀನಾಕ್ಷಿ ಬಾಳಿ, ಲೇಖಕಿಯರಾದ ಬಾನು ಮುಷ್ತಾಕ್‌, ರೂಪ ಹಾಸನ ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದಾರೆ.

'Hassan Chalo' march
ಹಾಸನ: ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ವಶಕ್ಕೆ ಪಡೆದ SIT!

ಮಹಿಳೆಯರು, ರೈತರು, ವಿದ್ಯಾರ್ಥಿಗಳು, ಲಿಂಗ ಅಲ್ಪಸಂಖ್ಯಾತರು, ಸಾಹಿತಿಗಳು, ಬುದ್ಧಿಜೀವಿಗಳು, ಕಲಾವಿದರು ಮತ್ತು ನಿವೃತ್ತ ಸರ್ಕಾರಿ ಅಧಿಕಾರಿಗಳನ್ನು ಒಳಗೊಂಡ ಹಲವಾರು ಸಂಘಟನೆಗಳು ಪ್ರಜ್ವಲ್ ರೇವಣ್ಣ ವಿರುದ್ಧ ಪ್ರತಿಭಟನೆಗೆ ಆಗಮಿಸಿದ್ದಾರೆ. ಬೆಂಗಳೂರು, ಮೈಸೂರು, ಹಾಸನ, ಮಂಗಳೂರು, #ಮಂಡ್ಯ ಮತ್ತು ಚಿಕ್ಕಮಗಳೂರುಗಳಿಂದ ಮಹಿಳೆಯರ ಮೇಲಿನ ಲೈಂಗಿಕ ಶೋಷಣೆಯನ್ನು ವಿರೋಧಿಸಿ ಹಾಸನ ​​ಚಲೋ ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗವಹಿಸಿದ್ದಾರೆ.

‘ಕೆಲವು ಸಂಘಟನೆಗಳು ಸಂಸದ ಪ್ರಜ್ವಲ್‌ ಬಂಧನಕ್ಕೆ ಆಗ್ರಹಿಸಲು ಮುಂದಾಗಿದ್ದು, ಅದಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ಪೆನ್‌ ಡ್ರೈವ್‌ ಹಂಚಿ ಮಹಿಳೆಯರ ಮಾನ ಹರಾಜು ಮಾಡಿದವರನ್ನೂ ಬಂಧಿಸುವಂತೆ ಆಗ್ರಹಿಸಬೇಕು ಎನ್ನುವ ಚರ್ಚೆಯಾಗಿದ್ದರಿಂದ ಪ್ರಜ್ವಲ್‌ ಬಂಧನ ಹಾಗೂ ಪೆನ್‌ಡ್ರೈವ್‌ ಹಂಚಿದವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಹಾಸನ ಚಲೋ ನಡೆಸಲು ನಿರ್ಧರಿಸಲಾಗಿದೆ’ ಎಂದು ಸಂಘಟನೆಗಳ ಪ್ರಮುಖರು ತಿಳಿಸಿದ್ದಾರೆ.

ಸಂಘಟನೆಗಳಿಗೆ ತಮ್ಮದೇ ಬ್ಯಾನರ್‌, ಬಾವುಟ ತರದಂತೆ ಸೂಚಿಸಲಾಗಿದೆ. ಒಕ್ಕೂಟವೇ ಬಾವುಟ, ಕರಪತ್ರ ಪತ್ರ ಸಿದ್ಧ ಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲೂ ಪೋಸ್ಟರ್‌ ಅಭಿಯಾನವೂ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com