ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯದಲ್ಲಿ ಶುಕ್ರವಾರ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ
Updated on

ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯದಲ್ಲಿ ಶುಕ್ರವಾರ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಹೃದಯ ಸಂಬಂಧಿ ಹಾಗೂ ಕಫದ ತೊಂದರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ದಾವಣಗೆರೆ ಎಸ್ ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲ ಹೊತ್ತು ಶಾಮನೂರು ಶಿವಶಂಕರಪ್ಪ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ.

ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಶಾಮನೂರು ಶಿವಶಂಕರಪ್ಪ ಅವರನ್ನು ಕಾರಿನಲ್ಲೇ ದಾವಣಗೆರೆಯಿಂದ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗುತ್ತಿದೆ. ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ವೈದ್ಯರು ಶಾಮನೂರು ಅವರಿಗೆ ಫೇಸ್ ಮೇಕರ್ ಅಳವಡಿಕೆ ಮಾಡಿದ್ದಾರೆ.

ಶಾಮನೂರು ಶಿವಶಂಕರಪ್ಪ
ಗಾಯತ್ರಿ ಸಿದ್ದೇಶ್ವರ ಅಡುಗೆ ಮಾಡಲಷ್ಟೇ ಲಾಯಕ್ಕು: ಶಾಮನೂರು ಶಿವಶಂಕರಪ್ಪ ಹೇಳಿಕೆ, ವ್ಯಾಪಕ ಟೀಕೆ

ಶಾಮನೂರು ಶಿವಶಂಕರಪ್ಪ ಅವರು ಆಸ್ಪತ್ರೆಗೆ ದಾಖಲಾಗಿರುವ ವಿಚಾರ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಆಸ್ಪತ್ರೆ ಮುಂದೆ ಜಮಾಯಿಸಿದ್ದು, ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com