ಬೆಂಗಳೂರಿನಲ್ಲಿ ಪಟಾಕಿ ಅವಘಡ: 8ಕ್ಕೂ ಹೆಚ್ಚು ಜನರಿಗೆ ಗಾಯ

ಪಟಾಕಿ ಸಿಡಿದು ಗಾಯಗೊಂಡಿರುವ ಮೂವರು ಮಕ್ಕಳು ನಾರಾಯಣ ನೇತ್ರಾಲಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂವರಿಗೂ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
fireworks
ಪಟಾಕಿ (ಸಂಗ್ರಹ ಚಿತ್ರ)online desk
Updated on

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವಾಗ ನಗರದಲ್ಲಿ ಸಂಭವಿಸಿದ ಅವಘಡದಲ್ಲಿ ಮಕ್ಕಳು ಸೇರಿದಂತೆ 8ಕ್ಕೂ ಜನರಿಗೆ ಗಾಯಗಳಾಗಿದ್ದು, ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಟಾಕಿ ಸಿಡಿದು ಗಾಯಗೊಂಡಿರುವ ಮೂವರು ಮಕ್ಕಳು ನಾರಾಯಣ ನೇತ್ರಾಲಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂವರಿಗೂ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಇನ್ನು ಮಿಂಟೋ ಆಸ್ಪತ್ರೆಯಲ್ಲಿ 5 ವರ್ಷದ ಬಾಲಕ ಮತ್ತು 18 ವರ್ಷದ ಯುವಕ ಸೇರಿ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಇಬ್ಬರು ಬೇರೆಯವರು ಪಟಾಕಿ ಸಿಡಿಸುವುದನ್ನು ಸಮೀಪದಲ್ಲಿ ನಿಂತು ನೋಡುವಾಗ ಸಿಡಿದ ಪಟಾಕಿ ಕಣ್ಣಿಗೆ ತಾಕಿ ಗಾಯಗಳಾಗಿವೆ.

fireworks
ದೀಪಾವಳಿ ದಿನ ಗುಡ್ ನ್ಯೂಸ್ ಕೊಟ್ಟ ಡಾಲಿ ಧನಂಜಯ್: ಗೆಳತಿ ಜೊತೆ ಹಸೆಮಣೆ ಏರಲು ಸಿದ್ಧ

ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಗುಣಮುಖವಾದ ಬಳಿಕ ದೃಷ್ಟಿ ದೋಷ ಪ್ರಮಾಣ ತಿಳಿದುಬರಲಿದೆ ಎಂದು ಮೂಲಗಳು ತಿಳಿಸಿವೆ.

ಇನ್ನೆರಡು ಪ್ರತ್ಯೇಕ ಪ್ರಕರಣಗಳಲ್ಲಿ ಪಟಾಕಿ ಸಿಡಿಸುವುದನ್ನು ನೋಡುತ್ತಿದ್ದಾಗ ಕಿಡಿಯೊಂದು ಮೂರು ವರ್ಷ ಹೆಣ್ಣು ಮಗವಿನ ಕಣ್ಣಿಗೆ ತಾಗಿ ಕಾರ್ನಿಯಾಗೆ ಹಾನಿಯಾಗಿದೆ. ಇನ್ನೊಂದೆಡೆ ಹತ್ತು ವರ್ಷದ ಬಾಲಕನೊಬ್ಬ, ಪಟಾಕಿ ಹಚ್ಚುವಾಗ ಅದು ಸಿಡಿಯಲಿಲ್ಲ ಎಂದು ಹತ್ತಿರ ಹೋದಾಗ ಅದು ಸಿಡಿದು ಕಣ್ಣಿಗೆ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಪಟಾಕಿ ಸಿಡಿಸುವಾಗ ಪಾಲಕರು ಮತ್ತು ಪೋಷಕರು ಎಚ್ಚರಿಕೆ ವಹಿಸಬೇಕಿದ್ದು, ಮಕ್ಕಳನ್ನು ಸೂಕ್ಷ್ಮವಾಗಿ ಗಮನಿಸಬೇಕು. ಗಾಯಕ್ಕೆ ಸಂಬಂಧಿಸಿದ ಸಹಾಯಕ್ಕಾಗಿ, ಜನರು ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಬಹುದು: 080-69038900 ಮತ್ತು 9739883996 (ಶಂಕರ ಕಣ್ಣಿನ ಆಸ್ಪತ್ರೆ), 83101 60947 (ಡಾ ಅಗರ್ವಾಲ್ಸ್ ಕಣ್ಣಿನ ಆಸ್ಪತ್ರೆ).

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com