ಬೆಂಗಳೂರು: ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಒತ್ತಾಯಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ವಕ್ಫ್ ಮಂಡಳಿಯು ದೇಶದಾದ್ಯಂತ ರೈತರು, ಭೂಮಾಲೀಕರು, ದೇವಸ್ಥಾನಗಳು, ಟ್ರಸ್ಟ್‌ಗಳು ಮತ್ತು ಮಠಗಳ ಜಮೀನುಗಳ ಮೇಲೆ ಹಕ್ಕು ಸಾಧಿಸುವ ಅನಿಯಂತ್ರಿತ, ಸ್ಪಷ್ಟ ಉಲ್ಲಂಘನೆಯನ್ನು ಗಮನದಲ್ಲಿಟ್ಟುಕೊಂಡು ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಜಿ ಅವರಿಗೆ ಪತ್ರ ಬರೆದಿದ್ದೇನೆ.
ದೇಶದ ಎಲ್ಲಾ ಪ್ರಜೆಗಳಿಗೂ ಭೂಮಿಯ ಮೇಲೆ ಸಮಾನ ಹಕ್ಕಿದೆ. ವಕ್ಫ್‌ನ ಉದ್ದೇಶವು ಕಲ್ಯಾಣ ಮತ್ತು ಸಮಾಜ ಸೇವೆಯಾಗಿದ್ದರೆ, ಭಾರತವು ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಪಕ್ಷಪಾತ ಮತ್ತು ಧಾರ್ಮಿಕ ತಾರತಮ್ಯವಿಲ್ಲದೆ ಇದನ್ನು ಮಾಡಬೇಕಾಗಿದೆ. ದೇಶದ ಸಂಪನ್ಮೂಲ ಯಾವುದೇ ಸೀಮಿತ ಕೋಮಿಗೆ ಸೇರುವುದು ಜಾತ್ಯತೀತ ತತ್ವದ ವಿರುದ್ಧವಾಗಿರುತ್ತದೆ. ಆದ್ದರಿಂದ, ಅದನ್ನು ಸದ್ಬಳಕೆ ಮಾಡುವ ಸದುದ್ದೇಶದಿಂದ ಪ್ರಧಾನಿ ಅವರಿಗೆ ಮನವಿ ಸಲ್ಲಿಸಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.
Advertisement