ಉಡುಪಿ: ಪ್ರತ್ಯೇಕ ಘಟನೆಗಳಲ್ಲಿ ಆತ್ಮಹತ್ಯೆಯಿಂದ ಇಬ್ಬರು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ 20 ವರ್ಷದ ವರುಣ್ ಎಂಬ ಯುವಕ ಮಲ್ಪೆ ಬಳಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ವರುಣ್‌ನ ತಂದೆ, ತಾಯಿ ಮತ್ತು ಸಹೋದರಿ ಗುರುವಾರ ಬೆಳಿಗ್ಗೆ 10.30 ರ ಸುಮಾರಿಗೆ ಉಪ್ಪೂರ್‌ಗೆ ಹೋಗಿದ್ದರು. ಮಧ್ಯಾಹ್ನ 12.30ಕ್ಕೆ ಮನೆಗೆ ಮರಳಿದಾಗ ಬೆಡ್ ರೂಂನ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವರುಣ್ ದೇಹ ಪತ್ತೆಯಾಗಿದೆ.
ತಕ್ಷಣ ಆತನನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಪ್ರಯತ್ನಿಸಲಾಯಿತು.ಆದರೆ ಅಷ್ಟರಾಗಲೇ ಆತ ಕೊನೆಯುಸಿರೆಳೆದಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಮಲ್ಪೆ ಪೊಲೀಸರು ಬಿಎನ್‌ಎಸ್‌ಎಸ್ ಸೆಕ್ಷನ್ 194 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮತ್ತೊಂದು ಘಟನೆಯಲ್ಲಿ ಉಮೇಶ್ ಎಂಬ 52 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಬ್ರಿ ಸಮೀಪದ ನಾಡ್ಪಾಲು ಗ್ರಾಮದ ಉಮೇಶ್ ಕುಡಿತದ ಚಟದಿಂದ ಬಳಲುತ್ತಿದ್ದರು. ಅಲ್ಲದೇ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಸೋಮೇಶ್ವರ ಪಟ್ಟಣದ ರೈಸ್ ಮಿಲ್ ಬಳಿಯ ಬಾವಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಹೆಬ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement