ರಾಜ್ಯ ಸರ್ಕಾರದಿಂದ ವಕ್ಫ್ ಕಾನೂನು ದುರ್ಬಳಕೆ: ಸಂಸದ ಬಸವರಾಜ ಬೊಮ್ಮಾಯಿ ಕಿಡಿ

ರಾಜ್ಯದಲ್ಲಿ ಕಂದಾಯ ಕಾನೂನುಗಳನ್ನು ನಿರ್ಲಕ್ಷಿಸಲಾಗುತ್ತಿದ್ದು, ಇದರಿಂದ ರಾಜ್ಯಾದ್ಯಂತ ಕೃಷಿ ಭೂಮಿಯನ್ನು ವಕ್ಫ್ ಆಸ್ತಿ ಎಂದು ತಪ್ಪಾಗಿ ಹೆಸರಿಸಲಾಗುತ್ತಿದೆ. ಜಮೀನು ವಿಚಾರದಲ್ಲಿ ಕಂದಾಯ ದಾಖಲೆಗಳನ್ನು ನಿರ್ಣಾಯಕ ಎಂದು ಪರಿಗಣಿಸಬೇಕು.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Updated on

ಶಿಗ್ಗಾಂವಿ: ರಾಜ್ಯ ಸರಕಾರ ವಕ್ಫ್ ಕಾನೂನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಭೂದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ರೈತರಿಗೆ ನ್ಯಾಯ ದೊರಕಿಸಿಕೊಡುವಂತೆ ಗುರುವಾರ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಂದಾಯ ಕಾನೂನುಗಳನ್ನು ನಿರ್ಲಕ್ಷಿಸಲಾಗುತ್ತಿದ್ದು, ಇದರಿಂದ ರಾಜ್ಯಾದ್ಯಂತ ಕೃಷಿ ಭೂಮಿಯನ್ನು ವಕ್ಫ್ ಆಸ್ತಿ ಎಂದು ತಪ್ಪಾಗಿ ಹೆಸರಿಸಲಾಗುತ್ತಿದೆ. ಜಮೀನು ವಿಚಾರದಲ್ಲಿ ಕಂದಾಯ ದಾಖಲೆಗಳನ್ನು ನಿರ್ಣಾಯಕ ಎಂದು ಪರಿಗಣಿಸಬೇಕು. ಆದರೆ, ಆ ಕಾನೂನು ಕಡೆಗಣಿಸಿ ಅದಾಲತ್ ಪ್ರಕಾರ ಆಗಿದ್ದೇ ಅಂತಿಮ ಎಂದು ಮಾಡುತ್ತಿದ್ದಾರೆಂದು ಕಿಡಿಕಾರಿದರು.

ಹಿಂದೆ ಇಂತಹ ಪ್ರಕರಣ ಆದಾಗ ಯಾರ್ಯಾರು ನ್ಯಾಯಾಲಯಕ್ಕೆ ಹೋಗಿದ್ದಾರೆ ಅವರಿಗೆಲ್ಲ ನ್ಯಾಯ ಸಿಕ್ಕಿದೆ. ಯಾರೋ ಒಬ್ಬರು ಅರ್ಜಿ ಹಾಕಿದರೆ ಇಡೀ ರಾಜ್ಯದ ರೈತರ ಆಸ್ತಿಗೆ ವಕ್ಪ್ ಆಸ್ತಿಯೆಂದು ರೈತರಿಗೆ ನೊಟೀಸ್ ನೀಡುವ ಮೂಲಕ ಸರ್ಕಾರದಿಂದ ಅರಾಜಕತೆ, ಗಾಬರಿ ಉಂಟು ಮಾಡುವ ಕೆಲಸ ನಡೆದಿದೆ. ಇದೊಂದು ಬೇಜವಾಬ್ದಾರಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ಗೆಜೆಟ್ ನೋಟಿಫಿಕೇಶನ್ ಆದ ಬಳಿಕ ತರಾತುರಿಯಲ್ಲಿ ಡಿಸಿಗಳು ಕಾರ್ಯ ಪೃವೃತ್ತರಾಗಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಅವರಿಗೆ ಅಷ್ಟಾದರೂ ಜ್ಞಾನ ಇರಬೇಕಲ್ಲವೇ? ಮೊದಲು ಇದರ ಬಗ್ಗೆ ಸಮಗ್ರವಾಗಿ ಪರಿಶೀಲನೆ ಆಗಬೇಕು ಎಂದು ಅಗ್ರಹಿಸಿದರು.

ಇದೇ ವೇಳೆ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ನಡೆದ ಗಲಾಟೆಗೆ ಸರ್ಕಾರವೇ ನೇರ ಕಾರಣ ಎಂಗು ಆರೋಪಿಸಿದರು.

ಬಸವರಾಜ ಬೊಮ್ಮಾಯಿ
ವಕ್ಫ್​ ವಿವಾದ: ಸಚಿವ ಜಮೀರ್ ವಜಾಗೆ ಆಗ್ರಹ, ನವೆಂಬರ್ 4ರಂದು BJP ಪ್ರತಿಭಟನೆ

ಜನರ ಮೇಲೆ‌ ಕಾನೂನು ಹೇರುವ ಕೆಲಸ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಎಲ್ಲರೂ ಸೌಹಾರ್ದತೆಯಿಂದ ಜೀವನ ನಡೆಸುತ್ತಾರೆ. ಸೌಹಾರ್ದತೆ ಕಲುಕುವ ಕೆಲಸ ನಡೆದಿದೆ, ಈ ಸರ್ಕಾರ ಬಂದಾಗಿನಿಂದ ತುಷ್ಟೀಕರಣ ನಡೆದಿದೆ. ಮುಖ್ಯಮಂತ್ರಿಗಳು ರೈತರಿಗೆ ನೀಡಿರುವ ನೊಟೀಸ್ ವಾಪಸ್ ಪಡೆಯುವುದಾಗಿ ಹೇಳಿದ್ದಾರೆ. ಆದರೆ, ಇನ್ನೂ ವಾಪಸ್ ಪಡೆಯುವ ಕೆಲಸ ಆಗಿಲ್ಲ. ಸಿಎಂ ನೇರವಾಗಿ ಮದ್ಯ ಪ್ರವೇಶ ಮಾಡಬೇಕು ಎಂದು ಒತ್ತಾಯಿಸಿದರು.

ನಾಯಕತ್ವ ಭಪಡಿಸಿಕೊಳ್ಳಲು‌ ಸಿಎಂ ಅವರಿಂದ ತುಷ್ಟೀಕರಣ ರಾಜಕೀಯ ನಡೆದಿದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಎಲೆಕ್ಷನ್ ಇರಲಿ, ಇರದೇ ಇರಲಿ ತುಷ್ಟೀಕರಣ ನಡೆದೇ ಇದೆ. ಈಗ ಉಪ ಚುನಾವಣೆಯಲ್ಲಿ ಲಾಭ‌ ಪಡೆಯುವ ಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

ಶಕ್ತಿ ಯೋಜನೆ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಗ್ಯಾರಂಟಿ ಯೋಜನೆಗಳು ಅಂದು ಚುನಾವಣೆಗಾಗಿ ರಾಜಕೀಯ ಲಾಭಕ್ಕಾಗಿ ಮಾಡಿದ್ದು, ಇದಕ್ಕೆ ಯಾವುದೇ ಪೂರ್ವ ತಯಾರಿ ಇರಲಿಲ್ಲ. ಜನಪ್ರಿಯತೆಗೆ ಮಾಡಿದ್ದಾರೆ. ಈಗ ಅವರ ಹಣಕಾಸಿ ಪರಿಸ್ಥಿತಿ ಸರಿಯುಲ್ಲ. ಅವರ ಶಾಸಕರೇ ಅವರನ್ನು ದೂರುತ್ತಿದ್ದಾರೆ. ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಗ್ಯಾರೆಂಟಿ ಯೋಜನೆಗಳ ಮರುಮೌಲ್ಯಮಾಪನ ಮಾಡುವುದಾಗಿ ಹೇಳುತ್ತಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com